ವಿಜೃಂಭಣೆಯಿಂದ‌ ನೆರವೇರಿದ ಲೋಕಕಲ್ಯಾಣಾರ್ಥ ಶ್ರೀ ಭೂನೀಳಾಸಮೇತ “ಶ್ರೀ ಲಕ್ಷ್ಮೀನರಸಿಂಹಸ್ವಾಮಿ ತಿರುಕಲ್ಯಾಣೋತ್ಸವ”

ದೊಡ್ಡಬಳ್ಳಾಪುರ ನಗರದ 29ನೇ ಡಿವಿಜನ್ ಭೋವಿ (ವಡ್ಡರ)ಪೇಟೆಯಲ್ಲಿನ ಶ್ರೀ ಶ್ರೀ ಭೂನೀಳಾಸಮೇತ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ಹೋಳಿ (ಕದರಿ) ಹುಣ್ಣಿಮೆ ಪ್ರಯುಕ್ತ ಮಾ.2, 3ರಂದು ಲೋಕಕಲ್ಯಾಣಾರ್ಥ ಶ್ರೀ ಭೂನೀಳಾಸಮೇತ “ಶ್ರೀ ಲಕ್ಷ್ಮೀನರಸಿಂಹಸ್ವಾಮಿ ತಿರುಕಲ್ಯಾಣೋತ್ಸವ” ಭಕ್ತರ ಸಮ್ಮುಖದಲ್ಲಿ ಬಹಳ ವಿಜೃಂಭಣೆಯಿಂದ‌ ನೆರವೇರಿತು.

ಮಾ.2ರ ಬೆಳಿಗ್ಗೆ 6-00 ಗಂಟೆಗೆ ಸುಪ್ರಭಾತ ಸೇವೆ, ಶ್ರೀ ವಿಶ್ವಸೇನ ಪೂಜೆ, ಶ್ರೀ ಭಗವತ್ ವಾಸುದೇವ ಪುಣ್ಯಾಹ ವಾಚನ, ಶ್ರೀ ಮಹಾಲಕ್ಷ್ಮೀನರಸಿಂಹಸ್ವಾಮಿ ಪ್ರಧಾನ ಕಳಸ ಸ್ಥಾಪನೆ, ಸಕಲ ಇಷ್ಟಾರ್ಥ ಸಿದ್ದಿ ಶ್ರೀ ಲಕ್ಷ್ಮೀನರಸಿಂಹ ಪ್ರಧಾನ ಹೋಮ, ಮಹಾಸುದರ್ಶನ ಹೋಮ, ಶಾಂತಿ ಹೋಮ, ಪೂರ್ಣಾಹುತಿ ನಡೆಸಲಾಯಿತು‌.

ಮಧ್ಯಾಹ್ನ 12-30 ಗಂಟೆಗೆ ಮಂತ್ರ ಪುಷ್ಪ ಶಾತುಮುರೈ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ, ಸಂಜೆ 6-00 ಗಂಟೆಗೆ ವೇದ-ಸ್ತೋತ್ರ-ಪ್ರಬಂಧ ಪಾರಾಯಣ ಶ್ರೀ ಮಹಾಲಕ್ಷ್ಮೀ ಪ್ರಧಾನ ಹೋಮ, ಮಹಾಪೂರ್ಣಾಹುತಿ ರಾತ್ರಿ 8-00 ಗಂಟೆಗೆ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು.

ಮಾ.3ರ ಬೆಳಿಗ್ಗೆ 6-00 ಗಂಟೆಗೆ ಸುಪ್ರಭಾತ ಸೇವೆ, ಸ್ವಾಮಿಯವರಿಗೆ ಪಂಚಾಮೃತ ಅಭಿಷೇಕ ಹಾಗೂ ವಿಶೇಷ ಅಲಂಕಾರ. ಬೆಳಿಗ್ಗೆ 9-00 ಗಂಟೆಗೆ ಸಾಮೂಹಿಕ ಶ್ರೀ ಸತ್ಯನಾರಾಯಣಸ್ವಾಮಿ ಪೂಜೆ, ಮಧ್ಯಾಹ್ನ 12-00 ಗಂಟೆಗೆ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ಮಾಡಲಾಯಿತು.

ಲೋಕಕಲ್ಯಾಣಾರ್ಥ ಶ್ರೀ ಭೂನೀಳಾಸಮೇತ “ಶ್ರೀ ಲಕ್ಷ್ಮೀನರಸಿಂಹಸ್ವಾಮಿ ತಿರುಕಲ್ಯಾಣೋತ್ಸವ”. ರಾತ್ರಿ 8ಕ್ಕೆ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ‌ ಏರ್ಪಡಿಸಲಾಗಿತ್ತು.

ಲಕ್ಷ್ಮೀನರಸಿಂಹಸ್ವಾಮಿ ತಿರುಕಲ್ಯಾಣ ಮಹೋತ್ಸವ ಕಾರ್ಯಕ್ರಮದಲ್ಲಿ ಸ್ಥಳೀಯ ನಿವಾಸಿಗಳು, ಭಕ್ತಾಧಿಗಳು ಭಾಗವಹಿಸಿ ದೇವರ ಕೃಪೆಗೆ ಪಾತ್ರರಾದರು.

Ramesh Babu

Journalist

Recent Posts

ಬೀದಿ ನಾಯಿಗಳ ದಾಳಿಗೆ 10ಕ್ಕೂ ಹೆಚ್ಚು ಕುರಿ, ಮೇಕೆ ಬಲಿ!: ದೂರು ನೀಡಿದರೂ ಕ್ರಮ ಕೈಗೊಳ್ಳದ ಪಂಚಾಯಿತಿ ಅಧಿಕಾರಿಗಳ ವಿರುದ್ಧ ರೈತರ ಆಕ್ರೋಶ

ದೇವನಹಳ್ಳಿ: ಬೀದಿ ನಾಯಿಗಳ ಗುಂಪೊಂದು ಕುರಿ, ಮೇಕೆಗಳ ಕೊಟ್ಟಿಗೆಗೆ ನುಗ್ಗಿ ದಾಳಿ ನಡೆಸಿದ ಪರಿಣಾಮ 10ಕ್ಕೂ ಹೆಚ್ಚು ಕುರಿ ಮತ್ತು…

8 hours ago

ಅಕ್ರಮ ವಿದೇಶಿಗರ ಬೇಟೆಗೆ ಪೊಲೀಸ್ ಬಲೆ!- ಕೈಗಾರಿಕಾ ವಲಯಗಳ ಬಾಡಿಗೆ ಮನೆ, ಗೆಸ್ಟ್ ಗೌಸ್, ಲಾಡ್ಜ್‌ಗಳ ಮೇಲೆ ಹದ್ದಿನ ಕಣ್ಣು-ಡಿವೈಎಸ್ಪಿ ಪಾಂಡುರಂಗ

ಸಮರ್ಪಕ ದಾಖಲೆಗಳಿಲ್ಲದೆ ವಿದೇಶಗಳಿಂದ ಬಂದು ಜಿಲ್ಲೆಯಲ್ಲಿ ನೆಲೆಸಿರುವವರ ಪತ್ತೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.…

13 hours ago

ಗುತ್ತಿಗೆದಾರರಿಂದ ಲಂಚ ವಸೂಲಿ ಶಂಕೆ; ಎಂಜಿನಿಯರ್ ಬಳಿ 21.88 ಲಕ್ಷ ನಗದು ಪತ್ತೆ!

ಒಡಿಶಾ: ಗುತ್ತಿಗೆದಾರರಿಂದ ಲಂಚ ಪಡೆಯುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಒಡಿಶಾ ವಿಜಿಲೆನ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ,…

1 day ago

ಕೆಲವು ಶಿಕ್ಷಕರ ಮತ ಮಾರಾಟ……

ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯ ಆಯ್ಕೆಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಯಲ್ಲಿಯೂ ಹಣದ ಹೊಳೆ ಹರಿಯುತ್ತಿದೆ. ಇದು ಹೊಸದೇನು…

2 days ago

ಸಚಿವ ಜಾರ್ಜ್ ಜತೆ ಶಾರದೆಯ ದರ್ಶನ ಪಡೆದ ರಾಜ್ಯಪಾಲರಾದ ಡಾ. ಸುಧಾ ಯಾದವ್

ನೂತನ ರಾಜ್ಯಪಾಲರಾಗಿ ಅಧಿಕಾರ ಸ್ವೀಕರಿಸಿದ‌ ದಿನವೇ ಡಾ. ಸುಧಾ ಯಾದವ್ ಅವರು ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್…

2 days ago

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

2 days ago