ವಿಟಿಯು ನಾಲ್ಕನೇ ರ್ಯಾಂಕ್ ಪಡೆದ ವಿದ್ಯಾರ್ಥಿಗೆ ಸನ್ಮಾನ: ರ್ಯಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದಿರುವುದು ಬಹಳ ಹೆಮ್ಮೆಯ ವಿಷಯ- ರಾಜೇಂದ್ರ

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಅಡಿಯಲ್ಲಿ ರಾಜ್ಯಾದ್ಯಂತ ಸುಮಾರು 200ಕ್ಕೂ ಹೆಚ್ಚು ಕಾಲೇಜುಗಳು ಕಾರ್ಯನಿರ್ವಹಿಸುತ್ತಿವೆ. ಅದರಲ್ಲಿ ನಮ್ಮ ಆರ್.ಎಲ್ ಜಾಲಪ್ಪ ಸಮೂಹ ಸಂಸ್ಥೆಗಳ ತಾಂತ್ರಿಕ ಕಾಲೇಜು ಒಂದು. ನಮ್ಮ ಕಾಲೇಜಿನ ಮೆಕಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಮೂಲ ಪವನ್ ಕುಮಾರ್ ರೆಡ್ಡಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ನಾಲ್ಕನೇ ರ್ಯಾಂಕ್ ಪಡೆದಿದ್ದಾರೆ. ಉತ್ತಮ ರ್ಯಾಂಕ್ ಪಡೆದು ಕಾಲೇಜಿಗೆ ಕೀರ್ತಿ ತಂದಿರುವುದು ಬಹಳ ಹೆಮ್ಮೆಯ ವಿಷಯ ಎಂದು ಕಾಲೇಜು ನಿರ್ದೇಶಕ ರಾಜೇಂದ್ರ ಹೇಳಿದರು.

ವಿದ್ಯಾರ್ಥಿ ಮೂಲ ಪವನ್ ಕುಮಾರ್ ರೆಡ್ಡಿ ಮೆಕಾನಿಕಲ್ ಇಂಜಿನಿಯರಿಂಗ್ ನಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯಕ್ಕೆ ನಾಲ್ಕನೇ ರ್ಯಾಂಕ್ ಪಡೆದಿದ್ದಾರೆ. ಉನ್ನತ ಸಾಧನೆಗೈದ ವಿದ್ಯಾರ್ಥಿ ಮೂಲ ಪವನ್ ಕುಮಾರ್ ರೆಡ್ಡಿಯನ್ನ ಕಾಲೇಜು ನಿರ್ದೇಶಕ ರಾಜೇಂದ್ರ, ಪ್ರಾಧ್ಯಪಕರಾದ ಸುನೀಲ್ ಕುಮಾರ್, ದಾದಾಫೀರ್ ಸೇರಿದಂತೆ ಅಭಿನಂದಿಸಿದರು. ನಂತರ ತೆರದ ವಾಹನದಲ್ಲಿ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳಿಂದೆ ನಮ್ಮ ಕಾಲೇಜಿನ ವಿದ್ಯಾರ್ಥಿಗೆ ಐದನೇ ರ್ಯಾಂಕ್ ಬಂದಿತ್ತು. ಮುಂದಿನ‌ ದಿನಗಳಲ್ಲಿ ಮೊದಲ ರ್ಯಾಂಕ್ ಪಡೆಯಲು ವಿದ್ಯಾರ್ಥಿಗಳನ್ನು ತಯಾರು ಮಾಡಲಾಗುವುದು ಎಂದರು.

ಕಾಲೇಜಿನಲ್ಲಿ ಉತ್ತಮ ಪರಿಣತಿ ಪಡೆದ ಬೋಧಕರ ಸಿಬ್ಬಂದಿ ಇದೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಈ ವಿದ್ಯಾರ್ಥಿಯನ್ನು‌ ಉಳಿದ ಎಲ್ಲಾ ವಿದ್ಯಾರ್ಥಿಗಳು ಮಾದರಿ, ಸ್ಫೂರ್ತಿಯಾಗಿ ತೆಗೆದುಕೊಂಡು ಉತ್ತಮ ಅಂಕ ಪಡೆದು ತಂದೆ-ತಾಯಿ, ಕಾಲೇಜಿಗೆ ಕೀರ್ತಿ ತರಬೇಕು ಎಂದು ಕೋರಿದರು.

ಅಭಿನಂದನೆ ಸ್ವೀಕರಿಸಿ ಮಾತನಾಡಿದ ವಿದ್ಯಾರ್ಥಿ ಮೂಲ ಪವನ್ ಕುಮಾರ್ ರೆಡ್ಡಿ, ನನ್ನ ಈ ಎಲ್ಲಾ ಸಾಧನೆಗೆ ನನ್ನ ತಂದೆ-ತಾಯಿ, ಕಾಲೇಜಿನ ಆಡಳಿತ ಮಂಡಳಿ ಹಾಗೂ ಗುರುಗಳು. ರ್ಯಾಂಕ್ ಪಡೆಯುವ ನಿರೀಕ್ಷೆ ಇತ್ತು. ಅದರಂತೆ ನಾಲ್ಕನೇ ರ್ಯಾಂಕ್ ಪಡೆದಿರುವುದಕ್ಕೆ ಖುಷಿ ಇದೆ. ಕಠಿಣ ಪರಿಶ್ರಮದಿಂದ ಈ ಸಾಧನೆ ಮಾಡುವುದಕ್ಕೆ ಸಾಧ್ಯವಾಯಿತು. ಮೆಕಾನಿಕಲ್ ಇಂಜಿನಿಯರಿಂಗ್ ನಲ್ಲಿ ಇನ್ನೂ ಹೆಚ್ಚು ಪರಿಣತಿ ಪಡೆದು ಉತ್ತಮ ಸಾಧನೆ ಮಾಡಲಾಗುವುದು ಎಂದರು.

ಈ ವೇಳೆ ವಿದ್ಯಾರ್ಥಿ ತಂದೆ ಮೂಲ ಎರಕಲ ರೆಡ್ಡಿ, ತಾಯಿ ಮೂಲ ನಾಗರತ್ನಮ್ಮ, ಪ್ರಾಂಶುಪಾಲ ಸೇರಿದಂತೆ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರ ತಾಲೂಕಿನಿಂದ ಜಿಲ್ಲಾಸ್ಪತ್ರೆ ಕೈತಪ್ಪಲ್ಲ: ಕೈತಪ್ಪಲು ನಾನು ಬಿಡೋದಿಲ್ಲ- ತಾಲೂಕಿನಲ್ಲಿ ಜಿಲ್ಲಾಸ್ಪತ್ರೆ  ಕರ್ತವ್ಯ ನಿರ್ವಹಿಸುವಂತೆ ಮಾಡಿಯೇ ತೀರುತ್ತೇನೆ- ಶಾಸಕ ಧೀರಜ್ ಮುನಿರಾಜ್

ದೊಡ್ಡಬಳ್ಳಾಪುರ ತಾಲೂಕಿಗೆ ಮಂಜೂರಾಗಿದ್ದ ಜಿಲ್ಲಾಸ್ಪತ್ರೆಯನ್ನು ದೇವನಹಳ್ಳಿಗೆ ವರ್ಗಾವಣೆ ಮಾಡಲಾಗಿದೆ ಎಂಬ ಸುಳ್ಳು ಮಾಹಿತಿ ತಾಲೂಕಿನ ಸಾರ್ವಜನಿಕ ವಲಯದಲ್ಲಿ ಚರ್ಚೆಯಾಗುತ್ತಿದೆ. ಇದಕ್ಕೆ…

4 hours ago

ಆಶ್ರಯ ಮನೆಗಳು ಬಲಾಢ್ಯರ ಪಾಲು ಆರೋಪ:

ದೊಡ್ಡಬಳ್ಳಾಪುರ : ಬಡವರು ನಿರ್ಗತಿಕರಿಗೆ ಹಂಚಿಕೆ ಮಾಡಲಾದ ಆಶ್ರಯ ಮನೆಗಳು ಬಲಾಢ್ಯರ ಪಾಲಾಗಿವೆ, ಅಕ್ರಮವಾಗಿ ಮನೆಗಳ ಬೀಗ ಹೊಡೆದು ಅಶ್ರಯ…

5 hours ago

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ: ಸಭೆಯ ಮುಖ್ಯಾಂಶಗಳು ಇಲ್ಲಿವೆ ಓದಿ…

ಇಂದು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯ…

19 hours ago

ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲಾ ಬಾಲಕಾರ್ಮಿಕ ಯೋಜನೆಯಲ್ಲಿ ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಗೌರವಧನ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು…

20 hours ago

ಸ್ನೇಹಿತರ ದಿನದ ಅಂಗವಾಗಿ ನಂದಿಬೆಟ್ಟಕ್ಕೆ ತೆರಳಿದ್ದ ಸ್ನೇಹಿತರು: ನಂದಿ ಬೆಟ್ಟದ ತಿರುವು ರಸ್ತೆಯಲ್ಲಿ ಬೈಕ್ ಅಪಘಾತ: ಇಬ್ಬರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ

ನಂದಿ ಬೆಟ್ಟದ ತಿರುವು ರಸ್ತೆಯಲ್ಲಿ ಬೈಕ್ ಅಪಘಾತವಾಗಿದ್ದು, ಬೈಕ್ ನಲ್ಲಿದ್ದ ಇಬ್ಬರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ನಂದಿ ಬೆಟ್ಟದ…

1 day ago

ಭೂಗಳ್ಳರಿಂದ 8 ಎಕರೆ ಜಮೀನು ರಕ್ಷಣೆ: ಆಶ್ರಯ ಯೋಜನೆಗೆ ಭೂಮಿ ಮಂಜೂರು: ಆಶ್ರಯ ಯೋಜನೆಯ ಯಶಸ್ವಿ ಕಾರ್ಯಕ್ರಮ ಆಯೋಜನೆ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಜೂರು ಗ್ರಾಮದ ಸರ್ವೇ ನಂಬರ್ 33ರಲ್ಲಿ ಒಟ್ಟು 120…

2 days ago