ದೊಡ್ಡಬಳ್ಳಾಪುರ: ಮನೆಯವರಿಗೆ ವಿಡಿಯೋ ಕಾಲ್ ಮಾಡಿದ ಬಳಿಕ ಉತ್ತರ ಪ್ರದೇಶ ಮೂಲದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಶವಗಾರದ ಸಮೀಪದ ನಾಗರಕೆರೆ ಏರಿಯಾ ಬಳಿ ಅ.10ರ ರಾತ್ರಿ ನಡೆದಿದೆ.
ಮೃತನನ್ನು ಉತ್ತರ ಪ್ರದೇಶ ಮೂಲದ ಉಪೇಂದ್ರ (30) ಎಂದು ಗುರುತಿಸಲಾಗಿದೆ. ಇವರು ದೊಡ್ಡಬಳ್ಳಾಪುರದಲ್ಲಿ ಮಗ್ಗದ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಇತ್ತೀಚಿನ ದಿನಗಳಲ್ಲಿ ಉಪೇಂದ್ರ ಅವರು ತಮ್ಮೊಂದಿಗೆ ಇದ್ದವರ ಬಳಿ ಐದಾರು ಬಾರಿ, ‘ನಾನು ಸಾಯುತ್ತೇನೆ’ ಎಂದು ಹೇಳಿಕೊಂಡಿದ್ದರು ಎನ್ನಲಾಗಿದೆ. ಅಲ್ಲದೆ, ಅವರು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದವರಂತೆ ವರ್ತಿಸುತ್ತಿದ್ದರಂತೆ.
ಅ.10ರ ರಾತ್ರಿ ಮನೆಯವರಿಗೆ ವಿಡಿಯೋ ಕಾಲ್ ಮಾಡಿದ ಬಳಿಕ ನೇಣು ಬಿಗಿದುಕೊಂಡಿದ್ದಾರೆ ಎನ್ನಲಾಗಿದ್ದು, ಘಟನೆ ಇಂದು ಬೆಳಕಿಗೆ ಬಂದಿದೆ.
ಮಾಹಿತಿ ತಿಳಿದ ದೊಡ್ಡಬಳ್ಳಾಪುರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ದೊಡ್ಡಬಳ್ಳಾಪುರ: ರಸ್ತೆ ವಿಸ್ತರಣೆ ಕಾಮಗಾರಿ ವೇಳೆ ಮಣ್ಣಿನಡಿ ಹುದುಗಿಹೋಗುವ ಅಪಾಯದಲ್ಲಿದ್ದ ವಿಜಯನಗರ ಅರಸರ ಕಾಲದ ಆರು ಐತಿಹಾಸಿಕ ವೀರಗಲ್ಲುಗಳನ್ನು ಪುರಾತತ್ವ…
ಮುಂಬರುವ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳ ಹಿನ್ನೆಲೆಯಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸಿ ಪಕ್ಷ ಸಂಘಟನೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು…
ದೊಡ್ಡಬಳ್ಳಾಪುರ: ಮಳೆ ಕೊರತೆಯಿಂದ ಕೃಷಿ ಚಟುವಟಿಕೆಗಳು ಸಂಕಷ್ಟಕ್ಕೆ ಸಿಲುಕಿರುವ ಬೆನ್ನಲ್ಲೇ, ಮಾರುಕಟ್ಟೆಯಲ್ಲಿ ಟೊಮೆಟೊ ದರ ಕುಸಿತವೂ ರೈತರನ್ನು ಕಂಗಾಲಾಗಿಸಿದೆ. ಬೆಳೆ…
ಮನೆಯವರೆಲ್ಲರೂ ಸಿನಿಮಾ ನೋಡಲು ತೆರಳಿದ್ದ ವೇಳೆ ಮನೆಗೆ ನುಗ್ಗಿ 130 ಗ್ರಾಂ ಚಿನ್ನ ಕಳವು ಮಾಡಿದ್ದ ಆರೋಪಿಯೊಬ್ಬ, ಮನೆ ಮಾಲೀಕನ…
ಡ್ರಗ್ಸ್ ಮುಕ್ತ ಭಾರತ, ವ್ಯಸನ ಮುಕ್ತ ಕರ್ನಾಟಕ........ ಹೀಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಘೋಷಿಸಿವೆ. ಇನ್ನು ಕೆಲವೇ ವರ್ಷಗಳಲ್ಲಿ…
ದೇಗುಲದ ಪ್ರಸಾದದಿಂದ ಹೊಟ್ಟೆ ತುಂಬಿಸಿಕೊಳ್ಳುವುದು, ದೇವಸ್ಥಾನದ ಬೀದಿಯಲ್ಲಿ ಭಿಕ್ಷಾಟನೆ ಮಾಡುವುದು, ರಾತ್ರಿ ವೇಳೆ ಬಂಡೆಗಳ ಪೊಟರೆ ಹಾಗೂ ಪೊದೆಗಳ ನಡುವೆ…