ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ.
ಥಾಯ್ಲೆಂಡ್ ನಿಂದ ತಡ ರಾತ್ರಿ 11:45 ರ ವಿಮಾನದಲ್ಲಿ ಕೆಐಎಬಿಗೆ ಆಗಮಿಸಿದ್ದಾರೆ. ಕೆಂಪೇಗೌಡ ಏರ್ಪೋಟ್ ನಿಂದ ಕುಟುಂಬದ ಜೊತೆ ಮನೆಯತ್ತ ಕಾರಿನಲ್ಲಿ ಪ್ರಯಾಣ ಮಾಡಿದ್ದಾರೆ.
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಹೈಕೋರ್ಟ್ ಜಾಮೀನು ಮೇಲೆ ಬಿಡುಗಡೆ ಹೊಂದಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್, ಪವಿತ್ರಾ ಗೌಡ ಸೇರಿ ಏಳು ಆರೋಪಿಗಳ ಜಾಮೀನು ರದ್ದು ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿತ್ತು.
ದರ್ಶನ್ ಸೇರಿ 7 ಆರೋಪಿಗಳ ಜಾಮೀನನ್ನು ರದ್ದು ಮಾಡುವಂತೆ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್ಗೆ ಮನವಿ ಮಾಡಿತ್ತು. ವಾದ-ಪ್ರತಿವಾದ ಆಲಿಸಿದ ಕೋರ್ಟ್ ಈಗ ತೀರ್ಪನ್ನು ಕಾಯ್ದಿರಿಸಿತ್ತು. 10 ದಿನಗಳ ಬಳಿಕವಷ್ಟೇ ದರ್ಶನ್ ಜಾಮೀನು ಅರ್ಜಿ ಬಗ್ಗೆ ತೀರ್ಪು ನೀಡುವುದಾಗಿ ಕೋರ್ಟ್ ಹೇಳಿದೆ.