ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ವಿಭಾಗವು ವಿದೇಶಿ ಮೂಲದ ಡ್ರಗ್ಸ್ ಸಾಗಾಟಗಾರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತನಿಂದ 2 ಕೋಟಿ ಮೌಲ್ಯದ ಎಂಡಿಎಂಎ ಹರಳು, ಬಿಳಿ ಹರಳು (676 ಗ್ರಾಂ) ಕಂದು ಹರಳು (926 ಗ್ರಾಂ), ಹಳದಿ ಹರಳು (112 ಗ್ರಾಂ) ಹಾಗೂ ಪಿಂಕ್ ಹರಳು (310 ಗ್ರಾಂ) ಸೇರಿದಂತೆ ಒಟ್ಟಾರೆಯಾಗಿ 2024ಗ್ರಾಂ ನಷ್ಟು ವಶಪಡಿಸಿಕೊಂಡಿದ್ದಾರೆ. ಇದರ ಜೊತೆಗೆ ಮೊಬೈಲ್ ಫೋನ್ ಹಾಗೂ ತೂಕದ ಯಂತ್ರವನ್ನು ವಶಪಡಿಸಿಕೊಂಡಿದ್ದಾರೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ತಿಳಿಸಿದರು.
ಅಕ್ರಮವಾಗಿ ಡ್ರಗ್ ಮಾರಾಟ ಮಾಡುತ್ತಿದ್ದ ಇಬ್ಬರನ್ನು ದೇವನಹಳ್ಳಿ ಪೊಲೀಸ್ ಠಾಣೆ ಅಧಿಕಾರಿಗಳು ಬಂಧಿಸಿದ್ದಾರೆ. ಇವರಿಂದ 80 ಲಕ್ಷ ರೂಪಾಯಿ ಮೌಲ್ಯದ 850 ಗ್ರಾಂನಷ್ಟು ಕೊಕೇನ್, 2 ಮೊಬೈಲ್, ವಿದ್ಯುನ್ಮಾನ ತೂಕ ಯಂತ್ರ, ಒಂದು ಬ್ಯಾಗ್ ಹಾಗೂ 85 ಜಿಪ್ ಕವರ್ ಗಳನ್ನು ಸಾಕ್ಷಿಯಾಗಿ ವಶಪಡಿಸಿಕೊಂಡಿದ್ದಾರೆ ಎಂದರು.
ಏ.3ರಂದು ಹೆಣ್ಣೂರು ಪೊಲೀಸ್ ಠಾಣೆ ಅಧಿಕಾರಿಗಳು ಹಲ್ಲೆಯ ವೈರಲ್ ವಿಡಿಯೋ ಜಾಡು ಹಿಡಿದು ತ್ವರಿತವಾಗಿ ಸಂತ್ರಸ್ತನನ್ನು ಪತ್ತೆಮಾಡಿದ್ದು, ಇದರಿಂದ 05 ಶಂಕಿತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಹಲ್ಲೆ ಮಾಡಿದ ವ್ಯಕ್ತಿ ಹಾಗೂ ಹಲ್ಲೆಗೊಳಗಾದವ ಇಬ್ಬರೂ ಪ್ರತಿಷ್ಠಿತ ಡೈರಿ ಕಂಪನಿಯ ಉದ್ಯೋಗಿಗಳಾಗಿದ್ದು, ಕೆಲಸದ ಸ್ಥಳದಲ್ಲಿನ ವೈಷಮ್ಯ ಹಾಗೂ ಹಣಕಾಸಿನ ವ್ಯವಹಾರದಿಂದಾಗಿ ಈ ಘಟನೆ ನಡೆದಿದೆ ಎಂಬುದು ತನಿಖೆಯಿಂದ ತಿಳಿದುಬಂದಿದೆ ಎಂದರು.
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲಗೇಜ್ ಟ್ರಾಲಿಯಲ್ಲಿ ಚಿನ್ನದ ಬಿಸ್ಕೆಟ್‌ಗಳನ್ನು ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಡೈರೆಕ್ಟರೇಟ್…
ನೆಲಮಂಗಲ: ಕಡಿಮೆ ಶಿಕ್ಷಣದ ನಡುವೆಯೂ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಸಾವಯವ ಪದ್ಧತಿಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಿರುವ ನೆಲಮಂಗಲ ತಾಲೂಕಿನ…
ನೊಬೆಲ್ ಪ್ರಶಸ್ತಿ ಘೋಷಣೆಯ ವಾರ....... ಈ ವಾರ ಪ್ರಕಟವಾಗುತ್ತಿರುವ ನೊಬೆಲ್ ಪ್ರಶಸ್ತಿಗಳ ಕಡೆಯೂ ಸ್ವಲ್ಪ ಮನಸ್ಸು ಹರಿಯಲಿ ಮತ್ತು ಅರಿಯಲಿ..........…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಕಳ್ಳತನ ಪ್ರಕರಣಗಳು ಮುಂದುವರಿದಿದ್ದು, ಎರಡು ದಿನಗಳ ಅಂತರದಲ್ಲಿ ಎರಡು ಮನೆಗಳ ಕಳ್ಳತನ ಹಾಗೂ ಬೈಕ್ ಕಳವು…