ರಸ್ತೆಗಳನ್ನು ದಾಟುವಾಗ, ವಾಹನಗಳನ್ನು ಚಲಾಯಿಸುವಾಗ ಕಡ್ಡಾಯವಾಗಿ ಸುರಕ್ಷತಾ ಸಂಚಾರಿ ನಿಯಮ ಪಾಲಿಸಬೇಕೆಂದು ಗ್ರಾಮಾಂತರ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ಹೇಳಿದರು.
ಯುವಜನ ಕಲ್ಯಾಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇಲಾಖೆ, ಎಸ್ ಡಿಯುಐಎಂ ನ ಸಹಯೋಗದೊಂದಿಗೆ ಇಂದು ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
18 ವರ್ಷ ಒಳಗಿನ ಮಕ್ಕಳಿಗೆ ವಾಹನ ಚಾಲನೆ ಮಾಡದಂತೆ ಪಾಲಕರು ನಿಗಾ ವಹಿಸಬೇಕು. ವಾಹನ ಚಾಲನೆ ಮಾಡುವ ವೇಳೆ ಸೀಟ್ ಬೆಲ್ಟ್ ಧರಿಸಿ, ದ್ವಿಚಕ್ರ ವಾಹನ ಚಾಲನೆ ವೇಳೆ ಮೊಬೈಲ್ ಫೋನ್ ಬಳಸಬಾರದು. ಪ್ರತಿಯೊಬ್ಬರೂ ಸಂಚಾರ ನಿಯಮ ಪಾಲಿಸಿ, ರಸ್ತೆ ಸುರಕ್ಷಿತವಾಗಿಸಿ ಎಂದು ಹೇಳಿದರು.
ನಂತರ ನಗರದ ವಿವಿಧ ವೃತ್ತಗಳು, ರಸ್ತೆಗಳು ಸೇರಿದಂತೆ ವಿವಿಧೆಡೆ ಹೋಗಿ ವಾಹನ ಸವಾರರಿಗೆ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಲಾಯಿತು.