ವಿದ್ಯಾರ್ಥಿಗಳಿಂದ ರಸ್ತೆ ಸುರಕ್ಷತೆ ಜಾಗೃತಿ ಅಭಿಯಾನ

ರಸ್ತೆಗಳನ್ನು ದಾಟುವಾಗ, ವಾಹನಗಳನ್ನು ಚಲಾಯಿಸುವಾಗ ಕಡ್ಡಾಯವಾಗಿ ಸುರಕ್ಷತಾ ಸಂಚಾರಿ ನಿಯಮ ಪಾಲಿಸಬೇಕೆಂದು ಗ್ರಾಮಾಂತರ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಸಾದಿಕ್ ಪಾಷಾ ಹೇಳಿದರು.

ಯುವಜನ‌ ಕಲ್ಯಾಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇಲಾಖೆ, ಎಸ್ ಡಿಯುಐಎಂ‌ ನ ಸಹಯೋಗದೊಂದಿಗೆ ಇಂದು ರಸ್ತೆ ಸುರಕ್ಷತಾ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

18 ವರ್ಷ ಒಳಗಿನ ಮಕ್ಕಳಿಗೆ ವಾಹನ ಚಾಲನೆ ಮಾಡದಂತೆ ಪಾಲಕರು ನಿಗಾ ವಹಿಸಬೇಕು. ವಾಹನ ಚಾಲನೆ ಮಾಡುವ ವೇಳೆ ಸೀಟ್‌ ಬೆಲ್ಟ್‌ ಧರಿಸಿ, ದ್ವಿಚಕ್ರ ವಾಹನ ಚಾಲನೆ ವೇಳೆ ಮೊಬೈಲ್‌ ಫೋನ್‌ ಬಳಸಬಾರದು. ಪ್ರತಿಯೊಬ್ಬರೂ ಸಂಚಾರ ನಿಯಮ ಪಾಲಿಸಿ, ರಸ್ತೆ ಸುರಕ್ಷಿತವಾಗಿಸಿ ಎಂದು ಹೇಳಿದರು.

ನಂತರ ನಗರದ ವಿವಿಧ ವೃತ್ತಗಳು, ರಸ್ತೆಗಳು ಸೇರಿದಂತೆ ವಿವಿಧೆಡೆ ಹೋಗಿ ವಾಹನ ಸವಾರರಿಗೆ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಲಾಯಿತು.

Ramesh Babu

Journalist

Recent Posts

ಸ್ಪರ್ಧಾತ್ಮಕ ಜಗತ್ತಿಗೆ ಮಕ್ಕಳನ್ನು ಅಣಿಗೊಳಿಸಿ- ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನೀಲಕಂಠ ಗವಾಂಕರ್ ಸಲಹೆ

ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…

17 hours ago

ಭಾರತೀಯರ ಆಹಾರ ವೈವಿಧ್ಯತೆ…. ರುಚಿ – ತೃಪ್ತಿ – ಸಮಾನತೆ…..

ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…

1 day ago

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

2 days ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

2 days ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

2 days ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

2 days ago