ಕೋಲಾರ: ವಿದ್ಯಾರ್ಥಿಗಳಿಗೆ ಬದುಕಿನ ಕಲೆ ಕಲ್ಪಿಸುವ ಜೊತೆಗೆ ಆರೋಗ್ಯಕರ ಸಮಾಜವನ್ನು ಕಟ್ಟುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್‌ನ ಶಿಸ್ತು ಮತ್ತು ಕೌಶಲ್ಯವು ಪ್ರಮುಖವಾದ ಪಾತ್ರವನ್ನು ವಹಿಸುತ್ತದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ರಾಜ್ಯ ಆಯುಕ್ತ ಪಿಜಿಆರ್.ಸಿಂಧ್ಯಾ ತಿಳಿಸಿದರು
ನಗರದ ಮಹಿಳಾ ಸಮಾಜ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ತಾಲೂಕು ಮಟ್ಟದ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮಕ್ಕಳಿಗೆ ಎಲ್ಲಾ ಹಂತದ ವಿದ್ಯೆಯನ್ನು ಕಲಿಸುತ್ತದೆ ಒಂದು ಜಾತಿ ಧರ್ಮಕ್ಕೆ ಸೀಮಿತಗೊಳಿಸದೇ ಎಲ್ಲಾ ವರ್ಗವನ್ನು ಈ ಸಂಸ್ಥೆಯೂ ಪ್ರತಿನಿಧಿಸುತ್ತದೆ. ಸತ್ಯದ ನಂಬಿಕೆಯನ್ನು ಹೊಂದುವಂತೆ ವಿಧ್ಯಾರ್ಥಿಗಳಿಗೆ ಮೂಡಿಸುತ್ತದೆ ಮಕ್ಕಳ ಮಧ್ಯೆ ಸಮನ್ವಯತೆಯಿಂದ ಬದುಕುವ ವಾತಾವರಣವನ್ನು ಸೃಷ್ಟಿಸುತ್ತದೆ ಅದರಿಂದಾಗಿ ಪ್ರತಿಯೊಬ್ಬರೂ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗೆ ಸೇರಿಸುವಂತೆ ಮಾಡಬೇಕು ಎಂದರು.
ದೇಶದಲ್ಲಿ ಸುಮಾರು ಒಂದು ಕೋಟಿಯಷ್ಟು ವಿಧ್ಯಾರ್ಥಿಗಳು ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಕೆಲಸ ಮಾಡುತ್ತಿದ್ದು ಉಳಿದ 39 ಕೋಟಿ ವಿಧ್ಯಾರ್ಥಿಗಳಿಗೆ ಮಾರ್ಗದರ್ಶನವನ್ನು ಮಾಡಬೇಕಾಗಿದೆ ಸ್ಕೌಟ್ಸ್ ಮತ್ತು ಗೈಡ್ಸ್ ಸೇರ್ಪಡೆಯಿಂದ ವಿದ್ಯಾರ್ಥಿಯ ವ್ಯಕ್ತಿತ್ವ ವಿಕಸನದ ಜತೆಗೆ ಕಲಿಕೆಯಲ್ಲೂ ಪ್ರಗತಿ ಸಾಧಿಸಲು ಸಾಧ್ಯ ಹಾಗಾಗಿ ಎಲ್ಲಾ ಶಾಲಾ ಮಕ್ಕಳು ಸ್ಕೌಟ್ಸ್ ಮತ್ತು ಗೈಡ್ಸ್‌ಗೆ ಸೇರ್ಪಡೆಗೊಳ್ಳಲು ಮುಂದಾಗಬೇಕು ಇದಕ್ಕೆ ಪ್ರತಿಯೊಂದು ವಿದ್ಯಾಸಂಸ್ಥೆಯ ಸಹಕಾರ ಮುಖ್ಯವಾಗಿದೆ ಈ ಬಾರಿ ರಾಜ್ಯದಲ್ಲಿ 10 ಲಕ್ಷದಷ್ಟು ವಿಧ್ಯಾರ್ಥಿಗಳನ್ನು ಹೊಸ ಸೇರ್ಪಡೆ ಮಾಡಿಕೊಳ್ಳುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಗೈಡ್ಸ್ ಸಂಸ್ಥೆಯ ನೂತನ ಜಿಲ್ಲಾ ಆಯುಕ್ತರು ಹಾಗೂ ಮಹಿಳಾ ಸಮಾಜ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿ ಎಂ ನವೀನಾ ಮಾತನಾಡಿ ಸ್ಕೌಟ್ಸ್ ಮತ್ತು ಗೈಡ್ಸ್‌ನಿಂದ ಮಕ್ಕಳಲ್ಲಿ ಪರಿಸರ ಪ್ರಜ್ಞೆ, ಸಂಸ್ಕೃತಿಯ ಅರಿವನ್ನು ಮೂಡಿಸುವ ಕೆಲಸವನ್ನು ಮಾಡುತ್ತದೆ ಪರಿಸರ ಉಳಿಸಿ-ಬೆಳೆಸುವ ಕಾರ್ಯವನ್ನು ಮಕ್ಕಳಲ್ಲಿ ತುಂಬಬೇಕು. ಆರೋಗ್ಯಕ್ಕೆ ಯೋಗ ಅತ್ಯವಶ್ಯಕವಾಗಿದ್ದು, ಯೋಗದ ಪರಿಕಲ್ಪನೆಯನ್ನೂ ಮಕ್ಕಳಲ್ಲಿ ಮೂಡಿಸುತ್ತದೆ ಮುಂದಿನ ಪೀಳಿಗೆಗೆ ಉತ್ತಮ ನಾಗರಿಕರನ್ನು ನಿರ್ಮಾಣ ಮಾಡುವ ಕೆಲಸಯ ಸ್ಕೌಟ್ಸ್ ಮತ್ತು ಗೈಡ್ಸ್‌ನಿಂದಾಗುತ್ತದೆ ಎಂದರು
ಈ ಸಂದರ್ಭದಲ್ಲಿ ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಆಯುಕ್ತ ಕೆ.ವಿ ಶಂಕರಪ್ಪ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಕೃಷ್ಣಮೂರ್ತಿ, ಮಹಿಳಾ ಸಮಾಜ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಎಂ ನಂದನಾ, ಸಂಸ್ಥೆಯ ಪಿ.ಆರ್.ಒ ಶ್ರೀನಿವಾಸ್, ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಪದಾಧಿಕಾರಿಗಳಾದ ಸುರೇಶ್, ಚಲ್ಲಯ್ಯ, ಇಂಚರ ನಾರಾಯಣಸ್ವಾಮಿ, ಸ್ಕೌಟ್ಸ್ ಬಾಬು, ರಾಮಚಂದ್ರ, ಉಮಾ, ಸಂಪತ್, ಸೋಮಶೇಖರ್, ನಾರಾಯಣಸ್ವಾಮಿ ಮುಂತಾದವರು ಇದ್ದರು
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…