
ಸರ್ದಾರ್ ವಲ್ಲಭಾಯ್ ಪಟೇಲ್ ಅವರ 150ನೇ ಜನ್ಮದಿನ ಹಾಗೂ ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಬೆಂಗಳೂರು ಜಿಲ್ಲಾ ಪೊಲೀಸ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಕರ್ನಾಟಕ ಲೋಕಾಯುಕ್ತ ವತಿಯಿಂದ ನಗರದ ಕೊಂಗಾಡಿಯಪ್ಪ ಕಾಲೇಜಿನಲ್ಲಿ ಶುಕ್ರವಾರ ಅರಿವು ಸಪ್ತಾಹ ನಡೆಯಿತು.
ಸಮಾಜದಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ, ಸುರಕ್ಷತೆ ಹಾಗೂ ಕಾನೂನು ಅರಿವು ಕುರಿತು ಡಿವೈಎಸ್ಪಿ ರವಿ.ಪಿ ಅವರು ತಿಳಿ ಹೇಳಿದರು. ಸಾಮಾಜಿಕ ಜವಾಬ್ದಾರಿ ಮತ್ತು ಸುರಕ್ಷತೆಯ ಜೊತೆಗೆ ವಿಶೇಷವಾಗಿ ಫೋಕ್ಸ್ ಕಾನೂನು, ಸಂಚಾರ ನಿಯಮ ಪಾಲನೆ ಅವಶ್ಯಕತೆ ಹಾಗೂ ಮಾದಕ ವಸ್ತು ಸೇವನೆಯಿಂದ ಆಗುವ ದುಷ್ಪರಿಣಾಮ ಬಗ್ಗೆ ವಿದ್ಯಾರ್ಥಿಗಳಿಗೆ ಮೂಡಿಸಿದರು.

ರಾಷ್ಟ್ರ ಏಕತೆಯ ಅಂಗವಾಗಿ ದೊಡ್ಡಬಳ್ಳಾಪುರ ನಗರ ಠಾಣೆ ಇನ್‌ಸ್ಪೆಕ್ಟರ್ ಅಮರೇಶ್ ಗೌಡ ಅವರು ವಿದ್ಯಾರ್ಥಿಗಳಿಗೆ ಏಕತಾ ಪ್ರತಿಜ್ಞೆ ಬೋಧಿಸಿದರು.
ಈ ವೇಳೆ ಪಿಎಸ್‌ಐ ಶುಭ, ಕೆಎಸ್‌ಆರ್‌ಟಿಸಿ ಡಿಪೊ ವ್ಯವಸ್ಥಾಪಕ ವೆಂಕಟರಾಘವ್, ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಶ್ರೀನಿವಾಸ್ ಹಾಗೂ ವಿದ್ಯಾರ್ಥಿಗಳು ಇದ್ದರು.