ವಿದ್ಯಾರ್ಥಿಗಳಿಗೆ ಸಮಾಜದಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ, ಸುರಕ್ಷತೆ ಹಾಗೂ ಕಾನೂನು ಕುರಿತು ಅರಿವು ಮೂಡಿಸಿದ ಡಿವೈಎಸ್ಪಿ ರವಿ.ಪಿ

ಸರ್ದಾರ್ ವಲ್ಲಭಾಯ್ ಪಟೇಲ್ ಅವರ 150ನೇ ಜನ್ಮದಿನ ಹಾಗೂ ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಬೆಂಗಳೂರು ಜಿಲ್ಲಾ ಪೊಲೀಸ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಕರ್ನಾಟಕ ಲೋಕಾಯುಕ್ತ ವತಿಯಿಂದ ನಗರದ ಕೊಂಗಾಡಿಯಪ್ಪ ಕಾಲೇಜಿನಲ್ಲಿ ಶುಕ್ರವಾರ ಅರಿವು ಸಪ್ತಾಹ ನಡೆಯಿತು.

ಸಮಾಜದಲ್ಲಿ ವಿದ್ಯಾರ್ಥಿಗಳ ಜವಾಬ್ದಾರಿ, ಸುರಕ್ಷತೆ ಹಾಗೂ ಕಾನೂನು ಅರಿವು ಕುರಿತು ಡಿವೈಎಸ್ಪಿ ರವಿ.ಪಿ ಅವರು ತಿಳಿ ಹೇಳಿದರು. ಸಾಮಾಜಿಕ ಜವಾಬ್ದಾರಿ ಮತ್ತು ಸುರಕ್ಷತೆಯ ಜೊತೆಗೆ ವಿಶೇಷವಾಗಿ ಫೋಕ್ಸ್‌ ಕಾನೂನು, ಸಂಚಾರ ನಿಯಮ ಪಾಲನೆ ಅವಶ್ಯಕತೆ ಹಾಗೂ ಮಾದಕ ವಸ್ತು ಸೇವನೆಯಿಂದ ಆಗುವ ದುಷ್ಪರಿಣಾಮ ಬಗ್ಗೆ ವಿದ್ಯಾರ್ಥಿಗಳಿಗೆ ಮೂಡಿಸಿದರು.

ರಾಷ್ಟ್ರ ಏಕತೆಯ ಅಂಗವಾಗಿ ದೊಡ್ಡಬಳ್ಳಾಪುರ ನಗರ ಠಾಣೆ ಇನ್‌ಸ್ಪೆಕ್ಟ‌ರ್ ಅಮರೇಶ್ ಗೌಡ ಅವರು ವಿದ್ಯಾರ್ಥಿಗಳಿಗೆ ಏಕತಾ ಪ್ರತಿಜ್ಞೆ ಬೋಧಿಸಿದರು.

ಈ ವೇಳೆ ಪಿಎಸ್‌ಐ ಶುಭ, ಕೆಎಸ್‌ಆರ್‌ಟಿಸಿ ಡಿಪೊ ವ್ಯವಸ್ಥಾಪಕ ವೆಂಕಟರಾಘವ್, ಕೊಂಗಾಡಿಯಪ್ಪ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಶ್ರೀನಿವಾಸ್ ಹಾಗೂ ವಿದ್ಯಾರ್ಥಿಗಳು ಇದ್ದರು.

Ramesh Babu

Journalist

Recent Posts

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

3 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

17 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

22 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

2 days ago