ವಿದ್ಯಾರ್ಥಿಗಳು, ಶಿಕ್ಷಕರು ಪ್ರಯಾಣಿಸುತ್ತಿದ್ದ ಬಸ್ ನಲ್ಲಿ ಬೆಂಕಿ: ಸುಮಾರು 25‌ಮಂದಿ ಸಜೀವ ದಹನವಾಗಿರುವ ಶಂಕೆ

ವಿದ್ಯಾರ್ಥಿಗಳು, ಶಿಕ್ಷಕರು ಪ್ರಯಾಣಿಸುತ್ತಿದ್ದ ಬಸ್ ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಧಗಧಗ ಹೊತ್ತಿ ಉರಿದ ಪರಿಣಾಮ ಸುಮಾರು 25 ಮಂದಿ ಬೆಂಕಿಗಾಹುತಿಯಾಗಿದ್ದಾರೆ ಎನ್ನಲಾಗಿದೆ.

ಈ ಘಟನೆ ಥಾಯ್ಲೆಂಡ್ ರಾಜಧಾನಿ ಬ್ಯಾಂಕಾಕ್‌ನ ಹೊರವಲಯದಲ್ಲಿ ನಡೆದಿದೆ.

ಮಧ್ಯ ಉತೈ ಥಾನಿ ಪ್ರಾಂತ್ಯದಿಂದ ಬ್ಯಾಂಕಾಕ್‌ಗೆ ಶೈಕ್ಷಣಿಕ ಪ್ರವಾಸಕ್ಕೆ ಬಂದಿದ್ದ ಈ ಬಸ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಬಸ್ ನಲ್ಲಿ ಶಿಕ್ಷಕರು, ಮಕ್ಕಳು ಸೇರಿದಂತೆ 44 ಜನರಿದ್ದರು. ಮಧ್ಯಾಹ್ನ 12.30 ರ ಸುಮಾರಿಗೆ ಬ್ಯಾಂಕಾಕ್​ನ ರಂಗ್‌ಸಿಟ್ ಶಾಪಿಂಗ್ ಮಾಲ್ ಬಳಿಯ ಫಾಹೋನ್ ಯೋಥಿನ್ ರಸ್ತೆಯಲ್ಲಿ ಬಸ್ ಹೊತ್ತಿ ಉರಿದಿದೆ.

ಒಂದು ಟೈರ್ ಸ್ಫೋಟಗೊಂಡ ನಂತರ ಬಸ್ ರಸ್ತೆಯ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ ಎಂದು ಘಟನಾಸ್ಥಳದಲ್ಲಿದ್ದ ರಕ್ಷಣಾ ಸಿಬ್ಬಂದಿ ಹೇಳಿದ್ದಾರೆ.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

51 minutes ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

2 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

3 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

3 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

7 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

9 hours ago