ಕೋಲಾರ: ವಿದ್ಯಾರ್ಥಿಗಳು ಓದಿನ ಜತೆಗೆ ಜೀವನದಲ್ಲಿ ಶಿಸ್ತು ರೂಢಿಸಿಕೊಂಡು ಉತ್ತಮ ಪ್ರಜೆಗಳಾಗಬೇಕು ಎಂದು ಬೆಂಗಳೂರು ಉತ್ತರ ವಿವಿ ಸಿಂಡಿಕೇಟ್ ಹಾಗೂ ಎಕ್ಸಲೆಂಟ್ ಕಾಲೇಜಿನ ಆಡಳಿತ ಮಂಡಳಿ ಸದಸ್ಯ ಸೀಸಂದ್ರ ಗೋಪಾಲಗೌಡ ತಿಳಿಸಿದರು.
ನಗರದ ಹೊರವಲಯದ ಛತ್ರಕೋಡಿಹಳ್ಳಿ ಗ್ರಾಮದಲ್ಲಿರುವ ಎಕ್ಸಲೆಂಟ್ ಕಾಲೇಜಿನಲ್ಲಿ ಶನಿವಾರ ಪದವಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಇವತ್ತಿನ ದಿನಗಳಲ್ಲಿ ವಿದ್ಯಾರ್ಥಿಗಳು ವಿದ್ಯಾವಂತರಾಗುತ್ತಿದ್ದಾರೆಯೇ ಹೊರತು ಅಗತ್ಯಕ್ಕೆ ತಕ್ಕಂತೆ ಜ್ಞಾನವನ್ನು ಪಡೆಯುತ್ತಿಲ್ಲ ಜ್ಞಾನದೊಂದಿಗೆ ಪ್ರತಿಯೊಬ್ಬರು ಶಿಸ್ತನ್ನು ತಮ್ಮ ಜೀವನದಲ್ಲಿ ರೂಢಿಸಿಕೊಳ್ಳಬೇಕು ಅರ್ಹತೆಗಳನ್ನು ತಾವುಗಳೇ ಹುಡಿಕಿಕೊಳ್ಳುವಂತಾಗಬೇಕು ಎಂದು ತಿಳಿಸಿದರು.
ಕಾಲೇಜುಗಳಲ್ಲಿ ಶ್ರೇಷ್ಠ ಗುಣಮಟ್ಟದ ಶಿಕ್ಷಣ ನೀಡುವುದರ ಜತೆಗೆ ಸಂಶೋಧನೆಯ ಕಡೆ ಹೆಚ್ಚಿನ ವಿದ್ಯಾರ್ಥಿಗಳನ್ನು ತೊಡಗಿಸಬೇಕು. ವಿದ್ಯಾರ್ಥಿಗಳಿಗೆ ಮುಂದೆ ಉದ್ಯೋಗಕ್ಕಾಗಿ ಉಪಯೋಗವಾಗುವಂತಹ ಕ್ಷೇತ್ರಗಳ ಮೇಲೆ ಹೆಚ್ಚು ಗಮನ ಹರಿಸಬೇಕು ಕೌಶಲ್ಯಕ್ಕೆ ತಕ್ಕಂತೆ ಶಿಕ್ಷಣದ ಕೋರ್ಸ್‌ಗಳನ್ನು ಪ್ರಾರಂಭಿಸಲು ವಿಶ್ವವಿದ್ಯಾಲಯದ ಮಟ್ಟದಲ್ಲಿ ಚರ್ಚೆ ನಡೆಸಲಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಎಕ್ಸಲೆಂಟ್ ಕಾಲೇಜಿನ ಕಾರ್ಯದರ್ಶಿ ಸುಶ್ಮಿತಾ ರಂಗಪ್ಪ, ಸಂಸ್ಥೆಯ ಶೈಕ್ಷಣಿಕ ಮುಖ್ಯಸ್ಥ ಡಿ.ವೆಂಕಟರಾಜು, ಪಿಯು ಕಾಲೇಜಿನ ಪ್ರಾಂಶುಪಾಲ ರಮೇಶ್ ರೆಡ್ಡಿ, ಪದವಿ ಕಾಲೇಜಿನ ಪ್ರಾಂಶುಪಾಲ ಆನಂದ್ ಇದ್ದರು
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು ಹಲ್ಲೆ…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…