ವಿದ್ಯಾರ್ಥಿಗಳ ಬೌದ್ಧಿಕ ಸಾಮರ್ಥ್ಯ ಹೆಚ್ಚಿಸಲು ರಸಪ್ರಶ್ನೆ ಸ್ಪರ್ಧೆ ಸಹಕಾರಿ- ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು

ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ  ಬೌದ್ಧಿಕ ಸಾಮರ್ಥ್ಯವನ್ನು ಮತ್ತು ಜ್ಞಾನದ ಮಟ್ಟವನ್ನು ಹೆಚ್ಚಿಸಲು ರಸಪ್ರಶ್ನೆ ಸ್ಪರ್ಧೆಗಳು ಸಹಕಾರಿ ಆಗುತ್ತವೆ ಎಂದು ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಿ.ಗೋವಿಂದರಾಜು ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕಿನ ಕನಸವಾಡಿ ನೇತಾಜಿ ಪ್ರೌಢಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಂದ ದಿವಂಗತ ಜಿ.ಸತೀಶ್ ಸ್ಮರಣಾರ್ಥವಾಗಿ ನಡೆದ ಅಂತರ ಪ್ರೌಢಶಾಲೆ ರಸಪ್ರಶ್ನೆ  ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಿ ಮಾತನಾಡಿದರು.

ರಸ ಪ್ರಶ್ನೆಗಳು‌ ಮನಸ್ಸಿನ ಕ್ರೀಡೆಗಳಾಗಿವೆ. ವಿದ್ಯಾರ್ಥಿಗಳ  ಜ್ಞಾನ, ಸಾಮರ್ಥ್ಯ ಮತ್ತು ಕೌಶಲ್ಯದ ಬೆಳವಣಿಗೆಯನ್ನು  ಅಳೆಯಲು ಮತ್ತು ಮೌಲ್ಯಮಾಪನ ಮಾಡಲು  ರಸಪ್ರಶ್ನೆಗಳನ್ನು ಬಳಸಬಹುದಾಗಿದೆ ಎಂದರು.

ವಿದ್ಯಾರ್ಥಿಗಳು ಪಠ್ಯಪುಸ್ತಕಗಳ ಜ್ಞಾನಕ್ಕೆ ಸೀಮಿತ  ಆಗಬಾರದು. ಸ್ಥಳೀಯ ಪರಿಸರದ ಜ್ಞಾನವನ್ನು ‌ಅರಿತಿರಬೇಕು. ನಮ್ಮ ಸುತ್ತ‌ಮುತ್ತಲ‌ ಕಲೆ, ಸಾಹಿತ್ಯ,  ಸಂಸ್ಕೃತಿಗಳ‌ ಪರಿಚಯ ಇರಬೇಕು. ನಮ್ಮ  ಜ್ಞಾನ, ವಿಜ್ಞಾನ ಮತ್ತು ಸಂಶೋಧನೆಗಳು  ಸಮಾಜದ ಬೆಳವಣಿಗೆಗೆ ಪೂರಕವಾಗಿರಬೇಕು. ಮಾನವೀಯ ಸಂಬಂಧಗಳನ್ನು ವೃದ್ದಿಗೊಳಿಸಬೇಕು. ಅಭಿವೃದ್ಧಿಯೊಂದಿಗೆ ಜನತೆಯ ಜೀವನದ ಗುಣಮಟ್ಟ ಸುಧಾರಣೆ ಆಗಬೇಕಾಗಿದೆ ಎಂದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸೈಯೀದ್ ಅನೀಸ್ ಮಾತನಾಡಿ,  ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿಭೆಗೆ ಮನ್ನಣೆ ಇದೆ.‌ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸುವಲ್ಲಿ  ಶಿಕ್ಷಕರ ಮತ್ತು ಪೋಷಕರ ಪಾತ್ರ ಮಹತ್ವದಾಗಿದೆ. ವಿದ್ಯಾರ್ಥಿಗಳ ಪ್ರತಿಭೆಯ ಅನಾವರಣಕ್ಕೆ ಸೂಕ್ತ ವೇದಿಕೆಗಳನ್ನು ಕಲ್ಪಿಸಬೇಕು ಜವಾಬ್ದಾರಿಯನ್ನು  ವಿದ್ಯಾಸಂಸ್ಥೆಗಳು ಮಾಡಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ನೇತಾಜಿ ಎಜುಕೇಷನ್ ಟ್ರಸ್ಟ್ ಅಧ್ಯಕ್ಷೆ  ವಸಂತರಘು, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ‌ ಸೋಮಶೇಖರ್, ನೇತಾಜಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಟಿ.ರಂಗಸ್ವಾಮಿ, ವಾಣಿಜ್ಯ ತೆರಿಗೆ ಅಧಿಕಾರಿ ಟಿ.ಸಿ.ವೆಂಕಟಾಚಲಪತಿ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಜಿ.ಶಶಿಶೇಖರಯ್ಯ, ಪ್ರೌಢಶಾಲೆ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ ಮುನಿಕೃಷ್ಣಪ್ಪ, ಕಾರ್ಯದರ್ಶಿ  ಚೌಧರಿ,  ವಿವಿಧ‌  ಪ್ರೌಢಶಾಲೆಯ ಮುಖ್ಯಶಿಕ್ಷಕರು, ಸಹಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿಜೇತರು : ಕೆ.ಎಂ ನವ್ಯಾ ಮತ್ತು ಡಿ.ಹರ್ಷಿತಾ ಚಿಕ್ಕನಾಯಕನಹಳ್ಳಿ ಕಿತ್ತೂರುರಾಣಿ ಚೆನ್ನಮ್ಮ ವಸತಿ ಪ್ರೌಢ ಶಾಲೆ ಪ್ರಥಮ ಸ್ಥಾನ

ಟಿ.ಚಿರಂಜೀವಿ ಮತ್ತು ಎಸ್.ರಾಮು ದೊಡ್ಡಬಳ್ಳಾಪುರ ಸರಸ್ವತಿ ಪ್ರೌಢಶಾಲೆ  ದ್ವಿತೀಯ ಸ್ಥಾನ

ದರ್ಶನ್ ಎನ್.ಗೌಡ ಮತ್ತು ಡಿ.ಸಾಯಿಆನಂದರಾವ್ ದೊಡ್ಡಬಳ್ಳಾಪುರ ದೇವರಾಜ ಅರಸು ಪ್ರೌಢಶಾಲೆ ತೃತೀಯ ಸ್ಥಾನ  ಪಡೆದರು.

ರಸ ಸ್ಪರ್ಧೆಯನ್ನು ಡಾ.ಜಿ.ಎನ್.ಮಂಜುನಾಥ್, ಎಸ್.ವೇಣುಗೋಪಾಲ್, ಆರ್.ಶಿವಕುಮಾರ್, ಚಂದ್ರಶೇಖರ್, ರಮೇಶ್, ಜಿ.ಎನ್.ನವೀನ್ ಕುಮಾರ್ ನಡೆಸಿಕೊಟ್ಟರು.

Ramesh Babu

Journalist

Recent Posts

ಬರದ ನಡುವೆ ಜಾನುವಾರುಗಳಿಗೆ ಹಸಿರು ಆಸರೆ: 70 ಎಕರೆಯಲ್ಲಿ ಹಸಿಹುಲ್ಲು ಬೆಳವಣಿಗೆಗೆ ಜಿಪಂ ಕ್ರಮ: ಮತ್ತಷ್ಟು ಸರ್ಕಾರಿ ಜಮೀನು ಹುಲ್ಲುಗಾವಲಾಗಿ ಪರಿವರ್ತನೆ

ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…

8 hours ago

ನಕಲಿ ಔಷಧಿಗಳ ಮಾರಾಟ ಜಾಲದ ಕಿಂಗ್‌ಪಿನ್ ಪ್ರಶಾಂತ್ ಪೊಲೀಸರ ವಶಕ್ಕೆ

ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…

1 day ago

ಒಂದು ವಾರದೊಳಗೆ ಮಳೆಯಾಗದಿದ್ದರೆ ಬಿತ್ತನೆಯಾದ ಬೆಳೆಗೂ ಕುತ್ತು | ರಾಗಿ, ಮೆಕ್ಕೆಜೋಳಕ್ಕೆ ತೇವಾಂಶದ ಕೊರತೆ | ಕೆರೆ-ಕುಂಟೆಗಳು ಖಾಲಿ, ಮೇವಿನ ಕೊರತೆಯ ಆತಂಕ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…

1 day ago

ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ದೊಡ್ಡಬಳ್ಳಾಪುರ: ಕೊಳೆತ ಸ್ಥಿತಿಯಲ್ಲಿ ತಲೆ ಇಲ್ಲದ  ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿರುವ ಘಟನೆ ನೆಲಮಂಗಲ–ಮಧುರೆ ಮುಖ್ಯರಸ್ತೆಯ ಕನ್ನಮಂಗಲ ಗೇಟ್ ಸಮೀಪ…

2 days ago

ಮಹಾಲಯ ಅಮಾವಾಸ್ಯೆ – ಪಿತೃ ಪಕ್ಷ – ಎಡೆ ಹಬ್ಬ….

ಮತ್ತೆ ಮತ್ತೆ ಕಾಲದ ಅಗ್ನಿಪರೀಕ್ಷೆಯಲ್ಲಿ ನಮ್ಮ ಸಂಸ್ಕೃತಿ, ಸಂಪ್ರದಾಯ ಆಚರಣೆಗಳನ್ನು ಪುನರ್ ವಿಮರ್ಶೆಗೊಳಪಡಿಸಿ, ಅನುಭವದ ಆಧಾರದ ಮೇಲೆ ಸಾರ್ವತ್ರಿಕ ಸತ್ಯಗಳನ್ನು…

2 days ago

ಯೋಗ್ಯತೆ ಇದ್ದರೆ ಎಸ್‌ಡಿಆರ್‌ಎಫ್ ಹಣ ಕೊಡಿಸಿ- ಕುಮಾರಸ್ವಾಮಿ ಟೀಕೆಗೆ ಸಚಿವ ಚಲುವರಾಯಸ್ವಾಮಿ ತಿರುಗೇಟು

ರೈತರಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಬರ ಪರಿಹಾರದ ಕುರಿತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಮಾಡಿದ್ದ ಟೀಕೆಗೆ ಸಚಿವ…

3 days ago