2025-26ನೇ ಸಾಲಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕೆ ಕೋರಿ ಅರ್ಹ ವಿದ್ಯಾರ್ಥಿಗಳು HMIS ಆನ್‌ಲೈನ್ ಪೋರ್ಟಲ್‌ನಲ್ಲಿ ಮೂಲಕ ಅರ್ಜಿ ಸಲ್ಲಿಸಬಹುದು. ಒಂದು ವೇಳೆ HMIS ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಅನಾನುಕೂಲವಾಗಿರುವ ವಿದ್ಯಾರ್ಥಿಗಳು ಅರ್ಜಿಯನ್ನು Manual ಮುಖೇನ ಪ್ರವೇಶ ಪಡೆಯಲು ಹತ್ತಿರವಿರುವ ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖಾ ಕಚೇರಿಗೆ ಭೇಟಿಯಾಗಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಜೂನ್ 30 ರ ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ವಿವರಗಳಿಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ನಂ.2017, 2ನೇ ಮಹಡಿ, ಜಿಲ್ಲಾಡಳಿತ ಭವನ, ವೀರಸಂದ್ರ ಗ್ರಾಮ ದೇವನಹಳ್ಳಿ ತಾಲ್ಲೂಕು, ಬೆಂಗ್ರಾಜಿಲ್ಲೆ-562110, ದೂರವಾಣಿ ಸಂಖ್ಯೆ:080-29787447/9480843020, ಸಹಾಯಕ ನಿರ್ದೇಶಕರು ದೇವನಹಳ್ಳಿ ತಾಲ್ಲೂಕು-080-27681784, ದೊಡ್ಡಬಳ್ಳಾಪುರ-080-27623681, ಹೊಸಕೋಟೆ-080-27931528, ನೆಲಮಂಗಲ-080-27723172 ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಟಿ.ಎಲ್.ಎಸ್ ಪ್ರೇಮ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…