ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಆನ್ಲೈನ್ ಅರ್ಜಿ ಆಹ್ವಾನ

2025-26ನೇ ಸಾಲಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಾತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕೆ ಕೋರಿ ಅರ್ಹ ವಿದ್ಯಾರ್ಥಿಗಳು HMIS ಆನ್‌ಲೈನ್ ಪೋರ್ಟಲ್‌ನಲ್ಲಿ ಮೂಲಕ ಅರ್ಜಿ ಸಲ್ಲಿಸಬಹುದು. ಒಂದು ವೇಳೆ HMIS ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಲು ಅನಾನುಕೂಲವಾಗಿರುವ ವಿದ್ಯಾರ್ಥಿಗಳು ಅರ್ಜಿಯನ್ನು Manual ಮುಖೇನ ಪ್ರವೇಶ ಪಡೆಯಲು ಹತ್ತಿರವಿರುವ ಸಹಾಯಕ ನಿರ್ದೇಶಕರ ಕಛೇರಿ, ಸಮಾಜ ಕಲ್ಯಾಣ ಇಲಾಖಾ ಕಚೇರಿಗೆ ಭೇಟಿಯಾಗಿ ಸಲ್ಲಿಸುವುದು. ಅರ್ಜಿ ಸಲ್ಲಿಸಲು ಜೂನ್ 30 ರ ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ವಿವರಗಳಿಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ನಂ.2017, 2ನೇ ಮಹಡಿ, ಜಿಲ್ಲಾಡಳಿತ ಭವನ, ವೀರಸಂದ್ರ ಗ್ರಾಮ ದೇವನಹಳ್ಳಿ ತಾಲ್ಲೂಕು, ಬೆಂಗ್ರಾಜಿಲ್ಲೆ-562110, ದೂರವಾಣಿ ಸಂಖ್ಯೆ:080-29787447/9480843020, ಸಹಾಯಕ ನಿರ್ದೇಶಕರು ದೇವನಹಳ್ಳಿ ತಾಲ್ಲೂಕು-080-27681784, ದೊಡ್ಡಬಳ್ಳಾಪುರ-080-27623681, ಹೊಸಕೋಟೆ-080-27931528, ನೆಲಮಂಗಲ-080-27723172 ಸಂಪರ್ಕಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಟಿ.ಎಲ್.ಎಸ್ ಪ್ರೇಮ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

14 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

19 hours ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

22 hours ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

1 day ago

ಸಿಎಂಗೆ ರೈತಪರ ಕಾಳಜಿ ಇಲ್ಲ ಶಾಸಕ ಧೀರಜ್ ಮುನಿರಾಜು ಆರೋಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…

1 day ago

ಎಸ್ ಐ ಆರ್ ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಕ್ರಮ – ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…

2 days ago