ಧಾರವಾಡ: ಪ್ಯಾರಾಮೆಡಿಕಲ್ ಶಿಕ್ಷಣ ಮುಗಿಸಿ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದ 19 ವರ್ಷದ ವಿದ್ಯಾರ್ಥಿನಿಯೋರ್ವಳು ಬರ್ಬರವಾಗಿ ಹತ್ಯೆಗೀಡಾಗಿದ್ದಾಳೆ.
ಲ್ಯಾಬ್‌ಗೆ ಹೋಗಿದ್ದ ಝಕಿಯಾ ಮುಲ್ಲಾ ಶವ ಇಂದು ಬೆಳಗ್ಗೆ ನಗರದ ಹೊರವಲಯದಲ್ಲಿ ಪತ್ತೆಯಾಗಿದೆ.
ಮೃತ ವಿದ್ಯಾರ್ಥಿನಿ ಧಾರವಾಡದ ಗಾಂಧಿ ಚೌಕ್ ನಿವಾಸಿಯಾಗಿದ್ದ 19 ವರ್ಷದ ಝಕಿಯಾ ಮುಲ್ಲಾ ಎಂದು ತಿಳಿದುಬಂದಿದೆ. ಮಂಗಳವಾರ ಸಂಜೆ ಮನೆಯಿಂದ ಲ್ಯಾಬ್‌ಗೆ ಹೋಗಿ ಬರುವುದಾಗಿ ಹೇಳಿ ತೆರಳಿದ್ದ ವಿದ್ಯಾರ್ಥಿನಿ, ರಾತ್ರಿಯಾದರೂ ಮನೆಗೆ ಹಿಂದಿರುಗಿರಲಿಲ್ಲ.
ಇದರಿಂದ ಆತಂಕಗೊಂಡ ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದರು. ಇಂದು ಮುಂಜಾನೆ ಮನಸೂರು ರಸ್ತೆಯ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸೇರಿದ ವಿನಯ್ ಡೈರಿ ಸಮೀಪ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ.
ಬೇರೆ ಕಡೆ ವಿದ್ಯಾರ್ಥಿನಿಯನ್ನು ಕೊಲೆ ಮಾಡಿ, ನಂತರ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಇಲ್ಲಿಗೆ ತಂದು ಶವವನ್ನು ಬಿಸಾಡಿ ಹೋಗಿರುವ ಶಂಕೆ ವ್ಯಕ್ತವಾಗಿದೆ.
ಸ್ಥಳಕ್ಕೆ ಧಾರವಾಡ ಗ್ರಾಮೀಣ ಹಾಗೂ ವಿದ್ಯಾಗಿರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಕೊಲೆ ಕುರಿತಂತೆ ಹೆಚ್ಚಿನ ಮಾಹಿತಿ ತಿಳಿಯಲಿದೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾಷೆ, ಪ್ರಾದೇಶಿಕತೆ, ರಾಷ್ಟ್ರೀಯತೆ ಮತ್ತು ಧರ್ಮದ ಸಂಘರ್ಷ, ಪ್ರಾದೇಶಿಕ ಮತ್ತು ರಾಷ್ಟ್ರೀಯ ಪಕ್ಷಗಳ ಸ್ವಾರ್ಥದ ಅನುಕೂಲಕರ ರಾಜಕೀಯ..... ಕನ್ನಡ ತಾಯಿ…
ಇಂದು ನಾಡಿನಾದ್ಯಂತ ಮಹಾವೀರ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಯಿತು. ಅದೇರೀತಿ ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ…
ನಾನು ವೃತ್ತಿಯಲ್ಲಿ ವಕೀಲನಾಗಿದ್ದೇನೆ. ವಕೀಲ ವೃತ್ತಿಯಲ್ಲಿ ಬಂದಂತಹ ಹಣದಿಂದ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ದಡಘಟ್ಟಮಡಗು ಸಮೀಪ ಸರ್ವೇ ನಂ…
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ, ಚಿಕ್ಕಬೆಳವಂಗಲ, ರಾಂಪುರ. ನಾರನಹಳ್ಳಿ, ಸೊಣ್ಣೇನಹಳ್ಳಿ ಗ್ರಾಮಗಳ ವ್ಯಾಪ್ತಿಯ ಸುಮಾರು 2100 ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಳ್ಳಲು…
ದೇವರು ಎಷ್ಟೊಂದು ಒಳ್ಳೆಯವನಲ್ಲವೇ........ ಲಕ್ಷಾಂತರ ಜನರನ್ನು ಕೊಲ್ಲಿಸಲು ಅಡಾಲ್ಫ್ ಹಿಟ್ಲರನನ್ನು ಒಂದು ದೇಶದ ಅಧ್ಯಕ್ಷನನ್ನಾಗಿಸಿದ. ಈಗ ಡೊನಾಲ್ಡ್ ಟ್ರಂಪ್ ಅವರನ್ನು…
ಮಹಿಳೆಯರು ಎಲ್ಲ ವಲಯಗಳಲ್ಲಿ ತಮ್ಮ ಛಾಪು ಮೂಡಿಸಿದ್ದು, ಮಹಿಳಾ ಸಬಲೀಕರಣದ ಆಶಯ ಸಾಕಾರದತ್ತ ಸಾಗುತ್ತಿದೆ ಎಂದು ಆರಕ್ಷಕ ನಿರೀಕ್ಷಕರಾದ ಎನ್.ಶೋಭಾ…