Categories: Crime

ವಿದ್ಯಾರ್ಥಿನಿ ಬರ್ಬರ ಹತ್ಯೆ; ಶವ ಬಿಸಾಡಿ ಹೋದ ದುಷ್ಕರ್ಮಿಗಳು

ಧಾರವಾಡ: ಪ್ಯಾರಾಮೆಡಿಕಲ್ ಶಿಕ್ಷಣ ಮುಗಿಸಿ ಉದ್ಯೋಗಕ್ಕಾಗಿ ಹುಡುಕಾಟ ನಡೆಸುತ್ತಿದ್ದ 19 ವರ್ಷದ ವಿದ್ಯಾರ್ಥಿನಿಯೋರ್ವಳು ಬರ್ಬರವಾಗಿ ಹತ್ಯೆಗೀಡಾಗಿದ್ದಾಳೆ.

ಲ್ಯಾಬ್‌ಗೆ ಹೋಗಿದ್ದ ಝಕಿಯಾ ಮುಲ್ಲಾ ಶವ ಇಂದು ಬೆಳಗ್ಗೆ ನಗರದ ಹೊರವಲಯದಲ್ಲಿ ಪತ್ತೆಯಾಗಿದೆ.

ಮೃತ ವಿದ್ಯಾರ್ಥಿನಿ ಧಾರವಾಡದ ಗಾಂಧಿ ಚೌಕ್ ನಿವಾಸಿಯಾಗಿದ್ದ 19 ವರ್ಷದ ಝಕಿಯಾ ಮುಲ್ಲಾ ಎಂದು ತಿಳಿದುಬಂದಿದೆ. ಮಂಗಳವಾರ ಸಂಜೆ ಮನೆಯಿಂದ ಲ್ಯಾಬ್‌ಗೆ ಹೋಗಿ ಬರುವುದಾಗಿ ಹೇಳಿ ತೆರಳಿದ್ದ ವಿದ್ಯಾರ್ಥಿನಿ, ರಾತ್ರಿಯಾದರೂ ಮನೆಗೆ ಹಿಂದಿರುಗಿರಲಿಲ್ಲ.

ಇದರಿಂದ ಆತಂಕಗೊಂಡ ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದರು. ಇಂದು ಮುಂಜಾನೆ ಮನಸೂರು ರಸ್ತೆಯ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸೇರಿದ ವಿನಯ್ ಡೈರಿ ಸಮೀಪ ವಿದ್ಯಾರ್ಥಿನಿಯ ಶವ ಪತ್ತೆಯಾಗಿದೆ.

ಬೇರೆ ಕಡೆ ವಿದ್ಯಾರ್ಥಿನಿಯನ್ನು ಕೊಲೆ ಮಾಡಿ, ನಂತರ ಸಾಕ್ಷ್ಯ ನಾಶಪಡಿಸುವ ಉದ್ದೇಶದಿಂದ ಇಲ್ಲಿಗೆ ತಂದು ಶವವನ್ನು ಬಿಸಾಡಿ ಹೋಗಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಧಾರವಾಡ ಗ್ರಾಮೀಣ ಹಾಗೂ ವಿದ್ಯಾಗಿರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಮರಣೋತ್ತರ ಪರೀಕ್ಷೆ ವರದಿ ಕೊಲೆ ಕುರಿತಂತೆ ಹೆಚ್ಚಿನ ಮಾಹಿತಿ ತಿಳಿಯಲಿದೆ. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

35 minutes ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

6 hours ago

ಸರ್ಕಾರಿ ಶಾಲಾ ಮಕ್ಕಳಿಗೆ ಟ್ರ್ಯಾಕ್‌ಸೂಟ್, ಶೂ ವಿತರಣೆ

ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…

20 hours ago

ಕಸ ವಿಂಗಡಣೆ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…

1 day ago

ಅಕ್ಟೋಬರ್ 2….. ಶಾಸ್ತ್ರಿ ಮತ್ತು ಗಾಂಧಿ……..,

ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…

1 day ago

ಬೆಂಬಲ ಬೆಲೆಯಡಿ ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್‌ಗೆ ಖರೀದಿಗೆ ಕೇಂದ್ರದ ಅನುಮೋದನೆ

2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…

2 days ago