ಬೆಂಗಳೂರಿನ ಕೆಂಪಾಪುರದಲ್ಲಿರುವ ಕಾಲೇಜಿನಲ್ಲಿ ಕಾಲೇಜು ಸೆಕ್ಯೂರಿಟಿ ಗಾರ್ಡ್ ನ ಕೊಲೆ ನಡೆದಿದೆ. ಕಾಲೇಜಿನ ವಿದ್ಯಾರ್ಥಿಯಿಂದಲೇ ಸೆಕ್ಯೂರಿಟಿ ಗಾರ್ಡ್ ಕೊಲೆ ಆಗಿದೆ. ವಿದ್ಯಾರ್ಥಿಯು ಕಾಲೇಜಿಗೆ ಮದ್ಯ ಸೇವಿಸಿ ಬಂದಿದ್ದ. ಈ ವೇಳೆ ಕಾಲೇಜಿನೊಳಗೆ ಬಿಡದಿದ್ದಕ್ಕೆ ಕೊಲೆ ನಡೆದಿದೆ ಎನ್ನಲಾಗಿದೆ.
ಕಾಲೇಜೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಹಾಗೂ ಡಿಸಿಪ್ಲೀನ್ ಉಸ್ತುವಾರಿ ಜೈ ಕಿಶೋರ್ ರಾಯ್ ಕೊಲೆಯಾದ ದುರ್ದೈವಿ. ಕಾಲೇಜು ವಿದ್ಯಾರ್ಥಿ ಭಾರ್ಗಬ್ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.
ಸ್ಥಳಕ್ಕೆ ಅಮೃತಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಸ್ಸಾಂ ಮೂಲದ ಭಾರ್ಗಬ್ ಪಿಜಿಯಲ್ಲಿ ವಾಸವಿದ್ದು, ಕಾಲೇಜಿನಲ್ಲಿ ಬಿಎ ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ. ಸದ್ಯ ಕೊಲೆ ಆರೋಪಿಯನ್ನು ಅಮೃತಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೊಲೆಯಾದ ಕಿಶೋರ್ ಉತ್ತರ ಭಾರತ ಮೂಲದವರಾಗಿದ್ದು, ಕಳೆದ ಹತ್ತು ವರ್ಷಗಳಿಂದ ಇದೇ ಕಾಲೇಜಿನಲ್ಲಿ ಸೆಕ್ಯೂರಿಟಿ ಗಾರ್ಡ್‌ಗಳ ಮೇಲ್ವಿಚಾರಕರಾಗಿ ಕೆಲಸ ಮಾಡುತ್ತಿದ್ದರು. ಕಾಲೇಜಿನ ಭದ್ರತಾ ಲೋಪವೇ ಈ ಸಾವಿಗೆ ಕಾರಣ ಎಂದು ಮೃತ ಕಿಶೋರ್ ಕುಟುಂಬಸ್ಥರು ಆರೋಪಿಸಿದ್ದಾರೆ.
ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.