ವಿದ್ಯಾರ್ಥಿಯ ಬಾಳಿಗೆ ಬೆಳಕು ಆಗಬೇಕಾದ ಶಿಕ್ಷಕಿಯೇ ವಿದ್ಯಾರ್ಥಿ ಬಾಳು ಕತ್ತಲಾಗುವಂತೆ ಮಾಡಿದ ಆರೋಪ ಚಿಕ್ಕಬಳ್ಳಾಪುರದಲ್ಲಿ ಕೇಳಿ ಬಂದಿದೆ.
ಓರ್ವ ಶಿಕ್ಷಕಿ ಮಾಡಿದ ಎಡವಟ್ಟಿನಿಂದ ವಿದ್ಯಾರ್ಥಿ ತನ್ನ ಕಣ್ಣು ಕಳೆದುಕೊಂಡಿರುವಂತಹ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ.
ಘಟನೆ ನಡೆದು ಒಂದು ವರ್ಷ ಕಳೆದರೂ, ಶಿಕ್ಷಕಿಯ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಆರೋಪವು ಸಹ ಕೇಳಿಬಂದಿದೆ. ಸದ್ಯ ಪೋಷಕರು ನ್ಯಾಯಕ್ಕಾಗಿ ಹೋರಾಟ ನಡೆಸಿದ್ದು, ಶಿಕ್ಷಣ ಇಲಾಖೆಯಿಂದ ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಘಟನೆ ವಿವರ
ಬಾಲಕನ ಹೆಸರು ಯಶವಂತ್. ಚಿಂತಾಮಣಿ ತಾಲೂಕಿನ ಯಗವಕೋಟೆ ಗ್ರಾಮದ ನಟರಾಜ್ ಹಾಗೂ ಅಂಕಿತಾ ದಂಪತಿಗಳ ಎರಡನೇ ಮಗನಾಗಿರುವ ಯಶ್ವಂತ್, ಅದೇ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸದ್ಯ 2 ನೇ ತರಗತಿಯ ವಿದ್ಯಾರ್ಥಿಯಾಗಿದ್ದಾನೆ.
ತಾನು ಮಾಡದ ತಪ್ಪಿಗೆ ಚಿಕ್ಕ ವಯಸ್ಸಿನಲ್ಲೇ ಬಾಲಕ ಕಣ್ಣು ಕಳೆದುಕೊಂಡಿದ್ದಾನೆ. ಸಿಟ್ಟಿನ ಭರದಲ್ಲಿ ಶಿಕ್ಷಕಿ ಬೀಸಿದ ಕೋಲು 1 ವರ್ಷದ ನಂತರ ಬಾಲಕನ ದೃಷ್ಟಿಯೇ ಸಂಪೂರ್ಣ ಕಾಣದಂತಾಗಿದೆ. ಪೋಷಕರು ನ್ಯಾಯಕ್ಕಾಗಿ ಆಗ್ರಹಿಸಿ ಜಿಲ್ಲೆಯ ಚಿಂತಾಮಣಿ ಮಗರದ ಬಿಇಒ ಕಚೇರಿ ಎದುರು ಧರಣಿ ಮಾಡಿರುವಂತಹ ಘಟನೆ ನಡೆದಿದೆ.
ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…
ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…
ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…
ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…