Categories: ಕೋಲಾರ

ವಿದ್ಯಾರ್ಥಿವೇತನ ಬಿಡುಗಡೆಗೆ ಒತ್ತಾಯಿಸಿ ಎಸ್ಎಫ್ಐ ಮನವಿ

ಕೋಲಾರ: ವಿಧ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಮಾರಕವಾಗಿರುವ ವಿದ್ಯಾರ್ಥಿವೇತನ ಮತ್ತು ಫೆಲೋಶಿಪ್ ವಿತರಣೆಯಲ್ಲಿನ ಸರಕಾರದ ನಿರ್ಲಕ್ಷ್ಯದ ವಿರುದ್ಧ ಎಸ್‌ಎಫ್‌ಐ ಸಂಘಟನೆಯಿಂದ ತಹಶಿಲ್ದಾರ್ ಹರ್ಷವರ್ಧನ್ ಮುಖಾಂತರ ಮುಖ್ಯಮಂತ್ರಿಗೆ ಮನವಿ ನೀಡಿದರು

ಈ ಸಂದರ್ಭದಲ್ಲಿ ಎಸ್‌ಎಫ್‌ಐ ಜಿಲ್ಲಾ ಅಧ್ಯಕ್ಷ ಅಂಬ್ಲಿಕಲ್ ಎನ್ ಶಿವಪ್ಪ ಮಾತನಾಡಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮತ್ತು ಫೆಲೋಶಿಪ್ ವಿತರಣೆಯ ನಿರ್ಲಕ್ಷ್ಯದಿಂದ ರಾಜ್ಯಾದ್ಯಂತ ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗಿನ ಎಲ್ಲಾ ಸಮುದಾಯದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ ಇದಕ್ಕೆ ಸರ್ಕಾರ ಅಗತ್ಯ ಅನುದಾನ ಬಿಡುಗಡೆ ಮಾಡದಿರುವುದು ಖಂಡನೀಯವಾದದ್ದು ಸರ್ಕಾರಕ್ಕೆ ಕಡಿತ ಮಾಡಿರುವ ವಿದ್ಯಾರ್ಥಿ ವೇತನ ಹಾಗೂ ಫೆಲೋಷಿಪ್ ಬಗ್ಗೆ ಹಲವು ಬಾರಿ ಮನವಿ ಮಾಡಿದರೂ ಸರಕಾರ ವಿದ್ಯಾರ್ಥಿಗಳ ಬಗ್ಗೆ ಕಿಂಚಿತ್ತೂ ಗಮನವಹಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ವೇತನ ಹಾಗೂ ಫೆಲೋಷಿಪ್ ಇಲ್ಲಿಯವರೆಗೂ ದೊರೆಯದ ಕಾರಣ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನ ಪಡೆಯಲು ಪರದಾಡುವಂತಾಗಿದೆ ಪ್ರತೀ ವರ್ಷ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ 60 ರಿಂದ 70 % ಅಂಕ ಗಳಿಸಿದ ಎಸ್ಸಿ ಮತ್ತು ಎಸ್ಟಿ ಸಮುದಾಯದ ವಿದ್ಯಾರ್ಥಿಗಳು ಏಳು ಸಾವಿರ ವಿದ್ಯಾರ್ಥಿವೇತನವನ್ನು ಪಡೆಯುತ್ತಿದ್ದರು. ಆದರೆ ಈ ವರ್ಷ ಸಮಾಜ ಕಲ್ಯಾಣ ಇಲಾಖೆ ವಿದ್ಯಾರ್ಥಿ ವೇತನವನ್ನು ಕೈ ಬಿಡಲಾಗಿದೆ ಇದಲ್ಲದೆ, 75% ಮತ್ತು ಅದಕ್ಕಿಂತ ಹೆಚ್ಚಿನ ಅಂಕಗಳನ್ನು ಗಳಿಸುವ ವಿದ್ಯಾರ್ಥಿಗಳಿಗೆ, 6 ಲಕ್ಷ ಆದಾಯದ ಮಿತಿಯನ್ನು ವಿಧಿಸಲಾಗಿದೆ, ಆದರೆ ಈ ಹಿಂದೆ ಅಂತಹ ಯಾವುದೇ ನಿರ್ಬಂಧಗಳಿಲ್ಲ ಪ್ರಭುತ್ವ ಯೋಜನೆಯಡಿ ವಿಶ್ವದ ಅಗ್ರ 250 ವಿವಿ ಗಳಲ್ಲಿ ಪಿ ಎಚ್.ಡಿ ಮಾಡುವುದಕ್ಕೆ ಅವಕಾಶ ಇತ್ತು ಈಗ ಅಗ್ರ 100 ವಿವಿ ಎಂದು ಸಚಿವರು ಹೇಳಿರುವುದು ವಿದ್ಯಾರ್ಥಿ ವಿರೋಧಿ ನೀತಿಯಾಗಿ ಎಂದರು.

ರಾಜ್ಯದ ಎಲ್ಲಾ ಒಬಿಸಿ, ಅಲ್ಪಸಂಖ್ಯಾತ ಸಮುದಾಯದ ಪಿಎಚ್‌.ಡಿ ವಿದ್ಯಾರ್ಥಿಗಳಿಗೆ ದೊರೆಯುತ್ತಿದ್ದ ಮಾಸಿಕ ಫೆಲೋಶಿಪ್ ಹಣದ ಮೊತ್ತದಲ್ಲಿಯೂ ಕಡಿತ ಮಾಡಲಾಗಿದೆ ಹಿಂದಿನ ಬಿಜೆಪಿ ಸರ್ಕಾರವು ಕೋವಿಡ್ ನೆಪ ಹೇಳಿ ಈ ಫೆಲೋಶಿಪ್ ಅನ್ನು ತಿಂಗಳಿಗೆ 25 ಸಾವಿರದಿಂದ ರಿಂದ 10 ಸಾವಿರಕ್ಕೆ ಇಳಿಸಿತು. ನಂತರ ಬಂದ ಕಾಂಗ್ರೆಸ್ ಸರಕಾರ ಈ ಸಮಸ್ಯೆಯನ್ನು ಇಲ್ಲಿಯವರೆಗೂ ಬಗೆಹರಿಸದಿರುವುದು ಅತ್ಯಂತ ಖಂಡನೀಯ. ಅಲ್ಪಸಂಖ್ಯಾತರ ಪಿಎಚ್‌ಡಿಗಾಗಿ ಮಾಸಿಕ 25 ಸಾವಿರ ಫೆಲೋಶಿಪ್ ಅನ್ನು ನೀಡಲು ಆದೇಶಿಸಬೇಕು ಇಲ್ಲದೇ ಹೋದರೆ ರಾಜ್ಯಾದ್ಯಂತ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಎಚ್ಚರಿಕೆ ನೀಡಿದರು

ಮನವಿ ನೀಡುವ ಸಂದರ್ಭದಲ್ಲಿ ಎಸ್‌ಎಫ್‌ಐ ಮುಳಬಾಗಿಲು ತಾ ಅಧ್ಯಕ್ಷ ಶಶಿಕುಮಾರ್, ಮುಖಂಡರಾದ ಲಕ್ಷ್ಮಣ್, ಆಕಾಶ್, ಮುನಿರಾಜು, ಮಹೇಶ್, ಪ್ರವೀಣ್, ಹರೀಶ್, ಮನೋಜ್, ಲಕ್ಷ್ಮಣ್, ಮುಂತಾದವರು ಇದ್ದರು.

Ramesh Babu

Journalist

Recent Posts

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ: ಸಭೆಯ ಮುಖ್ಯಾಂಶಗಳು ಇಲ್ಲಿವೆ ಓದಿ…

ಇಂದು ವಿಧಾನಸೌಧ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ವಿವಿಧ ಕಾರ್ಮಿಕ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆಯ…

7 hours ago

ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಅರ್ಜಿ ಆಹ್ವಾನ

ಜಿಲ್ಲಾ ಬಾಲಕಾರ್ಮಿಕ ಯೋಜನೆಯಲ್ಲಿ ಯೋಜನಾ ನಿರ್ದೇಶಕ ಮತ್ತು ಗುಮಾಸ್ತ ಕಂ ಲೆಕ್ಕಿಗ ಹುದ್ದೆಗೆ ಗೌರವಧನ ಆಧಾರದ ಮೇರೆಗೆ ನೇಮಕಾತಿ ಮಾಡಿಕೊಳ್ಳಲು…

8 hours ago

ಸ್ನೇಹಿತರ ದಿನದ ಅಂಗವಾಗಿ ನಂದಿಬೆಟ್ಟಕ್ಕೆ ತೆರಳಿದ್ದ ಸ್ನೇಹಿತರು: ನಂದಿ ಬೆಟ್ಟದ ತಿರುವು ರಸ್ತೆಯಲ್ಲಿ ಬೈಕ್ ಅಪಘಾತ: ಇಬ್ಬರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ

ನಂದಿ ಬೆಟ್ಟದ ತಿರುವು ರಸ್ತೆಯಲ್ಲಿ ಬೈಕ್ ಅಪಘಾತವಾಗಿದ್ದು, ಬೈಕ್ ನಲ್ಲಿದ್ದ ಇಬ್ಬರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ನಂದಿ ಬೆಟ್ಟದ…

17 hours ago

ಭೂಗಳ್ಳರಿಂದ 8 ಎಕರೆ ಜಮೀನು ರಕ್ಷಣೆ: ಆಶ್ರಯ ಯೋಜನೆಗೆ ಭೂಮಿ ಮಂಜೂರು: ಆಶ್ರಯ ಯೋಜನೆಯ ಯಶಸ್ವಿ ಕಾರ್ಯಕ್ರಮ ಆಯೋಜನೆ

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಮೇಲಿನಜೂಗಾನಹಳ್ಳಿ(ಎಸ್.ಎಸ್.ಘಾಟಿ) ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಜೂರು ಗ್ರಾಮದ ಸರ್ವೇ ನಂಬರ್ 33ರಲ್ಲಿ ಒಟ್ಟು 120…

1 day ago

ಶಾಲಾಮಕ್ಕಳ ಕುಡಿಯುವ ನೀರಿಗೆ ವಿಷ ಹಾಕಿದ ಪ್ರಕರಣ: ಸಿಎಂ ಸಿದ್ದರಾಮಯ್ಯ ಏನಂದ್ರು…?

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯೋಪಾಧ್ಯಾಯರು ಮುಸ್ಲಿಂ ಸಮುದಾಯಕ್ಕೆ ಸೇರಿದವರು, ಅವರನ್ನು ತಮ್ಮ ಊರಿನಿಂದ…

1 day ago

ಹೋರಾಟ ಮತ್ತು ಹೋರಾಟಗಾರರು……

ಹೊಸ ಹೋರಾಟಗಾರರು ಸೃಷ್ಟಿಯಾಗಬೇಕಿದೆ, ಹಳೆಯ ಹೋರಾಟಗಾರರು ಮರುಹುಟ್ಟು ಪಡೆಯಬೇಕಿದೆ, ಸಮಕಾಲೀನ ಹೋರಾಟಗಾರರು ಹೋರಾಟದ ಮಾರ್ಗಗಳನ್ನು ಪುನರ್ ರೂಪಿಸಿಕೊಳ್ಳಬೇಕಿದೆ...... 1995/2000 ಇಸವಿಯ…

2 days ago