ವಸತಿ ಶಾಲೆ, ವಿದ್ಯಾರ್ಥಿನಿಲಯಗಳಲ್ಲಿ ಮನೆಯ ವಾತಾವರಣ ನಿರ್ಮಿಸಿ, ವಿದ್ಯಾರ್ಥಿಗಳನ್ನು ಮನೆಯವರಂತೆ ಭಾವಿಸಿ ಪೋಷಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್ ಅವರು ಹಾಸ್ಟೆಲ್ ಸಿಬ್ಬಂದಿಗೆ ಸೂಚಿಸಿದರು.
ದೇವನಹಳ್ಳಿ ತಾಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಇಂದು ನಡೆದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಿದ್ಯಾರ್ಥಿ ನಿಲಯಗಳು ಹಾಗೂ ವಸತಿ ಶಾಲೆಗಳಲ್ಲಿನ ವಾರ್ಡನ್, ಅಡುಗೆಯವರು, ಅಡುಗೆ ಸಹಾಯಕರು ಹಾಗೂ ರಾತ್ರಿ ಕಾವಲುಗಾರರಿಗೆ ನಿಲಯದ ಸಮರ್ಪಕ ನಿರ್ವಹಣೆಯಲ್ಲಿ ಸ್ವಚ್ಚತೆ, ಆಹಾರ ಸುರಕ್ಷತೆ, ಶುಚಿ-ರುಚಿಯಾದ ಮತ್ತು ಪೌಷ್ಟಿಕ ಆಹಾರವನ್ನು ನೀಡುವ ಕುರಿತು ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಸತಿ ಶಾಲೆಯಲ್ಲಿನ ಯಾವುದೇ ಸಮಸ್ಯೆ ಕಂಡುಬಂದರೆ ಶೀಘ್ರವಾಗಿ ಅಧಿಕಾರಿಗಳ ಗಮನಕ್ಕೆ ತಂದು ಬಗೆಹರಿಸಿಕೊಳ್ಳಬೇಕು. ವಸತಿ ಶಾಲೆಗಳಲ್ಲಿ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಿ ಕೊಠಡಿ, ಶೌಚಾಲಯಗಳ ಸ್ವಚ್ಛತೆಗೆ ಕ್ರಮ ವಹಿಸಬೇಕು. ಆಹಾರದ ಗುಣಮಟ್ಟ ಪರಿಶೀಲಿಸಿ ವಿದ್ಯಾರ್ಥಿಗಳಿಗೆ ಊಟ ನೀಡಬೇಕು. ಮೂಲಭೂತ ಸೌಕರ್ಯಗಳು ಹೆಚ್ಚಿನ ಪ್ರಾಶಸ್ತ್ಯ ನೀಡಿ ಉತ್ತಮ ರೀತಿಯ ಮನೆಯ ವಾತಾವರಣ ನಿರ್ಮಿಸಿ, ಶಿಕ್ಷಣ ಕಲ್ಪಿಸಿ ಎಂದು ಜಿಲ್ಲಾಧಿಕಾರಿ ಹೇಳಿದರು.
ತರಬೇತಿಯಲ್ಲಿ ವಸತಿ ನಿಲಯದ ಸಮರ್ಪಕ ನಿರ್ವಹಣೆಯಲ್ಲಿ ಸ್ವಚ್ಚತೆ, ಆಹಾರ ಸುರಕ್ಷತೆ, ಶುಚಿ-ರುಚಿಯಾದ ಮತ್ತು ಪೌಷ್ಟಿಕ ಆಹಾರವನ್ನು ನೀಡುವ ಕುರಿತು ಸಂಪನ್ಮೂಲ ವ್ಯಕ್ತಿಯಿಂದ ತರಬೇತಿ ನೀಡಲಾಯಿತು.
ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಆರು ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭರತ್ ಹೆಗ್ಗಡೆ, ಲೋಕಾಯುಕ್ತ ಬಲೆಗೆ…
ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್ ಓಕ್ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…
ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ಕೊರತೆ…
Cheap Emotional Support Animal Letter: Affordable ESA Documentation Affordable Emotional Support Animal Letters for Enhanced…
ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…
ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…