ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ವಿವಿಧ ವಿದ್ಯಾರ್ಥಿ ಯೋಜನೆಗಳಡಿ ವಿದ್ಯಾರ್ಥಿ ವೇತನಕ್ಕೆ ಅರ್ಹ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ
ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ ಯೋಜನೆ (1 ರಿಂದ 8ನೇ ತರಗತಿ), ಶುಲ್ಕ ಮರುಪಾವತಿ ಯೋಜನೆ, ಐಐಟಿ, ಐಐಎಂ ಇತ್ಯಾದಿ ಉತ್ತೇಜನ ಯೋಜನೆ, ಎಂಫಿಲ್ & ಪಿಹೆಚ್‌ಡಿ ಫೆಲೋಶಿಪ್ ಯೋಜನೆ. ಬಿ.ಎಸ್ಸಿ ನರ್ಸಿಂಗ್ ಉತ್ತೇಜನ ಯೋಜನೆ ಹಾಗೂ ವಿದೇಶಿ ವಿದ್ಯಾರ್ಥಿವೇತನ ಯೋಜನೆಗಳಡಿ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಗುತ್ತದೆ.
ಅರ್ಹ ವಿದ್ಯಾರ್ಥಿಗಳು SSP Portal ಹಾಗೂ ಸೇವಾ ಸಿಂಧು ಪೋರ್ಟಲ್ ಮೂಲಕ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.