
ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿವೇತನವನ್ನು ಮಂಜೂರು ಮಾಡಲು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗಬೇಕಿದೆ ಹಾಗಾಗಿ ವಿದ್ಯಾರ್ಥಿಗಳು ಆಧಾರ್ ಸೀಡಿಂಗ್ ಮಾಡಿಸುವಂತೆ ಸೂಚಿಸಲಾಗಿದೆ.
ಆಧಾರ್ ಸೀಡಿಂಗ್ ಆಗದೇ ಇರುವ ಕೆಲ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಮಂಜೂರಿಗೆ ತಾಂತ್ರಿಕ ಅಡತಡೆ ಉಂಟಾಗಿದೆ ಹಾಗಾಗಿ ನೇರ ನಗದು ವರ್ಗಾವಣೆ ಮಾಡಲು ಸಾದ್ಯವಾಗುತ್ತಿಲ್ಲ ಆದರಿಂದ ವಿದ್ಯಾರ್ಥಿಗಳು ಆಧಾರ್ ಸೀಡಿಂಗ್ ಮಾಡಿಸಬೇಕು.
ಪಂಗಡದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ/ಪ್ರೋತ್ಸಾಹಧನವನ್ನು ಸಮಯಕ್ಕೆ ಸರಿಯಾಗಿ ವಿತರಣೆಯಾಗಲು ವಿಶೇಷ “ಆಧಾರ್ ಸೀಡಿಂಗ್ ಅಭಿಯಾನ” ವನ್ನು ಜಿಲ್ಲಾ/ತಾಲ್ಲೂಕು ಮಟ್ಟದಲ್ಲಿ ಆಗಸ್ಟ್ 25 ರಿಂದ ಸೆಪ್ಟೆಂಬರ್ 7 ರವರೆಗೆ ಹಮ್ಮಿಕೊಳ್ಳಲಾಗಿದೆ.
ಆಧಾರ್ ಸೀಡಿಂಗ್ ಆಗದೇ ಇರುವ ಮತ್ತು ಆಧಾರ್ ಸೀಡಿಂಗ್ ಆಗಿರುವ ವಿದ್ಯಾರ್ಥಿಗಳು www.npci.org.in ವೆಬ್ ಸೈಟ್ ನಲ್ಲಿ ಖಚಿತ ಪಡಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ, ಬೆಂಗಳೂರು ಗ್ರಾಮಾಂತರಜಿಲ್ಲೆ ದೂ.ಸಂ:-080-29787448,ಸಹಾಯಕ ನಿರ್ದೇಶಕರ ಕಚೇರಿ, ಸಮಾಜಕಲ್ಯಾಣ ಇಲಾಖೆ, ದೇವನಹಳ್ಳಿ ದೂ.ಸಂ:-080- 27681784, ಸಹಾಯಕ ನಿರ್ದೇಶಕರ ಕಚೇರಿ, ಸಮಾಜಕಲ್ಯಾಣ ಇಲಾಖೆ, ದೊಡ್ಡಬಳ್ಳಾಪುರ ದೂ.ಸಂ:-080-27623681, ಸಹಾಯಕ ನಿರ್ದೇಶಕರ ಕಚೇರಿ, ಸಮಾಜಕಲ್ಯಾಣ ಇಲಾಖೆ, ನೆಲಮಂಗಲ ದೂ.ಸಂ:-080- 27723172, ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಹೊಸಕೋಟೆ, ದೂ.ಸಂ:-080- 27931528 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.