ವಿದ್ಯಾರ್ಥಿ ವೇಷದಲ್ಲಿ ಬಂದು ಕಳ್ಳತನ ಮಾಡುವಾಗ ಸಿಕ್ಕಿಬಿದ್ದ ಖತರ್ನಾಕ್ ಕಳ್ಳ: ರೋಡ್ ಅಲ್ಲಿ ಸಿಕ್ಕ ಐಡಿ ಕಾರ್ಡ್ ಬಳಸಿ ಕ್ಯಾಂಪಸ್ ಗೆ ಎಂಟ್ರಿ: ವಿದ್ಯಾರ್ಥಿಗಳ ಬೆಲೆ ಬಾಳುವ ವಸ್ತುಗಳ ಎಸ್ಕೇಪ್

ಸದಾಶಿವನಗರದಲ್ಲಿರುವ ಐಐಎಸ್ ಸಿ ಕ್ಯಾಂಪಸ್​ನಲ್ಲಿ ಬಿಗಿ ಭದ್ರತೆ ನಡುವೆಯೂ ಕಳೆದ ಕೆಲ ತಿಂಗಳಿನಿಂದ ನಡೆಯುತ್ತಿದ್ದ ನಿಗೂಢ ಕಳ್ಳತನವನ್ನು ಸೆಕ್ಯೂರಿಟಿ ಪತ್ತೆ ಮಾಡಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಜಿಯಾವುಲ್ಲಾ ಮಲ್ಲಿಕ್ ಎನ್ನುವಾತ ಸೆಕ್ಯೂರಿಟಿ ಗಾರ್ಡ್ ಕೈಗೆ ಸಿಕ್ಕಿಬಿದ್ದಿದ್ದಾನೆ. ಬೆಂಗಳೂರಿನ ಯಶವಂತಪುರದಲ್ಲಿ ವಾಸವಿದ್ದ ಆರೋಪಿ ಜಿಯಾವುಲ್ಲಾ ಮಲ್ಲಿಕ್, ರಸ್ತೆಯಲ್ಲಿ ಸಿಕ್ಕ ವಿದ್ಯಾರ್ಥಿಯೊಬ್ಬರ ಐಡಿ ಕಾರ್ಡ್ ಬಳಸಿಕೊಂಡು ಈ ಕೃತ್ಯ ಎಸಗುತ್ತಿದ್ದ. ಈಗ ಕ್ಯಾಂಪಸ್​ನಲ್ಲಿ ಪದೇ ಪದೇ ನಡೆಯುತ್ತಿದ್ದ ಕಳ್ಳತನ ಪ್ರಕರಣಗಳಿಗೆ ಫುಲ್ ಸ್ಟಾಪ್ ಬಿದ್ದಿದೆ.

ರಸ್ತೆಯಲ್ಲಿ ಸಿಕ್ಕ ವಿದ್ಯಾರ್ಥಿ ಐಡಿ ಕಾರ್ಡ್ ಬಳಸಿಕೊಂಡು ಐಐಎಸ್ ಸಿ ಹಾಸ್ಟಲ್​ನೊಳಗೆ ನುಸುಳುತ್ತಿದ್ದ. ಹಾಸ್ಟೆಲ್ ವಿದ್ಯಾರ್ಥಿಗಳ ಬೆಲೆ ಬಾಳುವ ವಸ್ತುಗಳನ್ನು ಕಳ್ಳತನ ಮಾಡುಕೊಂಡು ಹೋಗುತ್ತಿದ್ದ. ವಿದ್ಯಾರ್ಥಿ ವೇಷದಲ್ಲಿ ಬಂದು ಕಳ್ಳತನ ಮಾಡುತ್ತಿದ್ದ. ಐಐಎಸ್ ಸಿ ಬಾಯ್ಸ್ ಹಾಸ್ಟೆಲ್ ನಲ್ಲಿ ಲ್ಯಾಪ್ ಟಾಪ್, ಕ್ಯಾಮೆರಾ, ನಗದು ಹಣ, 200 ಯುಎಸ್ ಡಾಲರ್, 5 ಯೂರೋ ಸೇರಿ ಹಲವು ವಸ್ತುಗಳ ಕಳ್ಳತನ ಮಾಡಿದ್ದ.

ಎಂಟೆಕ್ ವಿದ್ಯಾರ್ಥಿ ಐಡಿ ಕಾರ್ಡ್ ಬಳಸಿಕೊಂಡು ಐಐಎಸ್ ಸಿ ಆವರಣದಲ್ಲಿ ರಾಜಾರೋಷವಾಗಿ ಓಡಾಡುತ್ತಿದ್ದ ಖತರ್ನಾಕ್ ಕಳ್ಳ. ಈ ವೇಳೆ ಅನುಮಾನ ಬಂದು ಸೆಕ್ಯೂರಿಟಿ ಪ್ರಶ್ನೆ ಮಾಡಿದ್ದಾನೆ. ಆ ವೇಳೆ ಐಡಿ ಕಾರ್ಡ್ ಬಗ್ಗೆ ಪ್ರಶ್ನೆ ಮಾಡುತ್ತಿದ್ದಂತೆ ಜಿಯಾವುಲ್ಲಾ ಮಲ್ಲಿಕ್ ತಬ್ಬಿಬ್ಬಾಗಿದ್ದಾನೆ. ಬಳಿಕ ಸೆಕ್ಯೂರಿಟಿ ಮತ್ತು ಸೂಪರ್ ವೈಸರ್ ಗಳು ವಿಚಾರಿಸಿದಾಗ ಕಳ್ಳತನಕ್ಕೆ ಬಂದಿರುವ ಗೊತ್ತಾಗಿದೆ. ಬಳಿಕ ಐಐಎಸ್ ಸಿ ಅಧಿಕಾರಿಗಳು ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಬಗ್ಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸದ್ಯ ಆರೋಪಿ ಜಿಯಾವುಲ್ಲಾ ಮಲ್ಲಿಕ್​ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

Ramesh Babu

Journalist

Recent Posts

ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆ: ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…

4 hours ago

ಕೊಡಿಪಾಳ್ಯ ಬಳಿ ಕ್ಯಾಂಟರ್ ಪಲ್ಟಿ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…

6 hours ago

ಮೊಬೈಲ್ ಕಳೆದುಹೋದರೆ ಗಾಬರಿ ಬೇಡ: ತಕ್ಷಣದ ಕ್ರಮವೇ ರಕ್ಷಣೆ: ಮೊಬೈಲ್‌ ಕಳೆದುಹೋದ 10 ನಿಮಿಷಗಳಲ್ಲಿ ಮಾಡಬೇಕಾದ 7 ಕೆಲಸಗಳು ಇಲ್ಲಿವೆ ನೋಡಿ…

ಬೆಂಗಳೂರು ಗ್ರಾಮಾಂತರ: ಮೊಬೈಲ್‌ ಫೋನ್‌ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್‌ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್‌ ಕೇವಲ ಸಂಪರ್ಕ…

8 hours ago

ಎಸ್ಐಆರ್ ಅಕ್ರಮ ಹಾಗೂ ಬರ ಪರಿಹಾರ ವಿಳಂಬ: ಕೇಂದ್ರ ಮತ್ತು ವಿಪಕ್ಷದ ವಿರುದ್ಧ ಸಚಿವ ಚಲುವರಾಯಸ್ವಾಮಿ ಆಕ್ರೋಶ

ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…

8 hours ago

ಬರ ಪರಿಹಾರಕ್ಕೆ 60 ಸಾವಿರ ಕೋಟಿ ನಷ್ಟದ ಅಂದಾಜು- ಡಿಸಿಎಂ ಡಾ.ಜಿ ಪರಮೇಶ್ವರ್

ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…

10 hours ago

“ಸರ್ಕಾರದ ಕೆಲಸ ದೇವರ ಕೆಲಸ ” ಎಂದು ಹೇಳುವವರು ದೇವರಿಗೂ ವಂಚಿಸುತ್ತಿದ್ದಾರೆ…

ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…

15 hours ago