
ವಿದ್ಯುತ್ ಕಂಬಕ್ಕೆ ಕಂಟೈನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಬ್ಬಿಣದ ವಿದ್ಯುತ್ ಕಂಬ ಬುಡದ ಸಮೇತ ಕಿತ್ತುಬಂದಿದ್ದು, ಮನೆಗಳಿಗೆ ಹಾದುಹೋಗಿರುವ ವಿದ್ಯುತ್ ತಂತಿಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಘಟನೆ ಇಂದು ಬೆಳಗ್ಗೆ ಸುಮಾರು 7 ಗಂಟೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಗ್ರಾಮದಲ್ಲಿ ನಡೆದಿದೆ….

ವಿದ್ಯುತ್ ಕಂಬಗಳು ಹಾಗೂ ವಿದ್ಯುತ್ ತಂತಿಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಕಾರಣ ವಿದ್ಯುತ್ ಶಾಕ್ ಭಯದಿಂದ ಜನರು ಭಯಭೀತರಾಗಿದ್ದಾರೆ. ಅದೇರೀತಿ ನೆಲಮಂಗಲ ಹಾಗೂ ದೊಡ್ಡಬಳ್ಳಾಪುರಕ್ಕೆ ಬರುವ ಹಾಗೂ ಹೋಗುವ ವಾಹನಗಳು ರಸ್ತೆಯಲ್ಲೇ ನಿಂತಿವೆ.

ಇಂದು ಬೆಳಗ್ಗೆ ಸುಮಾರು 7 ಗಂಟೆಯಲ್ಲಿ ದೊಡ್ಡಬಳ್ಳಾಪುರದಿಂದ ನೆಲಮಂಗಲ ಕಡೆ ಹರಿಯಾಣ ಮೂಲದ ಕಂಟೈನರ್ ಲಾರಿ ರಸ್ತೆ ಬದಿಯಲ್ಲಿದ್ದ ಕಬ್ಬಣಿದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ… ಇದರಿಂದ ಬುಡದ ಸಮೇತ ವಿದ್ಯುತ್ ಕಂಬ ಕಿತ್ತುಬಂದು ನಡು ರಸ್ತೆಯಲ್ಲಿ ಬಿದ್ದಿದೆ. ಈ ಕಂಬದಿಂದ ಬೇರೆ ಕಂಬಗಳಿಗೆ ಹಾದು ಹೋಗಿರುವ ವಿದ್ಯುತ್ ಲೈನ್ ಗಳು ಸಹ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಇದರಿಂದ ಸಾರ್ವಜನಿಕರು, ವಾಹನ ಸವಾರರಿಗೆ ತೀವ್ರ ತೊಂದರೆ ಉಂಟಾಗಿದೆ….

ನೆಲಮಂಗಲ ಹಾಗೂ ದೊಡ್ಡಬಳ್ಳಾಪುರ ರಸ್ತೆಯು ಅರಳುಮಲ್ಲಿಗೆ ಗ್ರಾಮದಲ್ಲಿ ಹಾದುಹೋಗುತ್ತದೆ. ಗ್ರಾಮದಲ್ಲಿ ರಸ್ತೆ ವಿಸ್ತರಣೆ ಆಗಿಲ್ಲ. ಐದಾರು ಅಡಿ ಆಳದಷ್ಟು ರಸ್ತೆ ಗುಂಡಿಗಳು ರಸ್ತೆಯಲ್ಲಿ ಬಿದ್ದಿದ್ದರು ಮುಚ್ಚಿಲ್ಲ. ಭಾರೀ ಗ್ರಾತ್ರದ ವಾಹನಗಳು ಟೋಲ್ ತಪ್ಪಿಸಲು ಈ ಮಾರ್ಗದಲ್ಲಿ ಬಂದು ಗ್ರಾಮದ ಜನತೆಗೆ ತುಂಬಾ ತೊಂದರೆ ಕೊಡುತ್ತಿದ್ದಾರೆ ಎಂದು ಊರಿನ ಗ್ರಾಮಸ್ಥರು ಆಕ್ರೋಶವ್ಯಕ್ತಪಡಿಸಿದರು…