ವಿದ್ಯುತ್ ಕಂಬಕ್ಕೆ ಕಂಟೈನರ್ ಲಾರಿ ಡಿಕ್ಕಿ: ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದ ವಿದ್ಯುತ್ ತಂತಿಗಳು: ಸಂಚಾರ ಅಸ್ತವ್ಯಸ್ತ: ತಪ್ಪಿದ ಭಾರೀ ಅನಾಹುತ

ವಿದ್ಯುತ್ ಕಂಬಕ್ಕೆ ಕಂಟೈನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಬ್ಬಿಣದ ವಿದ್ಯುತ್ ಕಂಬ ಬುಡದ ಸಮೇತ ಕಿತ್ತುಬಂದಿದ್ದು, ಮನೆಗಳಿಗೆ ಹಾದುಹೋಗಿರುವ ವಿದ್ಯುತ್ ತಂತಿಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಘಟನೆ  ಇಂದು ಬೆಳಗ್ಗೆ ಸುಮಾರು 7 ಗಂಟೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಅರಳುಮಲ್ಲಿಗೆ ಗ್ರಾಮದಲ್ಲಿ ನಡೆದಿದೆ….

ವಿದ್ಯುತ್ ಕಂಬಗಳು ಹಾಗೂ ವಿದ್ಯುತ್ ತಂತಿಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ಕಾರಣ ವಿದ್ಯುತ್ ಶಾಕ್ ಭಯದಿಂದ ಜನರು ಭಯಭೀತರಾಗಿದ್ದಾರೆ. ಅದೇರೀತಿ ನೆಲಮಂಗಲ ಹಾಗೂ ದೊಡ್ಡಬಳ್ಳಾಪುರಕ್ಕೆ ಬರುವ ಹಾಗೂ ಹೋಗುವ ವಾಹನಗಳು ರಸ್ತೆಯಲ್ಲೇ ನಿಂತಿವೆ.

ಇಂದು ಬೆಳಗ್ಗೆ ಸುಮಾರು 7 ಗಂಟೆಯಲ್ಲಿ ದೊಡ್ಡಬಳ್ಳಾಪುರದಿಂದ ನೆಲಮಂಗಲ ಕಡೆ ಹರಿಯಾಣ ಮೂಲದ ಕಂಟೈನರ್ ಲಾರಿ ರಸ್ತೆ ಬದಿಯಲ್ಲಿದ್ದ ಕಬ್ಬಣಿದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ… ಇದರಿಂದ ಬುಡದ ಸಮೇತ ವಿದ್ಯುತ್ ಕಂಬ ಕಿತ್ತುಬಂದು ನಡು ರಸ್ತೆಯಲ್ಲಿ ಬಿದ್ದಿದೆ. ಈ ಕಂಬದಿಂದ ಬೇರೆ ಕಂಬಗಳಿಗೆ ಹಾದು ಹೋಗಿರುವ ವಿದ್ಯುತ್ ಲೈನ್ ಗಳು ಸಹ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ. ಇದರಿಂದ ಸಾರ್ವಜನಿಕರು, ವಾಹನ ಸವಾರರಿಗೆ ತೀವ್ರ ತೊಂದರೆ ಉಂಟಾಗಿದೆ….

ನೆಲಮಂಗಲ ಹಾಗೂ ದೊಡ್ಡಬಳ್ಳಾಪುರ ರಸ್ತೆಯು  ಅರಳುಮಲ್ಲಿಗೆ ಗ್ರಾಮದಲ್ಲಿ ಹಾದುಹೋಗುತ್ತದೆ. ಗ್ರಾಮದಲ್ಲಿ ರಸ್ತೆ ವಿಸ್ತರಣೆ ಆಗಿಲ್ಲ. ಐದಾರು ಅಡಿ ಆಳದಷ್ಟು ರಸ್ತೆ ಗುಂಡಿಗಳು ರಸ್ತೆಯಲ್ಲಿ ಬಿದ್ದಿದ್ದರು ಮುಚ್ಚಿಲ್ಲ. ಭಾರೀ ಗ್ರಾತ್ರದ ವಾಹನಗಳು ಟೋಲ್ ತಪ್ಪಿಸಲು ಈ ಮಾರ್ಗದಲ್ಲಿ ಬಂದು ಗ್ರಾಮದ ಜನತೆಗೆ ತುಂಬಾ ತೊಂದರೆ ಕೊಡುತ್ತಿದ್ದಾರೆ ಎಂದು ಊರಿನ‌ ಗ್ರಾಮಸ್ಥರು ಆಕ್ರೋಶವ್ಯಕ್ತಪಡಿಸಿದರು…

Ramesh Babu

Journalist

Recent Posts

ಮಾರ್ಖಂಡೇಯ ಜಲಾಶಯದ ನೀರು ಪೋಲು ತಡೆಗೆ ಚಲುವರಾಯಸ್ವಾಮಿ ಖಡಕ್ ಸೂಚನೆ

ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್‌. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…

5 hours ago

ಪೊಲೀಸರೆಂದು ನಂಬಿಸಿ ವೃದ್ಧ ದಂಪತಿಗೆ ಚಿನ್ನಾಭರಣ ವಂಚನೆ: ಇಬ್ಬರು ಆರೋಪಿಗಳು ವಶಕ್ಕೆ: ದೂರುದಾರರಿಗೆ ಚಿನ್ನಾಭರಣ ಹಸ್ತಾಂತರ

ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…

9 hours ago

ಮಳೆ ಕೊರತೆ; ಮತ್ಸ್ಯ ಕೃಷಿಗೂ ಹೊಡೆತ!

ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…

12 hours ago

ಬರಿದಾಗುತ್ತಿರುವ ಕರ್ನಾಟಕದ ಖಜಾನೆ…….

ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…

15 hours ago

ವಾಲ್ಮೀಕಿ ಜಯಂತಿ ರಜೆ ದಿನಾಂಕ ಬದಲು

ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…

1 day ago

ನೇಯ್ಗೆ ಉದ್ಯಮದ ಕಚ್ಚಾ ವಸ್ತುಗಳ ಬೆಲೆ ಏರಿಕೆಗೆ ಖಂಡನೆ: ನೇಕಾರ ಹೋರಾಟ ಸಮಿತಿಯಿಂದ ಪ್ರತಿಭಟನೆ

ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…

1 day ago