ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾರಿನ ಮೇಲೆ ವಿದ್ಯುತ್ ಕಂಬ ಮುರಿದು ಬಿದ್ದಿರುವ ಘಟನೆ ತಾಲೂಕಿನ ಘಾಟಿ ರಸ್ತೆಯ ತಿರುಮಗೊಂಡನಹಳ್ಳಿ ಸಮೀಪ ಕಳೆದ ರಾತ್ರಿ ನಡೆದಿದೆ..
ಘಾಟಿ ಕಡೆಯಿಂದ ದೊಡ್ಡಬಳ್ಳಾಪುರಕ್ಕೆ ಬರುವ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಸದ್ಯ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆಯಲ್ಲಿ ಕಾರು ಜಖಂಗೊಂಡಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…