ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳೀಯರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದರು.
ಅರಳುಮಲ್ಲಿಗೆ ಗ್ರಾಮದಲ್ಲಿ ರಸ್ತೆ ಕಿರಿದಾಗಿರುವುದರಿಂದ ಭಾರೀ ವಾಹನಗಳ ಸಂಚಾರಕ್ಕೆ ನಿರಂತರ ಸಮಸ್ಯೆ ಎದುರಾಗುತ್ತಿದೆ. ರಸ್ತೆ ತಿರುವುಗಳು ಹಾಗೂ ಕಡಿಮೆ ಅಗಲದಿಂದ ಅಪಘಾತಗಳ ಸಂಭವ ಹೆಚ್ಚಾಗುತ್ತಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
ರಸ್ತೆಯನ್ನು ವಿಸ್ತರಿಸುವುದು ಹಾಗೂ ಗ್ರಾಮದೊಳಗೆ ಭಾರೀ ವಾಹನಗಳ ಓಡಾಟಕ್ಕೆ ನಿಯಂತ್ರಣ ವಿಧಿಸುವಂತೆ ಸ್ಥಳೀಯರು ಹಲವು ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಆಲಹಳ್ಳಿ ಅಜಯ್ ಆರೋಪಿಸಿದ್ದಾರೆ.
ಈ ಘಟನೆ ಬಳಿಕ ಗ್ರಾಮಸ್ಥರು ಮತ್ತೊಮ್ಮೆ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು, ರಸ್ತೆ ವಿಸ್ತರಣೆ ಕಾಮಗಾರಿ ಶೀಘ್ರ ಆರಂಭಿಸಬೇಕು ಹಾಗೂ ಭಾರೀ ವಾಹನಗಳ ಸಂಚಾರಕ್ಕೆ ಸೂಕ್ತ ನಿಯಮಗಳನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ. ಸ್ಥಳೀಯರ ಮನವಿಗೆ ಸ್ಪಂದಿಸದೆ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿರುವುದು ಗ್ರಾಮಸ್ಥರ ಅಸಮಾಧಾನಕ್ಕೆ ಕಾರಣವಾಗಿದೆ.
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…
ದೊಡ್ಡಬಳ್ಳಾಪುರ: ಕುಡಿದ ಮತ್ತಿನಲ್ಲಿ ಪರಸ್ಪರ ಜಗಳವಾಡುತ್ತಿದ್ದವರನ್ನು ಬಿಡಿಸಲು ತೆರಳಿದ್ದ 112 ತುರ್ತು ಸೇವೆಯ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ ಆರೋಪ…
ದೊಡ್ಡಬಳ್ಳಾಪುರ: ನಗರದ ಡಾ. ಬಿ.ಆರ್. ಅಂಬೇಡ್ಕರ್ (ಟಿಬಿ) ವೃತ್ತದಲ್ಲಿ ಮ್ಯಾನ್‌ಹೋಲ್ ತುಂಬಿ ತುಳುಕುತ್ತಿದ್ದು, ಕೊಳಚೆ ನೀರು ಹೆದ್ದಾರಿಗೆ ಹರಿದು ವಾಹನ…
ದೊಡ್ಡಬಳ್ಳಾಪುರ: ನಗರದ ಉಪವಿಭಾಗಾಧಿಕಾರಿ (ಎಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಲೋಕಾಯುಕ್ತ…
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…