ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ

ದೊಡ್ಡಬಳ್ಳಾಪುರ: ಹೊನ್ನದೇವಿಪುರ ಗೇಟ್ ಬಳಿಯ ಹಂದಿ ಫಾರಂನ ಗೂಡ್ಸ್ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಕಾಡನೂರು ಗ್ರಾಮದ ಬಳಿ ತಡರಾತ್ರಿ ಸುಮಾರು 12.30ರ ವೇಳೆಗೆ ನಡೆದಿದೆ.

ಬೆಂಗಳೂರಿಗೆ ವೇಸ್ಟೇಜ್ ತರಲು ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಮುರಿದು ಬಿದ್ದಿದ್ದು, ವಾಹನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಬೆಸ್ಕಾಂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮುರಿದುಬಿದ್ದ ವಿದ್ಯುತ್ ಕಂಬ ತೆರವು ಹಾಗೂ ದುರಸ್ತಿ ಕಾರ್ಯಕ್ಕೆ ಕ್ರಮ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!