
ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಗೆ ಗಂಭೀರ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಹೋಬಳಿಯ ಸಕ್ಕರೆಗೊಲ್ಲಹಳ್ಳಿ ಬಳಿ ಇಂದು ರಾತ್ರಿ ಸುಮಾರು 8:30ರಲ್ಲಿ ನಡೆದಿದೆ….

ಚಿಕ್ಕಬೆಳವಂಗಲ ಕಡೆಯಿಂದ ಗುಮ್ಮನಹಳ್ಳಿ ಕಡೆ ಹೋಗುವ ವೇಳೆ ಆಯಾತಪ್ಪಿದ ಬೈಕ್ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಸಾಸಲು ಹೋಬಳಿಯ ಗುಮ್ಮನಹಳ್ಳಿ ಗ್ರಾಮದವರು ಎಂದು ಹೇಳಲಾಗುತ್ತಿದೆ… ಸದ್ಯ ಗಾಯಾಳುಗಳನ್ನು ಕೂಡಲೇ ಸ್ಥಳೀಯರ ಸಹಾಯದಿಂದ ಆಸ್ಪತ್ರೆಗೆ ರವಾನಿಸಲಾಗಿದೆ.. ಯಾವುದೇ ಪ್ರಾಣಾಪಯ ಸಂಭವಿಸಿಲ್ಲ…
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಸಲಾಗಿದೆ….
ದೊಡ್ಡಬೆಳವಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ….