ವಿದ್ಯುತ್ ಕಂಬಗಳನ್ನ ಸಾಗಿಸುತ್ತಿದ್ದ ಟ್ರ್ಯಾಕ್ಟರ್​​ಗೆ ಖಾಸಗಿ ಬಸ್ ಡಿಕ್ಕಿ: ಟ್ರ್ಯಾಕ್ಟರ್​ನಲ್ಲಿದ್ದ ಓರ್ವ ವ್ಯಕ್ತಿ ಸಾವು: ಮೂವರ ಸ್ಥಿತಿ ಗಂಭೀರ

 

ಕೋಲಾರ : ವಿದ್ಯುತ್ ಕಂಬಗಳನ್ನ ಸಾಗಿಸುತ್ತಿದ್ದ ಟ್ರ್ಯಾಕ್ಟರ್​​ಗೆ ಖಾಸಗಿ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಟ್ರ್ಯಾಕ್ಟರ್​ನಲ್ಲಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಕೋಲಾರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ-75ರ ನಾಗಲಾಪುರ ಗೇಟ್ ಬಳಿ ಇಂದು ನಡೆದಿದೆ.

ಅಪಘಾತದಲ್ಲಿ ಗಾಯಗೊಂಡಿರುವ ಗಾಯಾಳುಗಳನ್ನು ಎಸ್​​​ಎನ್​​​ಆರ್​​​ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು, ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪಘಾತಕ್ಕೆ ಅತಿವೇಗ ಹಾಗೂ ಅಜಾಗರೂಕತೆಯೇ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದಾರೆ. ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *