ವಿದ್ಯುತ್ ಕಂಬದಿಂದ ತುಂಡಾಗಿ ಕೆಳಗೆ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಕಾರ್ನಾಳ ಗ್ರಾಮದಲ್ಲಿ ಇಂದು ಸಂಜೆ ನಡೆದಿದೆ…..
ಲಲಿತಮ್ಮ (55), ಸಂಜಯ್(45) ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ದುರ್ದೈವಿಗಳು. ಲಕ್ಷ್ಮಿದೇವಿ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ….
ವಿದ್ಯುತ್ ಕಂಬದಿಂದ ಮನೆಗೆ ಎಳೆದಿದ್ದ ವಿದ್ಯುತ್ ತಂತಿ ತುಂಡಾಗಿ ಕೆಳಗೆ ಬಿದ್ದುತ್ತು. ಇದನ್ನು ಗಮನಿಸದ ಲಲಿತಮ್ಮ ಒಣಗಾಕಿದ್ದ ಬಟ್ಟೆಯನ್ನು ತೆಗೆದುಕೊಳ್ಳಲು ಹೋದಾಗ ವಿದ್ಯುತ್ ತಂತಿ ಸ್ಪರ್ಶಿಸಿದೆ. ಇದನ್ನು ಗಮನಿಸಿದ ಸಂಜಯ್ ಲಲಿತಮ್ಮನನ್ನು ಕಾಪಾಡಲು ಹೋದಾಗ ಅವರಿಗೂ ವಿದ್ಯುತ್ ಸ್ಪರ್ಶಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಂಜಯ್ ಅವರನ್ನು ಕಾಪಾಡಲು ಲಕ್ಷ್ಮಿದೇವಿ ಮುಂದಾಗಿದ್ದಾಗ ಅವರಿಗೂ ಅಲ್ಪ ಪ್ರಮಾಣದಲ್ಲಿ ವಿದ್ಯುತ್ ಸ್ಪರ್ಶಿಸಿದ್ಧರಿಂದ ಕೈಗಳಿಗೆ ಸುಟ್ಟ ಗಾಯಳಾಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ….
ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಹಾಗೂ ಬೆಸ್ಕಾಂ ಇಲಾಖೆ ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….