ವಿದ್ಯುತ್ ಕಂಬದಿಂದ ತುಂಡಾಗಿ ಕೆಳಗೆ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, ಮತ್ತೊಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಕಾರ್ನಾಳ ಗ್ರಾಮದಲ್ಲಿ ಇಂದು ಸಂಜೆ ನಡೆದಿದೆ…..
ಲಲಿತಮ್ಮ (55), ಸಂಜಯ್(45) ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿರುವ ದುರ್ದೈವಿಗಳು. ಲಕ್ಷ್ಮಿದೇವಿ(43) ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ….
ಈ ಹಿನ್ನೆಲೆ ಘಟನಾ ಸ್ಥಳಕ್ಕೆ ಹಾಗೂ ಆಸ್ಪತ್ರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಇನ್ಸ್ ಪೆಕ್ಟರ್ ಸಾಧಿಕ್ ಪಾಷಾ ಹಾಗೂ ಬೆಸ್ಕಾಂ ಅಧಿಕಾರಿಗಳು, ಸಿಬ್ಬಂದಿ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ….
ಸದ್ಯ ಮೃತದೇಹಗಳು ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿದ್ದು, ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಘಟನೆ ವಿವರ…
ವಿದ್ಯುತ್ ಕಂಬದಿಂದ ಮನೆಗೆ ಎಳೆದಿದ್ದ ವಿದ್ಯುತ್ ತಂತಿ ತುಂಡಾಗಿ ಕೆಳಗೆ ಬಿದ್ದುತ್ತು. ಇದನ್ನು ಗಮನಿಸದ ಲಲಿತಮ್ಮ ಒಣಗಾಕಿದ್ದ ಬಟ್ಟೆಯನ್ನು ತೆಗೆದುಕೊಳ್ಳಲು ಹೋದಾಗ ವಿದ್ಯುತ್ ತಂತಿ ಸ್ಪರ್ಶಿಸಿದೆ. ಇದನ್ನು ಗಮನಿಸಿದ ಸಂಜಯ್ ಲಲಿತಮ್ಮನನ್ನು ಕಾಪಾಡಲು ಹೋದಾಗ ಅವರಿಗೂ ವಿದ್ಯುತ್ ಸ್ಪರ್ಶಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಂಜಯ್ ಅವರನ್ನು ಕಾಪಾಡಲು ಲಕ್ಷ್ಮಿದೇವಿ ಮುಂದಾಗಿದ್ದಾಗ ಅವರಿಗೂ ಗಂಭೀರ ಗಾಯಳಾಗಿವೆ ಎಂದು ಸ್ಥಳೀಯರು ತಿಳಿಸಿದ್ದಾರೆ….
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ….
ಮರ್ಯಾದಾ ಹತ್ಯೆ........ ಕ್ಷಮಿಸಿ ಬಿಡು ಮಾನ್ಯ ಎಂಬ ಹುಬ್ಬಳ್ಳಿ ಹತ್ತಿರದ ನನ್ನ ಗರ್ಭಿಣಿ ತಂಗಿಯೇ..... ನಮ್ಮದೇ ದೇಶದ, ನಮ್ಮದೇ…
ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್ ನಿಂದ ಫೋನ್ ಪೇ ಮೂಲಕ 80 ಸಾವಿರ ಮೋಸದಿಂದ ಪಡೆದು ಆಸ್ಪತ್ರೆಗೂ ಸಹ ದಾಖಲಿಸದೇ…
ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ…
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…