ವಿದ್ಯುತ್ ದರ ಏರಿಕೆ ಖಂಡಿಸಿ ಬೃಹತ್ ಪ್ರತಿಭಟನೆ

ವಿದ್ಯುತ್ ಚಾಲಿತ ನೇಕಾರ ಕೂಲಿ ಕಾರ್ಮಿಕರ ಸಂಘ ಹಾಗೂ ಇತರೆ ಸಂಘ‌ ಸಂಸ್ಥೆಗಳ ವತಿಯಿಂದ ವಿದ್ಯುತ್ ದರ ಏರಿಕೆ ಖಂಡಿಸಿ ನಗರದ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ ಬಳಿ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾಕಾರರ ಬೇಡಿಕೆ

*ನೇಕಾರಿಕೆ ಉದ್ಯೋಗಕ್ಕಾಗಿ ಸರ್ಕಾರ ರೂಪಿಸಿರುವ ವಿಶೇಷ ಯೋಜನೆಯ ಒಂದು ರೂಪಾಯಿ 25ಪೈಸಾ ದರದಲ್ಲಿ ವಿದ್ಯುತ್ ಬಿಲ್ ಬರಬೇಕು

*ನೇಕಾರಿಕೆ ಮೀಟರ್ ಮಿನಿಮಮ್ ಚಾರ್ಜ್ ಎಚ್.ಪಿ‌ ಒಂದಕ್ಕೆ 80 ರಿಂದ 140 ಏರಿಸಿರುವ ಹಾಗೂ ಎಫ್.ಎಸಿ ಶುಲ್ಕ ತಕ್ಷಣ ರದ್ದುಗೊಳಿಸಬೇಕು

* ಹೊಂದಾಣಿಕೆ ಶುಲ್ಕ ಹಾಗೂ ಇತರೆ ಶುಲ್ಕಗಳನ್ನು ತಕ್ಷಣ ರದ್ದುಗೊಳಿಸಬೇಕು

*ಕೆಟ್ಟು ಹೋಗಿರುವ ಮೀಟರ್ ಗಳನ್ನು ಯಾವುದೇ ಶುಲ್ಕ ತೆಗೆದುಕೊಳ್ಳದೆ ತಕ್ಷಣ ಬದಲಾವಣೆ ಮಾಡಿಕೊಡಬೇಕು.

*ಹೆಚ್ಚಾಗಿರುವ ಹೆಚ್.ಪಿಯನ್ನು ಕಡಿಮೆ ಮಾಡಿಕೊಳ್ಳಲು ಯಾವುದೇ ಶುಲ್ಕ ಪಡೆಯಬಾರದು

*ಆರ್ ಆರ್ ಸಂಖ್ಯೆಯಲ್ಲಿ ನಮೂದಾಗಿರುವ ವ್ಯಕ್ತಿಯೂ ಮರಣಹೊಂದಿದ್ದಲ್ಲಿ ಅವರ ಹೆಸರನ್ನು ತೆಗೆದು ಕುಟುಂಬದ ಸದಸ್ಯರಿಗೆ ವರ್ಗಾವಣೆ ಮಾಡಬೇಕು

* ನೇಕಾರಿಕೆ ಬಿಲ್ ಗಳನ್ನು ಬಿಲ್ ಬಂದ ದಿನದಿಂದ30 ದಿನಗಳ ಗಡುವು ಕೊಡಬೇಕು

* ಗೃಹಬಳಕೆ ವಿದ್ಯುತ್ ಸ್ಲಾಬ್ 50 ಯೂನಿಟ್ ಗಳಿಂದ ಪ್ರಾರಂಭಿಸಬೇಕು ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟು ಪ್ರತಿಭಟನೆ ನಡೆಸಲಾಯಿತು.

Ramesh Babu

Journalist

Recent Posts

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

6 hours ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

10 hours ago

ಸಮಾಜಸೇವೆ ಮೂಲಕ ಹುಟ್ಟುಹಬ್ಬ ಆಚರಣೆ ಎಲ್ಲರಿಗೂ ಮಾದರಿ: ಸಂಜೀವ್ ನಾಯಕ್

ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…

11 hours ago

ನಾಡಕಚೇರಿ, ಕಾವೇರಿ ತಂತ್ರಾಂಶಕ್ಕೆ ತಾಂತ್ರಿಕ ಗ್ರಹಣ! ಸರ್ವರ್ ಸಮಸ್ಯೆಯಿಂದ ಸರ್ಕಾರಿ ಸೇವೆಗಳಿಗೆ ಬ್ರೇಕ್‌; ಕಚೇರಿಗಳಿಗೆ ಅಲೆದು ಹೈರಾಣಾದ ಜನರು

ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…

12 hours ago

ದೊಡ್ಡಬಳ್ಳಾಪುರದಲ್ಲಿ 4 ಲಕ್ಷ ಮೌಲ್ಯದ ಗಾಂಜಾ ವಶ: ಆರೋಪಿ ಬಂಧನ

ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…

14 hours ago

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆ

ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್‌ (MIL)…

17 hours ago