ಬೆಂಗಳೂರು, ವೈಟ್‌ಫೀಲ್ಡ್: ಮೂರು ತಿಂಗಳ ಹಿಂದೆ ಸಂಭವಿಸಿದ ಭೀಕರ ವಿದ್ಯುತ್ ಅಪಘಾತದಿಂದ ತೀವ್ರವಾಗಿ ಗಾಯಗೊಂಡ 17 ವರ್ಷದ ಪಶ್ಚಿಮ ಬಂಗಾಳ ಮೂಲದ ಯುವಕನಿಗೆ, ಮೆದುಳಿಗೆ ಫಂಗಸ್ ಹಿಡಿದಷ್ಟು ಗಂಭೀರ ಸ್ಥಿತಿಯಲ್ಲಿದ್ದರೂ, ಮೆಡಿಕವರ್ ಆಸ್ಪತ್ರೆಯ ನ್ಯೂರೋ ಸರ್ಜನ್ ಡಾ. ದೀಪಕ್ ಅವರ ಶಸ್ತ್ರಚಿಕಿತ್ಸೆಯಿಂದ ಹೊಸ ಬದುಕು ದೊರೆತಿದೆ.
ಆಘಾತದ ಪರಿಣಾಮವಾಗಿ ಯುವಕನ ಬಲ ಪಾರಿಯೆಟಲ್ ಭಾಗದ ತ್ವಚೆ ಮತ್ತು ಮೂಳೆ ಸಂಪೂರ್ಣವಾಗಿ ಹಾನಿಯಾಗಿದ್ದು, ಮೆದುಳಿನ ಭಾಗವೇ ಹೊರಬಿದ್ದಂತಹ ಪರಿಸ್ಥಿತಿ ಉಂಟಾಗಿತ್ತು. ಅಲ್ಲದೇ, ಆ ಭಾಗದಲ್ಲಿ ಸೋಂಕು ಹರಡಿದ ಪರಿಣಾಮ ಫಂಗಲ್ ಇನ್ಫೆಕ್ಷನ್ ಕೂಡ ಅಭಿವೃದ್ಧಿಯಾಗಿತ್ತು.
ಪಶ್ಚಿಮ ಬಂಗಾಳದಲ್ಲಿ ಆರಂಭಿಕ ಚಿಕಿತ್ಸೆ ಪಡೆದರೂ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ. ನಂತರ ಯುವಕನನ್ನು ಬೆಂಗಳೂರಿನ ವೈಟ್‌ಫೀಲ್ಡ್‌ನ ಮೆಡಿಕವರ್ ಆಸ್ಪತ್ರೆಗೆ ತರಲಾಗಿದ್ದು, ನ್ಯೂರೋ ಸರ್ಜನ್ ಡಾ. ದೀಪಕ್ ಅವರ ಸಲಹೆಯ ಮೇರೆಗೆ ತಕ್ಷಣವೇ ಶಸ್ತ್ರಚಿಕಿತ್ಸೆ ಕೈಗೊಳ್ಳಲಾಯಿತು.
ಆಗಮಿಸಿದಾಗ ಯುವಕನ ದೇಹದ ಎಡಭಾಗ ಸಂಪೂರ್ಣವಾಗಿ ದುರ್ಬಲವಾಗಿತ್ತು. ಡಾ. ದೀಪಕ್ ಅವರು ಮೆದುಳಿನ ಗಾಯದ ಭಾಗವನ್ನು ಕ್ಲೀನಿಂಗ್ ಮಾಡಿ, ಮೆದುಳಿನ ಮತ್ತು ಫ್ಲ್ಯಾಪ್ ಪುನರ್ ನಿರ್ಮಾಣ ಶಸ್ತ್ರಚಿಕಿತ್ಸೆ ನಡೆಸಲಾಯ್ತು. ಇದು ಅಪರೂಪದ ಹಾಗೂ ಅಪಾಯಕಾರಿಯಾದ ಶಸ್ತ್ರಚಿಕಿತ್ಸೆಯಾಗಿದ್ದು, ಅದನ್ನು ಯಶಸ್ವಿಯಾಗಿ ನೆರವೇರಿಸಿದರು.ಇಂದು ಯುವಕ ಸಂಪೂರ್ಣ ಗುಣಮುಖನಾಗಿ ತಾನು ಮನೆಗೆ ಮರಳಿದ್ದಾನೆ.
“ಇದು ಕೇವಲ ಶಸ್ತ್ರಚಿಕಿತ್ಸೆಯಲ್ಲ, ಜೀವದ ಮೇಲಿನ ವಿಜಯದ ಕಥೆಯಾಗಿದೆ. ಇಂತಹ ಪ್ರಕರಣಗಳು ನಮ್ಮ ಕರ್ತವ್ಯ ಮತ್ತು ಸಾಮರ್ಥ್ಯವನ್ನು ಸದಾ ನೆನಪಿಸುತ್ತವೆ,” ಎಂದು ಡಾ. ದೀಪಕ್ ಸಂತಸ ವ್ಯಕ್ತಪಡಿಸಿದರು.
ಬೆಳಗಾವಿ ಜಿಲ್ಲೆಯ ನೀರಾವರಿ ಯೋಜನೆಗಳ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಧಿಕಾರಿಗಳಿಗೆ…
ದೊಡ್ಡಬಳ್ಳಾಪುರ: ಪೊಲೀಸರೆಂದು ಪರಿಚಯಿಸಿಕೊಂಡು ವೃದ್ಧ ದಂಪತಿಯನ್ನು ನಂಬಿಸಿ ಚಿನ್ನಾಭರಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂಧ್ರಪ್ರದೇಶ ಮೂಲದ ಇಬ್ಬರು ಆರೋಪಿಗಳನ್ನು…
ಜಿಲ್ಲೆಯಲ್ಲಿ ಮಳೆ ಕೊರತೆ ಕೃಷಿ ಕ್ಷೇತ್ರದ ಜತೆಗೆ ಒಳನಾಡು ಮೀನುಗಾರಿಕೆಗೂ ತೀವ್ರ ಹೊಡೆತ ನೀಡಿದೆ. ಜಿಲ್ಲೆಯ ಬಹುತೇಕ ಕೆರೆಗಳು ನೀರಿಲ್ಲದೆ…
ಬರಿದಾಗುತ್ತಿರುವ ಕರ್ನಾಟಕದ ಖಜಾನೆ....... ಅಂದಿನ ಸಂಪಾದನೆ ಅಂದದಿಗೆ ಮಾತ್ರ ಎಂಬಂತಾಗಿದೆ...... ಬಹುತೇಕ ಕೆಳ ಮಧ್ಯಮ ವರ್ಗದ ಅಥವಾ ಬಡವರ ಮನೆಯ…
ಬೆಂಗಳೂರು: ಮಹರ್ಷಿ ವಾಲ್ಮೀಕಿ ಜಯಂತಿಯ ಸಾರ್ವತ್ರಿಕ ರಜೆ ದಿನಾಂಕವನ್ನು ಬದಲಾಯಿಸಿ ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಹಿಂದೆ…
ದಿನದಿಂದ ದಿನಕ್ಕೆ ನೇಕಾರಿಕೆ ಮಾಡುವುದು ಕಷ್ಟವಾಗುತ್ತಿದೆ. ಸೀರೆ ಉತ್ಪಾದನೆಯಲ್ಲಿ ಬಳಸುವ ಕಚ್ಚ ಸಾಮಗ್ರಿಗಳ ಬೆಲೆ ಗಗನಕ್ಕೆರುತ್ತಿದೆ ಕೂಡಲೇ ಸರ್ಕಾರ ಮಧ್ಯೆ…