ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ರಾಜ್ಯ ಸರ್ಕಾರವು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿದ್ಯುತ್ ಮಗ್ಗ ನೇಕಾರರು ಹಾಗೂ ಮಗ್ಗ ಪೂರ್ವ ಚಟುವಟಿಕೆಯಲ್ಲಿ ತೊಡಗಿರುವ ಕೆಲಸಗಾಗರರ ಗಣತಿ ಸಮೀಕ್ಷೆಯನ್ನು ಹಮ್ಮಿಕೊಂಡಿದ್ದು, ಜವಳಿ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಕೇಂದ್ರ ಕಛೇರಿ ಬೆಂಗಳೂರು ರವರು ಸೂಚಿಸಲಾದಂತೆ ಸಮೀಕ್ಷೆಯಲ್ಲಿ ಬಿಟ್ಟುಹೋದ, ತಪ್ಪಿಹೋದ, ಹೊಸದಾಗಿ ಸೇರ್ಪಡೆ ಘಟಕ, ನೇಕಾರರು, ಕೆಲಸಗಾರರನ್ನು ಕೂಡಲೇ ಗಣತಿ ಸಮೀಕ್ಷೆಯಲ್ಲಿ ಸೇರ್ಪಡೆ ಮಾಡಲು ಸಮಯ ಮಿತಿ(ಕಾಲ ಗಡುವು) ನೀಡಿರುತ್ತಾರೆ.
ಗಣತಿ ಸಮೀಕ್ಷೆಯಲ್ಲಿ ಪಾಲ್ಗೊಳ್ಳದೇ ಇರುವ ಅಥವಾ ಬಿಟ್ಟು ಹೋಗಿರುವ ನೇಕಾರರು ಸಮೀಕ್ಷೆಗೆ ದಾಖಲಾತಿಗಳೊಂದಿಗೆ 2023ರ ಜುಲೈ 15 ರೊಳಗಾಗಿ ಹಾಜರು ಪಡಿಸಲು ಅಂತಿಮ ತಿಳುವಳಿಕೆ ನೀಡಲಾಗಿದೆ.
ಘಟಕದ ಮಾಲೀಕರು: ಇತ್ತೀಚಿನ ವಿದ್ಯುತ್ ಬಿಲ್, ಆಧಾರ್‌ನೊಂದಿಗೆ ಕಚೇರಿಗೆ
ಭೇಟಿ ನೀಡಿ ಮಾಹಿತಿಯನ್ನು ನಮೂದಿಸುವುದು.
ಕೂಲಿ ನೇಕಾರರು/ ಕೆಲಸಗಾರರು: ಘಟಕದ ಮಾಲಿಕರಿಂದ ಘಟಕದಲ್ಲಿ ಕೂಡ ನೇಯ್ಗೆ ವೃತ್ತಿ ಮಾಡುತ್ತಿರುವ ಬಗ್ಗೆ ದೃಢೀಕರಣ ಪಡೆದು ಕಚೇರಿಗೆ ಭೇಟಿ ನೀಡಿ ಮಾಹಿತಿಯನ್ನು ನಮೂದಿಸುವುದು.
ನೇಕಾರರಿಂದ ಮಾಹಿತಿ ಸ್ವೀಕೃತಿಯಾದ ನಂತರ ಎಎಂಎಸ್ ಸಂಸ್ಥೆ ವತಿಯಿಂದ ಗಣತಿ ಕ್ರಮ ಕೈಗೊಳ್ಳಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಸಂಯೋಜಕ ಪವನ್ ಕುಮಾರ್ ಮೊ.ಸಂ.:7406691372 ಅಥವಾ ನಗರದ ಕೆಐಎಡಿಬಿ ಅಪೇರಲ್ ಪಾರ್ಕ್ ಬಳಿಯ ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡದ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕಿ ಸೌಮ್ಯ.ಎಂ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…