ಕಳೆದ ದಿನವಷ್ಟೇ ಗೌರಿಬಿದನೂರು ವ್ಯಾಪ್ತಿಯಲ್ಲಿ ಮೂವರು ಬೆಸ್ಕಾಂ ಸಿಬ್ಬಂದಿಯ ಕಾರು ಅಪಘಾತಗೊಂಡು ದಾರುಣವಾಗಿ ಮೂವರು ಮೃತಪಟ್ಟ ಬೆನ್ನಲೇ, ಈಗ ವಿದ್ಯುತ್ ಸರಿಪಡಿಸುವ ವೇಳೆ ವಿದ್ಯುತ್ ಪ್ರವಹಿಸಿ ಮತ್ತೋರ್ವ ಬೆಸ್ಕಾಂ ಸಿಬ್ಬಂದಿ ದಾರುಣವಾಗಿ ವಿದ್ಯುತ್ ಕಂಬದಲ್ಲೇ ಮೃತಪಟ್ಟಿರುವ ಘಟನೆ ಇಂದು ಬೆಳಗ್ಗೆ ಸುಮಾರು 10.30 ಗಂಟೆ ಸಮಯದಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ವ್ಯಾಪ್ತಿಯ ಮಂಚೇನಹಳ್ಳಿ ತಾಲೂಕಿನ ಬಿಸಲಹಳ್ಳಿ ಗ್ರಾಮದಲ್ಲಿ ದುರಂತ ಸಂಬವಿಸಿದ್ದು, ಘಟನೆಯಲ್ಲಿ ಬೆಸ್ಕಾಂ ಸಿಬ್ಬಂದಿ ಲೈನ್ ಮ್ಯಾನ್ ಉದಯ್(28), ಮೃತ ಯುವಕ ಎಂದು ತಿಳಿದು ಬಂದಿದೆ.
ಮೂಲತಃ ಉದಯ್ ಚಿತ್ರದುರ್ಗ ಕಡೆಯವರು ಎಂದು ತಿಳಿದು ಬಂದಿದ್ದು, ಮಂಚೇನಹಳ್ಳಿ ವ್ಯಾಪ್ತಿಯಲ್ಲಿ ಲೈನ್ ಮ್ಯಾನ್ ಆಗಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದರು. ಸದ್ಯ ಇಂದು ಟ್ರಾನ್ಸ್ ಫಾರ್ಮರ್ ನಲ್ಲಿ ಲೈನ್ ಜಂಪ್ ಆದ ಹಿನ್ನೆಲೆ ಬಿಸಲಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಟ್ರಾನ್ಸ್ ಫಾರ್ಮ್ ಕಂಬವನ್ನು ಹತ್ತಿ ಲೈನ್ ಸರಿಪಡಿಸುವ ವೇಳೆ ವಿದ್ಯುತ್ ಹರಿದು ದಾರುಣವಾಗಿ ವಿದ್ಯುತ್ ಕಂಬದಲ್ಲಿಯೇ ಸಾವನ್ನಪ್ಪಿದ್ದಾರೆ.
ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…
ರಾಹುಲ್ ಗಾಂಧಿ...... ಬಿಹಾರ ಚುನಾವಣೆಯಲ್ಲಿ, ಸೀಟುಗಳ ಲೆಕ್ಕದಲ್ಲಿ ಕಾಂಗ್ರೆಸ್ ಪಕ್ಷದ ಸೋಲಿನ ನಂತರ ಶ್ರೀ ರಾಹುಲ್ ಗಾಂಧಿಯವರ ನಾಯಕತ್ವದ ಸಾಮರ್ಥ್ಯದ…
ಕಾಲೇಜಿನಲ್ಲಿ ಶೋಕಿಗಾಗಿ ಮನೆಗಳ್ಳತನಕ್ಕೆ ಇಳಿದಿದ್ದ ಇಬ್ಬರು ಎಂಜಿನಿಯರಿಂಗ್ ವಿದ್ಯಾರ್ಥಿಗಳನ್ನ (Aerospace Engineering Student) ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಚೇತನ್ ಹಾಗೂ…
ಕನ್ನಡ ರಾಜ್ಯೋತ್ಸವ ಅಂಗವಾಗಿ ದೊಡ್ಡಬಳ್ಳಾಪುರದ ಹೀಲಿನ್ ಆಸ್ಪತ್ರೆ ವತಿಯಿಂದ ಉಚಿತ ಆರೋಗ್ಯ ತಪಸಣಾ ಶಿಬಿರವನ್ನು ಆಸ್ಪತ್ರೆಯಲ್ಲೇ ಆಯೋಜನೆ ಮಾಡಲಾಗಿತ್ತು. ಸಾರ್ವಜನಿಕರಿಗೆ…
ಕೇಂದ್ರ ಸಚಿವಾಲಯ ನೀಡುವ ಅತ್ಯುತ್ತಮ ಪೊಲೀಸ್ ಠಾಣಾ ಪ್ರಶಸ್ತಿಗೆ ಕರ್ನಾಟಕದ ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಕವಿತಾಳ ಪೊಲೀಸ್ ಠಾಣೆ…
ನಮ್ಮ ದೇಶದ ಸರ್ವೋಚ್ಚ ನ್ಯಾಯಾಲಯವು, ನಾಯಿ ಕಡಿತಕ್ಕೆ ಚಿಕಿತ್ಸೆ ನೀಡುವ ಬಗ್ಗೆ ಸರ್ಕಾರಿ- ಖಾಸಗಿ ಆಸ್ಪತ್ರೆಗಳು ಅನುಸರಿಸಬೇಕಾದ ಕ್ರಮಗಳಿಗೆ ಸಂಬಂಧಿಸಿದಂತೆ…