ಚಿಂತಾಮಣಿ ತಾಲೂಕಿನ ಕೈವಾರ ಗ್ರಾಮದಲ್ಲಿ ಮನೆಯೊಂದರಲ್ಲಿ ಅಗ್ನಿ ಅನಾಹುತ ಸಂಭವಿಸಿದೆ. ಗ್ರಾಮದ ನಿವಾಸಿ ಮಂಜುನಾಥ್ ಅವರಿಗೆ ಸೇರಿದ ಮನೆ ಶಾರ್ಟ್ ಸರ್ಕ್ಯೂಟ್‌ನಿಂದ ತೀವ್ರ ಬೆಂಕಿಗೆ ಆಹುತಿಯಾಗಿದೆ. ಘಟನೆ ಸಂಭವಿಸಿದಾಗ ಮನೆಯಲ್ಲಿ ಇಲ್ಲದ ಕಾರಣ ದೊಡ್ಡ ಪ್ರಾಣಾಪಾಯ ತಪ್ಪಿದರೂ, ಅನೇಕ ವಸ್ತುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ.
ಮಂಜುನಾಥ್ ಅವರ ಮಗನ ಅನಾರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ಹೋಗಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ್ದು, ತಕ್ಷಣವೇ ಬೆಂಕಿ ವ್ಯಾಪಿಸಿ ಸಂಪೂರ್ಣ ಮನೆಯನ್ನೇ ಆವರಿಸಿತು. ಸುಮಾರು ₹25 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳು, ಎಲೆಕ್ಟ್ರಾನಿಕ್ ಸಾಧನಗಳು ಹಾಗೂ ಇತರ ಅಮೂಲ್ಯ ವಸ್ತುಗಳು ಸುಟ್ಟು ಕರಕಲಾಗಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ ಧಾವಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿತು. ಘಟನೆಯಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಂಜುನಾಥ್ ಕುಟುಂಬ ಆರ್ಥಿಕವಾಗಿ ನಷ್ಟಕ್ಕೆ ಒಳಗಾಗಿದ್ದು, ಈ ಕುರಿತು ಸರ್ಕಾರದಿಂದ ಸಹಾಯ ನೀಡಬೇಕೆಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…
ರಾಜ್ಯದಲ್ಲಿ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟದ ಅಂದಾಜು 50 ರಿಂದ 60 ಸಾವಿರ ಕೋಟಿವರೆಗೆ ತಲುಪುವ ಸಾಧ್ಯತೆಯಿದ್ದು, ಕೇಂದ್ರ…
ರೆಕ್ಕೆ ಮುರಿದ ಹಕ್ಕಿಯೊಂದು, ಬಿಕ್ಕಿ ಬಿಕ್ಕಿ ಅಳುತಲಿದೆ........ ಕಾಲು ಮುರಿದ ನಾಯಿಯೊಂದು, ಕುಂಟಿ ಕುಂಟಿ ನಡೆಯುತಿದೆ..... ಆಡಳಿತ ವ್ಯವಸ್ಥೆಯ ಕಾರ್ಯವೈಖರಿಯನ್ನು…