ವಿದ್ಯುತ್ ಸ್ಪರ್ಶಿಸಿ ಗೃಹಿಣಿ ಸಾವು: ಕೊಲೆ ಸಂಶಯ ವ್ಯಕ್ತಪಡಿಸಿದ ಕುಟುಂಬಸ್ಥರು

ವಿದ್ಯುತ್ ಸ್ಪರ್ಶಿಸಿ ಗೃಹಿಣಿಯ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಪಾಲ್ ಪಾಲ್ ದಿನ್ನೆ ಗ್ರಾಮದಲ್ಲಿ ಶನಿವಾರ ಸಂಜೆ‌ ಸುಮಾರು 7 ಗಂಟೆ ಸಮಯದಲ್ಲಿ ನಡೆದಿದೆ.

ಮನುಶ್ರೀ (29), ಸಾವನ್ನಪ್ಪಿರುವ ಗೃಹಿಣಿ, ಹತ್ತು ವರ್ಷಗಳ ಹಿಂದೆ ಸಿಂಗನಾಯಕನಹಳ್ಳಿಯ ಮನುಶ್ರೀ ಪಾಲ್ ಪಾಲ್ ದಿನ್ನೆ ಗ್ರಾಮದ ಮೋಹನ್ ಕುಮಾರ್ (35) ಗೆ ಕೊಟ್ಟು ಮದುವೆ ಮಾಡಿದ್ದ ಮನುಶ್ರೀ ತಂದೆ ಪ್ರಕಾಶ್, ಇವರ ದಾಂಪತ್ಯಕ್ಕೆ ಒಂದು ಗಂಡು‌ ಮಗು ಸಹ ಇದೆ.

ನಿನ್ನೆ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಗಂಡನ‌ ಮನೆಯವರ ಪ್ರಕಾರ ಜಾನುವಾರುಗಳಿಗೆ ಮಷಿನ್ ನಲ್ಲಿ ಮೇವು ಕಟ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ ಮೃತಳ ಕುಟುಂಬಸ್ಥರು ಕೊಲೆ ಆರೋಪ ಮಾಡಿದ್ದು, ವರದಕ್ಷಿಣೆ ಕಾರಣಕ್ಕೆ ಕಿರುಕುಳ ಕೊಟ್ಟು ಕೊಲೆ ಮಾಡಿರುವುದಾಗಿ ಆರೋಪ‌ ಮಾಡಿದ್ದಾರೆ.

(ಮನುಶ್ರೀ-ಮೋಹನ್‌ಕುಮಾರ್ ದಂಪತಿ)

ಈ ಆರೋಪದ ಮೇಲೆ ಮನುಶ್ರೀ ಗಂಡನಾದ ಮೋಹನ್ ಕುಮಾರ್ ನನ್ನು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.

ಈ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ramesh Babu

Journalist

Recent Posts

ಯುವ ಸಂಸತ್ತು ಸ್ಪರ್ಧೆ: ಕೊಂಗಾಡಿಯಪ್ಪ ಕಾನೂನು ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: ರವಿಕುಮಾರ್‌ಗೆ ದ್ವಿತೀಯ ಸ್ಥಾನ; ಜಿಲ್ಲಾ ಮಟ್ಟಕ್ಕೆ ಆಯ್ಕೆ

ದೊಡ್ಡಬಳ್ಳಾಪುರ: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಡೆದ ತಾಲ್ಲೂಕು ಮಟ್ಟದ ಯುವ ಸಂಸತ್ತು ಅಣಕು ಸ್ಪರ್ಧೆಯಲ್ಲಿ ಶ್ರೀ ಕೊಂಗಾಡಿಯಪ್ಪ ಕಾನೂನು…

8 hours ago

ಗೀತಂ ವಿವಿ ಹಾಸ್ಟೆಲ್‌ನಲ್ಲಿ ದುರಂತ: 6ನೇ ಮಹಡಿಯಿಂದ ಬಿದ್ದು ಬಿ.ಟೆಕ್ ವಿದ್ಯಾರ್ಥಿನಿ ಸಾವು

ದೊಡ್ಡಬಳ್ಳಾಪುರ: ತಾಲೂಕಿನ ನಾಗದೇನಹಳ್ಳಿ ಸಮೀಪದ ಗೀತಂ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ತಡರಾತ್ರಿ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ…

14 hours ago

ಮಳೆ ಕೊರತೆಯ ಹೊಡೆತಕ್ಕೆ ರಾಗಿ ಬೆಳೆ ಸಂಕಷ್ಟ: ರೈತರು ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಇಳುವರಿಗೆ ಹೊಡೆತ!

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಏರುಪೇರಿನಿಂದ ಮಳೆಯಾಶ್ರಿತ ಕೃಷಿ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯ ಪ್ರಮುಖ ಆಹಾರ ಬೆಳೆಯಾದ ರಾಗಿಯನ್ನು…

18 hours ago

ಪೆನ್ ಡ್ರೈವ್…….

ಪೆನ್ ಡ್ರೈವ್....... ನಾಚಿಕೆಯಿಂದ ತಲೆತಗ್ಗಿಸಿ ನಾನೂ ಈ ವಿಷಯವನ್ನೇ ಕುರಿತು ಬರೆಯುವ ಅನಿವಾರ್ಯ ಸೃಷ್ಟಿಯಾಗಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತಾ...... ಬರಗಾಲ -…

19 hours ago

ಸ್ಟಿಂಗ್ ಆಪರೇಷನ್ ಹಿಂದೆ ಜೆಡಿಎಸ್ ಕೈವಾಡ: ಸಚಿವ ಚಲುವರಾಯಸ್ವಾಮಿ ಗಂಭೀರ ಆರೋಪ

"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…

1 day ago

ಬೆಂಗಳೂರು ಶಿಕ್ಷಕರ ಕ್ಷೇತ್ರ ಚುನಾವಣೆ: ಅ.21 ರಿಂದ ಅ.23 ರವರೆಗೆ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆದೇಶ

ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…

1 day ago