ಬೆಂಗಳೂರು ಗ್ರಾಮಾಂತರ ಜಿಲ್ಲೆಯ, ನೆಲಮಂಗಲ ತಾಲ್ಲೂಕಿನ, ಕುಣಿಗಲ್ ಬೈಪಾಸ್ ರಸ್ತೆಯ, ಮಹದೇವಪುರದಲ್ಲಿರುವ ಎಸ್‌ಡಿಎಂ ಇನ್ಸ್ಟಿಟ್ಯೂಟ್ ಆಫ್ ನ್ಯಾಚುರೋಪತಿ ಅಂಡ್ ಯೋಗಿಕ್ ಸೈನ್ಸಸ್-ಕ್ಷೇಮವನದಲ್ಲಿ 16 ನೇ ವಿಧಾನಸಭೆಯ ನೂತನ ಸದಸ್ಯರುಗಳಿಗೆ ಇಂದಿನಿಂದ ಮೂರು ದಿನಗಳವರೆಗೆ (2023ರ ಜೂನ್ 26 ರಿಂದ 28 ರವರೆಗೆ) ಏರ್ಪಡಿಸಲಾದ ತರಬೇತಿ ಶಿಬಿರವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ.ಎಸ್.ಹೊರಟ್ಟಿ, ವಿಧಾನಸಭಾ ಸಭಾಧ್ಯಕ್ಷ ಯು.ಟಿ.ಖಾದರ್ ಷರೀಪ್, ಕಾನೂನು, ನ್ಯಾಯ, ಮಾನವ ಹಕ್ಕುಗಳು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಬಿ.ಝಡ್.ಜಮೀರ್ ಅಹಮದ್ ಖಾನ್, ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ, ಶ್ರೀ ಧರ್ಮಸ್ಥಳ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಸುರೇಂದ್ರಕುಮಾರ್ ಸೇರಿದಂತೆ ನೂತನ ಶಾಸಕರುಗಳು ಉಪಸ್ಥಿತರಿದ್ದರು.