ವಿಧಾನಸೌಧದಲ್ಲಿ ಇಂದು ನಡೆದ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿಗೆ ಸಂಬಂಧಿಸಿದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಮುಖ್ಯ ಕಾರ್ಯದರ್ಶಿಗಳ ನೇತೃತ್ವದ ಸಮಿತಿಯ ಶಿಫಾರಸುಗಳನ್ನು ಆಧರಿಸಿ ಸರ್ಕಾರ ಗ್ರೂಪ್ ಎ ಗೆ 5.25, ಗ್ರೂಪ್ ಬಿ ಗೆ 5.25 ಮತ್ತು ಗ್ರೂಪ್ ಸಿ ಗೆ 4.5 ಪ್ರಮಾಣದಲ್ಲಿ ಒಳಮೀಸಲಾತಿ ಅನುಷ್ಠಾನಕ್ಕೆ ತೀರ್ಮಾನಿಸಿದೆ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದ್ದಾರೆ.
ಇದು ರಾಜ್ಯದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆಯಬೇಕಾದ ದಿನ. 40 ವರ್ಷಗಳ ಹೋರಾಟಕ್ಕೆ ಇಂದು ನ್ಯಾಯ ಸಿಕ್ಕಿದೆ ಎಂದು ಹೇಳಿದರು.
ಸಾಮಾಜಿಕ ನ್ಯಾಯದ ದಿಕ್ಕಿನಲ್ಲಿ ಈ ತೀರ್ಮಾನ ಮಹತ್ವದ್ದಾಗಿದೆ ಬಸವಣ್ಣವರ ಸಮಾನತೆ ತತ್ವವನ್ನು ಸರ್ಕಾರ ಕಾರ್ಯರೂಪಕ್ಕೆ ತಂದಿದೆ ಎಲ್ಲರೂ ಸಮಾನವಾಗಿ ಬದುಕಬೇಕು ಎಂಬ ಮುಖ್ಯಮಂತ್ರಿಗಳ ಬದ್ಧತೆ ಇಂದು ಕಾರ್ಯರೂಪಕ್ಕೆ ಬಂದಿದೆ ಎಂದರು.
ಈ ಪ್ರಕ್ರಿಯೆಯಲ್ಲಿ ಕಾನೂನು ಸಚಿವರು, ಗೃಹ ಸಚಿವರು, ಹಾಗೂ ಮಹಾದೇವಪ್ಪ ಸೇರಿದಂತೆ ಹಲವು ಸಚಿವರು ಪ್ರಮುಖ ಪಾತ್ರ ವಹಿಸಿದ್ದಾರೆ ಅಲ್ಲದೆ ಚಿತ್ರದುರ್ಗದಲ್ಲಿ ನಡೆದ ಐತಿಹಾಸಿಕ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪಕ್ಷದ ನಾಯಕರು ತೆಗೆದುಕೊಂಡ ನಿರ್ಧಾರಕ್ಕೆ ಕೃತಜ್ಞತೆಗಳು ಎಂದು ಹೇಳಿದ್ದಾರೆ.
ರಾಜ್ಯದ 101 ಹಿಂದುಳಿದ ಜಾತಿಗಳಿಗೆ ನ್ಯಾಯ ಒದಗಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಇದರಿಂದ ದಶಕಗಳ ಅನ್ಯಾಯಕ್ಕೆ ಅಂತ್ಯವಾಗಲಿದೆ ಎಡಗೈ–ಬಲಗೈ ವಿವಾದಕ್ಕೂ ಇಂದಿನಿಂದ ಅಂತ್ಯ. ನಾವು ಎಲ್ಲರೂ ಅಣ್ಣತಮ್ಮಂದಿರಾಗಿ ಒಗ್ಗಟ್ಟಿನಿಂದ ಮುಂದುವರೆಯುತ್ತೇವೆ. ಸಚಿವ ಸಂಪುಟದ ಈ ತೀರ್ಮಾನವನ್ನು ಸ್ವಾಗತ ಮಾಡುತ್ತೇನೆ. ಮುಖ್ಯಮಂತ್ರಿಗಳ ಕೈ ಬಲಪಡಿಸಿ, ಪಕ್ಷವನ್ನು ಮತ್ತಷ್ಟು ಬಲಪಡಿಸೋಣ ಎಂದು ತಿಳಿಸಿದ್ದಾರೆ.
ಸುದ್ದಿ ಗೋಷ್ಟಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಪರಮೇಶ್ವರ್,ಮಹದೇವಪ್ಪ ,ತಿಮ್ಮಾಪುರ, ಶಿವರಾಜ್ ತಂಗಡಗಿ,ಸುಧಾಕರ್,ಬೈರತಿ ಸುರೇಶ್,ಹೆಚ್.ಕೆ ಪಾಟೀಲ್,ಪ್ರಿಯಾಂಕ ಖರ್ಗೆ,ಕಾನೂನು ಸಲಹೆಗಾರ ಪೊಣ್ಣನ್ನ ಸೇರಿದಂತೆ ಇತರರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಬರಗಾಲದ ಸಂದರ್ಭದಲ್ಲಿ ಜಲಮೂಲಗಳ ಸಂರಕ್ಷಣೆ ಹಾಗೂ ಕೆರೆಗಳ ಪುನಶ್ಚೇತನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೈಗೊಳ್ಳುತ್ತಿರುವ ಕೆರೆ…
ದೇವನಹಳ್ಳಿ: ಹಾಸ್ಟೆಲ್ ಕೊಠಡಿಯಲ್ಲಿ ಡಿಪ್ಲೋಮಾ ವಿದ್ಯಾರ್ಥಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಚನ್ನರಾಯಪಟ್ಟಣ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ತೇಜಸ್ವಿನಿ ರಾಜ್ಯ ಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ಪ್ರೌಢಶಾಲಾ…
ಬೆಂಗಳೂರು ಗ್ರಾಮಾಂತರ: ಮಳೆ ಕೈಕೊಟ್ಟ ಪರಿಣಾಮ ಕೃಷಿ ಬೆಳೆಗಳ ಜತೆಗೆ ಜಾನುವಾರುಗಳ ಮೇವಿನ ಮೇಲೂ ಬರದ ಕರಿನೆರಳು ಆವರಿಸುತ್ತಿರುವ ಹಿನ್ನೆಲೆಯಲ್ಲಿ…
ದೇವನಹಳ್ಳಿ: ನಕಲಿ ಔಷಧಿಗಳ ಮಾರಾಟ ಜಾಲಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ, ಪ್ರಕರಣದ ಕಿಂಗ್‌ಪಿನ್ ಎಂದು ಪೊಲೀಸರು ಗುರುತಿಸಿರುವ ಪ್ರಶಾಂತ್…
ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆಯ ಕೊರತೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಗೆ ಇದೀಗ ಮತ್ತೊಂದು ಆತಂಕ…