ಬೆಂಗಳೂರು: ರಾಜ್ಯದಲ್ಲಿ ತೀವ್ರ ಕುತೂಹಲ ಮೂಡಿಸಿರುವ ವಿಧಾನ ಪರಿಷತ್ತಿನ ನಾಲ್ಕು ಕ್ಷೇತ್ರಗಳ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಮಂಗಳವಾರ ಬೆಳಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ.
ಕಳೆದ ಅಕ್ಟೋಬರ್ 23ರಂದು ಪಶ್ಚಿಮ ಪದವೀಧರ, ಆಗ್ನೇಯ ಪದವೀಧರ, ಈಶಾನ್ಯ ಶಿಕ್ಷಕರ ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರಗಳಿಗೆ ಮತದಾನ ನಡೆದಿತ್ತು. ಈ ಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳ ನಡುವೆ ಪ್ರಮುಖ ಪೈಪೋಟಿ ಏರ್ಪಟ್ಟಿದೆ.
ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಬಿಜೆಪಿಯ ಎಸ್.ವಿ. ಸಂಕನೂರ್ ಮತ್ತು ಕಾಂಗ್ರೆಸ್‌ನ ಮೋಹನ ಲಿಂಬಿಕಾಯಿ, ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಶಶಿ ಹುಲಿಕುಂಟೆಮಠ ಮತ್ತು ಬಿಜೆಪಿಯ ಕೆ.ಎಂ. ಸುರೇಶ್ ಪ್ರಮುಖ ಅಭ್ಯರ್ಥಿಗಳಾಗಿದ್ದಾರೆ.
ಇನ್ನು ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿಯ ಶಶೀಲ್ ಜಿ. ನಮೋಶಿ ಹಾಗೂ ಕಾಂಗ್ರೆಸ್‌ನ ಶರಣಪ್ಪ ಮಟ್ಟೂರು ನಡುವೆ ಪೈಪೋಟಿ ಇದೆ. ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಪುಟ್ಟಣ್ಣ ಮತ್ತು ಜೆಡಿಎಸ್‌ನ ಎ.ಪಿ. ರಂಗನಾಥ್ ಕಣದಲ್ಲಿದ್ದು, ಈ ಕ್ಷೇತ್ರಗಳ ಫಲಿತಾಂಶದ ಬಗ್ಗೆ ರಾಜಕೀಯ ವಲಯದಲ್ಲಿ ನಿರೀಕ್ಷೆ ಹೆಚ್ಚಾಗಿದೆ.
ಮತ ಎಣಿಕೆ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ನಾಲ್ಕೂ ಕ್ಷೇತ್ರಗಳಲ್ಲಿ ಮತದಾರರು ಯಾರಿಗೆ ಬೆಂಬಲ ನೀಡಿದ್ದಾರೆ ಎಂಬುದು ಫಲಿತಾಂಶ ಪ್ರಕಟವಾದ ಬಳಿಕ ಸ್ಪಷ್ಟವಾಗಲಿದೆ.
ಮತ ಎಣಿಕೆ ಪ್ರಕ್ರಿಯೆ ಸುಗಮವಾಗಿ ನಡೆಯಲು ಚುನಾವಣಾಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಂಡಿದ್ದಾರೆ. ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಎಲ್ಲ ಸ್ಟ್ರಾಂಗ್ ರೂಮ್‌ಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಬಿಗಿ ಭದ್ರತೆ ಒದಗಿಸಲಾಗಿದೆ.
ದೊಡ್ಡಬಳ್ಳಾಪುರ: ತಾಲ್ಲೂಕಿನ ಕೊಡಿಗೆಹಳ್ಳಿ ಗ್ರಾಮದಲ್ಲಿ ಯಾವುದೇ ಪರವಾನಗಿ ಇಲ್ಲದೆ ಹಾಗೂ ಅಗತ್ಯ ಸುರಕ್ಷತಾ ಕ್ರಮಗಳನ್ನು ಅನುಸರಿಸದೆ ಅಕ್ರಮವಾಗಿ ಪಟಾಕಿಗಳನ್ನು ದಾಸ್ತಾನು…
ದೊಡ್ಡಬಳ್ಳಾಪುರ: ಫಾಕ್ಸ್‌ಕಾನ್ ಕಂಪನಿಯ ಬಸ್ ಹಾಗೂ ಖಾಸಗಿ ಶಾಲಾ ವಾಹನದ ನಡುವೆ ಅಪಘಾತ ಸಂಭವಿಸಿದ್ದು, ಶಾಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗೀತಂ ವಿಶ್ವವಿದ್ಯಾಲಯದ…
ಶ್ರಮದಾನ ಪರಿಕಲ್ಪನೆಯ ಎಂಟನೆಯ ಉದ್ಯೋಗವಾಗಿ ದಿನಾಂಕ 25/10/2026ರ ಭಾನುವಾರ ಬೆಳಗ್ಗೆ ಮನೆಯಿಂದ ಹೊರಟು ಬಸ್ಸಿನಲ್ಲಿ ತುಮಕೂರು ಜಿಲ್ಲೆಯ ತುಮಕೂರು ಗ್ರಾಮಾಂತರ…
ಬೆಂಗಳೂರು: ರಾಜ್ಯದಲ್ಲಿ ಚಳಿಗಾಲದ ಆರಂಭದ ಸೂಚನೆಗಳು ಕಾಣಿಸತೊಡಗಿದ್ದು, ಬೆಂಗಳೂರು ನಗರ, ಗ್ರಾಮಾಂತರ ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಉಜ್ಜಿನಿ ಗ್ರಾಮದ ವ್ಯಾಪ್ತಿಯಲ್ಲಿ ಎರಡು ಚಿರತೆಗಳು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ…
ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಉಜ್ಜಿನಿ ಗ್ರಾಮದ ವ್ಯಾಪ್ತಿಯಲ್ಲಿ ಎರಡು ಚಿರತೆಗಳು ಕಾಣಿಸಿಕೊಂಡಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ. ಸೋಮವಾರ ಸಂಜೆ…