ಕರ್ನಾಟಕ ವಿಧಾನ ಪರಿಷತ್ತಿನ 2021 ಮತ್ತು 22ನೇ ಸಾಲಿನ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ಮಾಜಿ ವಿರೋಧ ಪಕ್ಷದ ನಾಯಕರಾದ ಎಸ್.ಆರ್.ಪಾಟೀಲ್ ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯ ಕೆ.ಟಿ. ಶ್ರೀಕಂಠೇಗೌಡರಿಗೆ ಪ್ರದಾನ ಮಾಡಿ, ಗೌರವಿಸಿದ ಸಿಎಂ ಸಿದ್ದರಾಮಯ್ಯ.
ಈ ವೇಳೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಉಪಸಭಾಪತಿ ಎಂ.ಕೆ.ಪ್ರಾಣೇಶ್, ಸಚಿವರಾದ ಹೆಚ್.ಕೆ ಪಾಟೀಲ್ ಹಾಗೂ ಎನ್.ಎಸ್. ಬೋಸ ರಾಜು, ಪರಿಷತ್ ಸದಸ್ಯರಾದ ಭೋಜೇಗೌಡ, ಟಿ. ಎ. ಶರವಣ, ಮುಖ್ಯ ಸಚೇತಕ ಸಲೀಂ ಅಹ್ಮದ್, ವೈ.ಎ. ನಾರಾಯಣಸ್ವಾಮಿ, ಶಾಸಕ ಕೋಟ ಶ್ರೀನಿವಾಸ ಮೂರ್ತಿ ಮೊದಲಾದವರು ಉಪಸ್ಥಿತರಿದ್ದರು.