ವಿಧಾನ ಪರಿಷತ್ ಉಪಚುನಾವಣೆ ಫಲಿತಾಂಶ: ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ನ ಜಾತ್ಯತೀತ ಮುಖವಾಡ ಕಳಚಿದೆ: ಜೆಡಿಎಸ್‌ನ ಕೋಮುವಾದಿ ಅವತಾರಕ್ಕೆ ಮತದಾರ ಕಪಾಳಮೋಕ್ಷ ಮಾಡಿದ್ದಾನೆ-ಸಿಎಂ‌ ಸಿದ್ದರಾಮಯ್ಯ

ಬಿಜೆಪಿ ಮತ್ತು ಜೆಡಿಎಸ್ ನಾಯಕರ ನಡುವೆ ಮೈತ್ರಿಯಾಗಿದೆಯೇ ವಿನಃ ಇದಕ್ಕೆ ಮತದಾರರ ಒಪ್ಪಿಗೆ ಇಲ್ಲ ಎಂಬುದನ್ನು ವಿಧಾನ ಪರಿಷತ್ ಉಪಚುನಾವಣೆ ಫಲಿತಾಂಶ ಸ್ಪಷ್ಟಪಡಿಸಿದೆ ಎಂದು‌ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಜಯಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣನವರಿಗೆ ಅಭಿನಂದನೆಗಳು. ಇದು ನಮ್ಮ ಸರ್ಕಾರದ 9 ತಿಂಗಳ ಜನಪರವಾದ ಆಡಳಿತ ಮತ್ತು ಸರ್ಕಾರದ ಬಗ್ಗೆ ಪ್ರಜ್ಞಾವಂತ ಮತದಾರರು ಇಟ್ಟಿರುವ ವಿಶ್ವಾಸದ ಗೆಲುವಾಗಿದೆ ಎಂದರು.

ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟಾಗಿ ತಮ್ಮ‌ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಹೊರತಾಗಿಯೂ ಸೋಲು ಕಂಡಿವೆ. ಇದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಕುಮಾರಸ್ವಾಮಿ ಹಾಗೂ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರ ನಡುವಿನ ಮೈತ್ರಿಯೇ ಹೊರತು ಎರಡೂ ಪಕ್ಷಗಳ ಮತದಾರರ ನಡುವಿನ ಮೈತ್ರಿಯಲ್ಲ ಎಂಬುದು ಸಾಬೀತಾಗಿದೆ ಎಂದು ಹೇಳಿದ್ದಾರೆ.

ಕುಟುಂಬದ ಹಿತಕ್ಕಾಗಿ‌ ಕೋಮುವಾದಿಗಳ ಜೊತೆ ಕೈಜೋಡಿಸಿರುವ ಜೆಡಿಎಸ್ ಪಕ್ಷವನ್ನು ಹಾಗೂ ಸದಾಕಾಲ ಕುಟುಂಬ ರಾಜಕಾರಣದ ವಿರುದ್ಧ ಟೀಕೆ ಮಾಡಿ, ಒಂದು ಕುಟುಂಬವೇ ರಾಜಕೀಯ ಪಕ್ಷದಂತಿರುವ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ ಬಿಜೆಪಿಯನ್ನು ಮತದಾರ ಬಂಧುಗಳ ಸಾರಾಸಗಟಾಗಿ ತಿರಸ್ಕರಿಸಿದ್ದಾರೆ ಎಂದರು.

ಸ್ವಾರ್ಥ ಸಾಧನೆಯೊಂದೇ ಗುರಿಯಾಗಿರುವ ಈ ಅಪವಿತ್ರ ಮೈತ್ರಿಗೆ ಗ್ಯಾರಂಟಿ, ವಾರೆಂಟಿ ಯಾವುದೂ ಇಲ್ಲ. ಲೋಕಸಭಾ ಚುನಾವಣೆ ಬಳಿಕ ಕುಮಾರಸ್ವಾಮಿ ಮತ್ತವರ ಕುಟುಂಬ ಕೇಸರಿಶಾಲು ಕಿತ್ತೆಸೆಯುವುದು ನಿಶ್ಚಿತ ಎಂದು ತಿಳಿಸಿದ್ದಾರೆ.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

4 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

9 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

9 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

17 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago