ಬಿಜೆಪಿ ಮತ್ತು ಜೆಡಿಎಸ್ ನಾಯಕರ ನಡುವೆ ಮೈತ್ರಿಯಾಗಿದೆಯೇ ವಿನಃ ಇದಕ್ಕೆ ಮತದಾರರ ಒಪ್ಪಿಗೆ ಇಲ್ಲ ಎಂಬುದನ್ನು ವಿಧಾನ ಪರಿಷತ್ ಉಪಚುನಾವಣೆ ಫಲಿತಾಂಶ ಸ್ಪಷ್ಟಪಡಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಜಯಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣನವರಿಗೆ ಅಭಿನಂದನೆಗಳು. ಇದು ನಮ್ಮ ಸರ್ಕಾರದ 9 ತಿಂಗಳ ಜನಪರವಾದ ಆಡಳಿತ ಮತ್ತು ಸರ್ಕಾರದ ಬಗ್ಗೆ ಪ್ರಜ್ಞಾವಂತ ಮತದಾರರು ಇಟ್ಟಿರುವ ವಿಶ್ವಾಸದ ಗೆಲುವಾಗಿದೆ ಎಂದರು.
ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟಾಗಿ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಹೊರತಾಗಿಯೂ ಸೋಲು ಕಂಡಿವೆ. ಇದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಕುಮಾರಸ್ವಾಮಿ ಹಾಗೂ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರ ನಡುವಿನ ಮೈತ್ರಿಯೇ ಹೊರತು ಎರಡೂ ಪಕ್ಷಗಳ ಮತದಾರರ ನಡುವಿನ ಮೈತ್ರಿಯಲ್ಲ ಎಂಬುದು ಸಾಬೀತಾಗಿದೆ ಎಂದು ಹೇಳಿದ್ದಾರೆ.
ಕುಟುಂಬದ ಹಿತಕ್ಕಾಗಿ ಕೋಮುವಾದಿಗಳ ಜೊತೆ ಕೈಜೋಡಿಸಿರುವ ಜೆಡಿಎಸ್ ಪಕ್ಷವನ್ನು ಹಾಗೂ ಸದಾಕಾಲ ಕುಟುಂಬ ರಾಜಕಾರಣದ ವಿರುದ್ಧ ಟೀಕೆ ಮಾಡಿ, ಒಂದು ಕುಟುಂಬವೇ ರಾಜಕೀಯ ಪಕ್ಷದಂತಿರುವ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ ಬಿಜೆಪಿಯನ್ನು ಮತದಾರ ಬಂಧುಗಳ ಸಾರಾಸಗಟಾಗಿ ತಿರಸ್ಕರಿಸಿದ್ದಾರೆ ಎಂದರು.
ಸ್ವಾರ್ಥ ಸಾಧನೆಯೊಂದೇ ಗುರಿಯಾಗಿರುವ ಈ ಅಪವಿತ್ರ ಮೈತ್ರಿಗೆ ಗ್ಯಾರಂಟಿ, ವಾರೆಂಟಿ ಯಾವುದೂ ಇಲ್ಲ. ಲೋಕಸಭಾ ಚುನಾವಣೆ ಬಳಿಕ ಕುಮಾರಸ್ವಾಮಿ ಮತ್ತವರ ಕುಟುಂಬ ಕೇಸರಿಶಾಲು ಕಿತ್ತೆಸೆಯುವುದು ನಿಶ್ಚಿತ ಎಂದು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉತ್ತಮ ಶಿಕ್ಷಣದ ಜೊತೆಗೆ ಅಗತ್ಯ ಮೂಲಸೌಕರ್ಯ ಹಾಗೂ ಪ್ರೋತ್ಸಾಹ ದೊರೆಯುವಂತೆ ಸಮಾಜದ…
ದೊಡ್ಡಬಳ್ಳಾಪುರ: ಕಸ ವಿಂಗಡಣೆ ಮಾಡುವ ಯಂತ್ರಕ್ಕೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ತಾಲೂಕಿನ ಎಂಎಸ್‌ಜಿಪಿ ಕಸ ಸಂಸ್ಕರಣಾ ಘಟಕದಲ್ಲಿ…
ದೇಶದ ಪ್ರಧಾನಿಯೊಬ್ಬರು ಹೀಗೂ ಬದುಕಬಹುದು ಎಂದು ತೋರಿಸಿ ಮಾದರಿಯಾದ ವ್ಯಕ್ತಿ ಲಾಲ್ ಬಹದ್ದೂರ್ ಶಾಸ್ತ್ರಿ. ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳು.......…
2026-27ನೇ ಸಾಲಿನ ಮುಂಗಾರು ಹಂಗಾಮಿನ ಬೆಂಬಲ ಬೆಲೆ ಯೋಜನೆಯಡಿ ಸೂರ್ಯಕಾಂತಿ, ಹೆಸರುಕಾಳು ಹಾಗೂ ಸೋಯಾಬೀನ್ ಉತ್ಪನ್ನಗಳನ್ನು ಕನಿಷ್ಠ ಬೆಂಬಲ ಬೆಲೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬಡವರು ಹಾಗೂ ರೈತರ ಬಗ್ಗೆ ಕಾಳಜಿ ಇಲ್ಲ. ಹೂಡಿಕೆದಾರರು ಹಾಗೂ ಬಂಡವಾಳಶಾಹಿಗಳ ಹಿತಾಸಕ್ತಿಯ ಬಗ್ಗೆಯೇ…
ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿ ದಾರಿ ತಪ್ಪಿಸುವ ಬಿಎಲ್‌ಒ ಅಥವಾ…