
ವಿಧಾನ ಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಬಿ.ಕೆ. ಹರಿಪ್ರಸಾದ್, ತಿಪ್ಪಣ್ಣಪ್ಪ ಕಮಕನೂರ್, ಪಿ.ವಿ. ಮೋಹನ್, ಶಿವಣ್ಣ ಮಳವಳ್ಳಿ ಹಾಗೂ ವಿನಯ್ ಕಾರ್ತಿಕ್ ಅವರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಜಿ. ಲಕ್ಷ್ಮಿಪತಿ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ದಾಖಲಿಸಿರುವ ಗೆಲುವು ಪಕ್ಷದ ಸಂಘಟನಾ ಶಕ್ತಿ ಹಾಗೂ ಜನರ ವಿಶ್ವಾಸದ ಪ್ರತೀಕವಾಗಿದೆ ಎಂದು ಹೇಳಿದರು.
ಗೆಲುವು ಸಾಧಿಸಿದ ಎಲ್ಲಾ ಸದಸ್ಯರು ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಾ, ಜನಪರ ಸೇವೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮುಂದುವರಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದ ಅಭಿವೃದ್ಧಿ, ಸಾಮಾಜಿಕ ನ್ಯಾಯ ಹಾಗೂ ಜನಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಅವರ ಕೊಡುಗೆ ಮತ್ತಷ್ಟು ವಿಸ್ತರಿಸಲಿ ಎಂದು ಶುಭ ಹಾರೈಸಿದರು.
ಅಭ್ಯರ್ಥಿಗಳ ಮುಂದಿನ ಕಾರ್ಯಚಟುವಟಿಕೆಗಳಿಗೆ ಯಶಸ್ಸು ಕೋರಿ, ರಾಜ್ಯದ ಸಮಗ್ರ ಅಭಿವೃದ್ಧಿಗೆ ಅವರು ಮಹತ್ವದ ಪಾತ್ರ ವಹಿಸಲಿದ್ದಾರೆ ಎಂದು ಲಕ್ಷ್ಮಿಪತಿ ತಿಳಿಸಿದ್ದಾರೆ.