ಕೇಂದ್ರ ಚುನಾವಣಾ ಆಯೋಗ ವತಿಯಿಂದ ಕರ್ನಾಟಕ ವಿಧಾನ ಪರಿಷತ್ನ ಮೂರು ಸ್ಥಾನಗಳಿಗೆ ಮಂಗಳವಾರ ಉಪ ಚುನಾವಣೆಯ ದಿನಾಂಕ ನಿಗದಿ ಮಾಡಲಾಗಿದೆ. ಜೂನ್ 30ರಂದು ಮತದಾನ ನಡೆಯಲಿದೆ ಮತ್ತು ಅಂದೇ ಫಲಿತಾಂಶ ಸಹ ಪ್ರಕಟವಾಗಲಿದೆ ಎಂದು ತಿಳಿಸಲಾಗಿದೆ.
ಲಕ್ಷ್ಮಣ ಸವದಿ, ಆರ್ ಶಂಕರ್ ಹಾಗೂ ಬಾಬುರಾವ್ ಚಿಂಚನಸೂರ್ ಅವರ ರಾಜೀನಾಮೆಯಿಂದ ತೆರವಾದ ಮೂರು ಸ್ಥಾನಗಳಿಗೆ ಚುನಾವಣಾ ಆಯೋಗ ಇಂದು ಉಪ ಚುನಾವಣೆ ಘೋಷಿಸಲಾಗಿದೆ.
ಜೂನ್ 30ರಂದು ಈ ಉಪ ಚುನಾವಣೆ ನಡೆಯಲಿದ್ದು, ಜೂ. 13ರಂದು ಅಧಿಸೂಚನೆ ಹೊರಡಲಿದೆ. ನಾಮಪತ್ರ ಸಲ್ಲಿಸಲು ಜೂ. 20 ಕಡೇ ದಿನಾಂಕ. ಜೂ. 21ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನಾಮಪತ್ರ ಹಿಂಪಡೆಯಲು ಜೂ. 23 ಕೊನೆಯ ದಿನವಾಗಿರುತ್ತದೆ. ಜೂ. 30ರ ಬೆಳಗ್ಗೆ 9ರಿಂದ ಸಂಜೆ 4ರ ವರೆಗೆ ಚುನಾವಣೆ ನಡೆಯಲಿದ್ದು, ಅದೇ ದಿನ ಸಂಜೆ 5ಕ್ಕೆ ಫಲಿತಾಂಶ ಪ್ರಕಟವಾಗಲಿದೆ ಎಂದು ಆಯೋಗ ತಿಳಿಸಿದೆ.
"ಕುಮಾರಸ್ವಾಮಿ ಯಾರು? Who is kumaraswmay. ಡಿ.ಕೆ. ಶಿವಕುಮಾರ್ ಸಿಎಂ ಆಗಿರುವುದನ್ನು ಒಪ್ಪದಿರುವುದಕ್ಕೆ ಅವರು ಯಾರು? ಅವರಿಗೂ ಇದಕ್ಕೂ ಏನು…
ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ-2026ರ ಸಂಬಂಧ ಅಕ್ಟೋಬರ್ 23 ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ…
ದೊಡ್ಡಬಳ್ಳಾಪುರ: ಅದ್ದೂರಿ ಆಚರಣೆಗಳಿಗೆ ಸೀಮಿತವಾಗದೆ, ಸಮಾಜಮುಖಿ ಕಾರ್ಯಗಳ ಮೂಲಕ ಹುಟ್ಟುಹಬ್ಬ ಆಚರಿಸುವುದು ಇತರರಿಗೂ ಮಾದರಿಯಾಗಲಿದೆ ಎಂದು ಕನ್ನಡ ಪಕ್ಷದ ರಾಜ್ಯ…
ಸರ್ಕಾರಿ ಸೇವೆಗಳನ್ನು ಜನಸಾಮಾನ್ಯರಿಗೆ ಸುಲಭವಾಗಿ, ತ್ವರಿತವಾಗಿ ತಲುಪಿಸಬೇಕೆಂಬ ಉದ್ದೇಶದಿಂದ ಜಾರಿಗೆ ತಂದಿರುವ ಡಿಜಿಟಲ್ ವ್ಯವಸ್ಥೆಗಳೇ ಇದೀಗ ಸಾರ್ವಜನಿಕರಿಗೆ ತಲೆನೋವಾಗಿ ಪರಿಣಮಿಸಿವೆ.…
ದೊಡ್ಡಬಳ್ಳಾಪುರ: ಅಕ್ರಮವಾಗಿ ಗಾಂಜಾ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿ,…
ಲಂಚ ಪ್ರಕರಣ: ಮ್ಯೂನಿಷನ್ಸ್ ಇಂಡಿಯಾ ಕಾರ್ಯನಿರ್ವಾಹಕ ನಿರ್ದೇಶಕ ಸಿಬಿಐ ಬಲೆಗೆಲಂಚ ಸ್ವೀಕಾರ ಆರೋಪಕ್ಕೆ ಸಂಬಂಧಿಸಿದಂತೆ ಮ್ಯೂನಿಷನ್ಸ್ ಇಂಡಿಯಾ ಲಿಮಿಟೆಡ್ (MIL)…