ವಿಧಾನ ಪರಿಷತ್ ಸ್ಥಾನಕ್ಕೆ ಸಿ.ಪಿ.ಯೋಗೇಶ್ವರ್ ರಾಜೀನಾಮೆ

ವಿಧಾನ ಪರಿಷತ್ ಸ್ಥಾನಕ್ಕೆ ಸಿ.ಪಿ.ಯೋಗೇಶ್ವರ್ ಅವರು ಇಂದು ರಾಜೀನಾಮೆ ಸಲ್ಲಿಸಿದ್ದಾರೆ.

ಇಂದು ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ನೀಡಿದ್ದಾರೆ.

ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡಲ್ಲ. ಪಕ್ಷೇತರವಾಗಿ ನಿಲ್ಲುತ್ತೇನೆ. ಈ ಕ್ಷಣಕ್ಕೂ ಬಿಜೆಪಿ ಟಿಕೆಟ್ ನೀಡಿದರೆ ಸ್ಪರ್ಧೆ ಮಾಡುತ್ತೇನೆ. ಇಲ್ಲದಿದ್ದಲ್ಲಿ ಪಕ್ಷೇತರ ಸ್ಪರ್ಧೆ ಮಾಡುವೆ ಎಂದು ಸಿ.ಪಿ.ಯೋಗೇಶ್ವರ್ ಹೇಳಿದ್ದಾರೆ.

ರಾಜ್ಯ ವಿಧಾನಸಭಾ ಉಪಚುನಾವಣೆ ಕಾವು ಜೋರಾಗಿದ್ದು, ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ಈ ಮೂರೂ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಕಾಂಗ್ರೆಸ್​​, ಬಿಜೆಪಿ ಮತ್ತು ಜೆಡಿಎಸ್​​ ಯಾರಿಗೆ ಟಿಕೆಟ್​ ನೀಡಬೇಕು ಎಂಬ ಕಸರತ್ತಿನಲ್ಲಿ ತೊಡಗಿವೆ.

ಚನ್ನಪಟ್ಟಣ ಕ್ಷೇತ್ರದ ಟಿಕೆಟ್​​ ಜೆಡಿಎಸ್​​ಗೆ ಬಿಟ್ಟಿಕೊಟ್ಟಿರುವುದು ಬಿಜೆಪಿಗೆ ಸಮಸ್ಯೆಯಾಗಿದೆ. ಈ ಕಾರಣ ಚನ್ನಪಟ್ಟಣದ ಟಿಕೆಟ್​ ಆಕಾಂಕ್ಷಿ ಬಿಜೆಪಿ ಎಂಎಲ್​ಸಿ ಸಿ.ಪಿ ಯೋಗೇಶ್ವರ್​​​ ಅವರು ರಾಜೀನಾಮೆ ನೀಡಿದ್ದಾರೆ.

Ramesh Babu

Journalist

Recent Posts

ಇರುವುದೊಂದೇ ಬದುಕು. ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳೋಣ….

ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ ನನ್ನೋರು........... ಒಂದು ಚಿತ್ರ ಗೀತೆಯ ಹಾಡಿನ ಸಾಲುಗಳಿವು.…

3 hours ago

2,411 ದಿನಗಳಿಂದ ನಿರಂತರ ಅನ್ನದಾಸೋಹ: ದಾನಿಗಳ ಸೇವೆಗೆ ಗಣ್ಯರ ಮೆಚ್ಚುಗೆ

  ದೊಡ್ಡಬಳ್ಳಾಪುರ: ಹಸಿದವರಿಗೆ ಅನ್ನ ನೀಡುವ ಮಹತ್ಕಾರ್ಯವನ್ನು ಕಳೆದ 2,411 ದಿನಗಳಿಂದ ನಿರಂತರವಾಗಿ ನಡೆಸಿಕೊಂಡು ಬರುತ್ತಿರುವ ಅನ್ನದಾಸೋಹಿ ಮಲ್ಲೇಶ್ ಮತ್ತು…

13 hours ago

ಮಾನವೀಯ ಸಂಬಂಧಗಳ ಹುಡುಕುತ್ತಾ………

ಅಕ್ಕ, ತಮ್ಮನ ಕೈ ಹಿಡಿದುಕೊಂಡು ರಸ್ತೆ ದಾಟುತ್ತಾ ಇರುವಾಗ ತಮ್ಮ ಕೈ ಹಿಡಿದೇ ಅಕ್ಕನ ಹಿಂದೆ ಪುಟ್ಟ ಪುಟ್ಟ ಹೆಜ್ಜೆ…

20 hours ago

ಹೊನ್ನಘಟ್ಟದಲ್ಲಿ ಮೂರೂವರೆ ಎಕರೆ ಸರ್ಕಾರಿ ಜಮೀನು ಒತ್ತುವರಿ ಆರೋಪ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹೊನ್ನಘಟ್ಟ ಗ್ರಾಮದಲ್ಲಿ ಸುಮಾರು ಮೂರೂವರೆ ಎಕರೆ ಸರ್ಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡು, ಅದನ್ನು ಬೇರೆಯವರಿಗೆ ಬಾಡಿಗೆಗೆ ನೀಡಲಾಗಿದೆ…

2 days ago

ಶ್ರೀ ಕೊಂಗಾಡಿಯಪ್ಪ ಕಾನೂನು ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ

ದೊಡ್ಡಬಳ್ಳಾಪುರ: ತಾಲೂಕಿನ ಪ್ರತಿಷ್ಠಿತ ಶ್ರೀ ಕೊಂಗಾಡಿಯಪ್ಪ ಕಾನೂನು ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ರಾಜ್ಯೋತ್ಸವದ ಅಂಗವಾಗಿ ಕಾಲೇಜಿನಲ್ಲಿ ವಿವಿಧ…

2 days ago

‘ಬೆಂ.ಗ್ರಾ ಜಿಲ್ಲೆಯಲ್ಲಿ 62,854 ಹೆಕ್ಟೇರ್ ಬೆಳೆ ಹಾನಿ: ರೈತರಿಗೆ 52.88 ಕೋಟಿ ಪರಿಹಾರದ ಅಂದಾಜು’

ದೇವನಹಳ್ಳಿ: ರಾಜ್ಯ ಸರ್ಕಾರ ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಕರ್ನಾಟಕದ ಅಭಿವೃದ್ಧಿಗೆ ಶ್ರಮಿಸುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗೃಹಲಕ್ಷ್ಮಿ…

2 days ago