ವಿಧಿಯಾಟ: ಟಿವಿಎಸ್ ಎಕ್ಸ್‌ಎಲ್ ಗೆ ಡಿಕ್ಕಿ ಹೊಡೆದ ಕ್ಯಾಂಟರ್: ವೃದ್ಧ ದಂಪತಿ ಸಾವು: ದೇವಸ್ಥಾನಕ್ಕೆ ಹೊರಟಿದ್ದ ದಂಪತಿ ಮಸಣ ಸೇರಿದರು

ಟಿವಿಎಸ್ ಎಕ್ಸ್‌ಎಲ್ ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ವೃದ್ಧ ದಂಪತಿ ಸಾವನ್ನಪ್ಪಿರುವ ಘಟನೆ ಸೋಮವಾರ(ಡಿ.23) ಸಂಜೆ ಸುಮಾರು 6:30ರಲ್ಲಿ ತಾಲೂಕಿನ ಕನ್ನಮಂಗಲ ಗೇಟ್ ಬಳಿಯ ಪೆಟ್ರೋಲ್ ಬಂಕ್ ತಿರುವಿನಲ್ಲಿ ನಡೆದಿದೆ.

ಮೃತ ದುರ್ದೈವಿಗಳನ್ನು ರಾಮದೇವನಹಳ್ಳಿ ನಿವಾಸಿಗಳಾದ ಅನ್ನದಾನಪ್ಪ (66), ನಾಗರತ್ನಮ್ಮ (55) ಎಂದು ಗುರುತಿಸಲಾಗಿದೆ.

ಮೃತರು ನಿನ್ನೆ ಸಂಜೆ ಮಧುರೆ ಶನಿ ಮಹಾತ್ಮ ಸ್ವಾಮಿ ದೇವರ ದರ್ಶನ ಪಡೆಯಲು ರಾಮದೇವನಹಳ್ಳಿ ಗ್ರಾಮದಿಂದ ಬರುವ ವೇಳೆ ಕನ್ನಮಂಗಲ ಗೇಟ್ ಬಳಿಯ ಪೆಟ್ರೋಲ್ ಬಂಕ್ ತಿರುವಿನಲ್ಲಿ ಕ್ಯಾಂಟರ್ ಏಕಾಏಕಿ ಬಂದು ಡಿಕ್ಕಿ ಹೊಡೆದಿದೆ. ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ದಂಪತಿಯ ತಲೆಗೆ ತೀವ್ರ ಪೆಟ್ಟಾಗಿ ರಕ್ತ ಸ್ರಾವವಾಗಿತ್ತು. ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಬ್ಬರು ಅಸುನೀಗಿದ್ದಾರೆ.

ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಷಯ ತಿಳಿದ ಎಎಸ್ ಪಿ ನಾಗೇಶ್, ಡಿವೈಎಸ್ ಪಿ ರವಿ.ಪಿ, ದೊಡ್ಡಬೆಳವಂಗಲ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಕಲ್ಲಪ್ಪ ಶಂಕರಪ್ಪ ಖರಾತ್ ಮತ್ತು ಸಿಬ್ಬಂದಿ ಘಟನಾ ಸ್ಥಳ ಹಾಗೂ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

ಏ.12ರಂದು ದೊಡ್ಡಬಳ್ಳಾಪುರ ನಗರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ ನಗರದಲ್ಲಿ ಏ.12 ರಂದು 220/66/11ಕೆವಿ ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F02-Birla Super ಫೀಡರ್‌ನಲ್ಲಿ ವಿದ್ಯುತ್ ಕಾಮಗಾರಿಗಳು…

2 hours ago

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರ ಸಾವು

ಪಿಯುಸಿ ರಿಸಲ್ಟ್ ದಿನವೇ ವಿದ್ಯಾರ್ಥಿನಿ ಘೋರವಾಗಿ ಸಾವನ್ನಪ್ಪಿರುವ ಘಟನೆ ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯ ಮನೋರಾಯನಪಾಳ್ಯದಲ್ಲಿ ನಡೆದಿದೆ.. 17 ವರ್ಷದ…

7 hours ago

ಲೋಕಾಯುಕ್ತ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ರಾಯಚೂರು ಸಿರವಾರ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸುರೇಶ್ ಶೆಟ್ಟಿ ಲೋಕಾಯುಕ್ತರ ಬಲೆಗೆ ಬಿದ್ದ ಮುಖ್ಯಾಧಿಕಾರಿ. ರಾಘವೇಂದ್ರ…

7 hours ago

ಹುಚ್ಚನೊಬ್ಬನ ಕನಸು….

ದೇಶದ ಎಲ್ಲಾ ದಲಿತ ಕೇರಿಗಳನ್ನು ನಾಶ ಮಾಡಬೇಕು. ಅಲ್ಲಿನ ಎಲ್ಲರಿಗೂ ಊರ ಒಳಗಿನ ಸ್ಥಳದಲ್ಲಿ ವಾಸಕ್ಕೆ ಅವಕಾಶ ಕಲ್ಪಿಸಬೇಕು. ಬ್ರಾಹ್ಮಣರ…

12 hours ago

PUC Result: ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ….ಈ ಕಥೆ ಕೇಳಿದರೆ ಎಂಥವರ ಕಣ್ಣಲ್ಲೂ ನೀರು ಬರುವುದು ಗ್ಯಾರಂಟಿ

600ಕ್ಕೆ 600 ಅಂಕ ತೆಗೆದು ರಾಜ್ಯಕ್ಕೆ ಟಾಪರ್ ಆದ ದಿಶಾಳ ಸಾಧನೆಯ ಹಿಂದೆ ಎದೆ ನಡುಗಿಸುವ ಕಣ್ಣೀರಿನ ಕಥೆಯಿದೆ. ಮೂರು…

23 hours ago

ತೂಬಗೆರೆ ಸರ್ಕಾರಿ ಪಿಯು ಕಾಲೇಜಿಗೆ ಮತ್ತೊಮ್ಮೆ ಮೆರುಗು: ಶೇ.95.45 ಫಲಿತಾಂಶ

ದೊಡ್ಡಬಳ್ಳಾಪುರ (ತೂಬಗೆರೆ): ಗ್ರಾಮಾಂತರ ಭಾಗದಲ್ಲಿದ್ದರೂ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು…

24 hours ago