ಟಿವಿಎಸ್ ಎಕ್ಸ್‌ಎಲ್ ಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ವೃದ್ಧ ದಂಪತಿ ಸಾವನ್ನಪ್ಪಿರುವ ಘಟನೆ ಸೋಮವಾರ(ಡಿ.23) ಸಂಜೆ ಸುಮಾರು 6:30ರಲ್ಲಿ ತಾಲೂಕಿನ ಕನ್ನಮಂಗಲ ಗೇಟ್ ಬಳಿಯ ಪೆಟ್ರೋಲ್ ಬಂಕ್ ತಿರುವಿನಲ್ಲಿ ನಡೆದಿದೆ.
ಮೃತ ದುರ್ದೈವಿಗಳನ್ನು ರಾಮದೇವನಹಳ್ಳಿ ನಿವಾಸಿಗಳಾದ ಅನ್ನದಾನಪ್ಪ (66), ನಾಗರತ್ನಮ್ಮ (55) ಎಂದು ಗುರುತಿಸಲಾಗಿದೆ.
ಮೃತರು ನಿನ್ನೆ ಸಂಜೆ ಮಧುರೆ ಶನಿ ಮಹಾತ್ಮ ಸ್ವಾಮಿ ದೇವರ ದರ್ಶನ ಪಡೆಯಲು ರಾಮದೇವನಹಳ್ಳಿ ಗ್ರಾಮದಿಂದ ಬರುವ ವೇಳೆ ಕನ್ನಮಂಗಲ ಗೇಟ್ ಬಳಿಯ ಪೆಟ್ರೋಲ್ ಬಂಕ್ ತಿರುವಿನಲ್ಲಿ ಕ್ಯಾಂಟರ್ ಏಕಾಏಕಿ ಬಂದು ಡಿಕ್ಕಿ ಹೊಡೆದಿದೆ. ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ದಂಪತಿಯ ತಲೆಗೆ ತೀವ್ರ ಪೆಟ್ಟಾಗಿ ರಕ್ತ ಸ್ರಾವವಾಗಿತ್ತು. ಕೂಡಲೇ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಬ್ಬರು ಅಸುನೀಗಿದ್ದಾರೆ.
ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಜಗತ್ತು ದಿನದಿಂದ ದಿನಕ್ಕೆ ವೇಗವಾಗಿ ಬದಲಾಗುತ್ತಿದ್ದು, ಹೆಚ್ಚುತ್ತಿರುವ ಸ್ಪರ್ಧೆಯನ್ನು ಎದುರಿಸುವ ಸಾಮರ್ಥ್ಯವನ್ನು ಮಕ್ಕಳಲ್ಲಿ ಬೆಳೆಸಲು ಪೋಷಕರು ಹಾಗೂ ಶಿಕ್ಷಕರು ಒಟ್ಟಾಗಿ…
ಭಾರತೀಯರ ಆಹಾರ ವೈವಿಧ್ಯತೆ..... ರುಚಿ - ತೃಪ್ತಿ - ಸಮಾನತೆ..... ಅಡುಗೆ ಅನುಭವದ ಮೂಸೆಯೊಳಗೆ ಬೆಳೆದು ಬರುವ ವಿಜ್ಞಾನವೆಂಬ ಕಲೆ....…
2026-27 ಸಾಲಿಗೆ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಎಲೆಕ್ಟ್ರಾನಿಕ್ ಜಕಾರ್ಡ್ ಖರೀದಿ ಯೋಜನೆಯಡಿ ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ ಅರ್ಜಿಗಳನ್ನ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಕೊಡಿಪಾಳ್ಯ ಸಮೀಪ ಕ್ಯಾಂಟರ್‌ವೊಂದು ಪಲ್ಟಿಯಾಗಿ ಬಿದ್ದ ಘಟನೆ ನಡೆದಿದ್ದು, ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ.…
ಬೆಂಗಳೂರು ಗ್ರಾಮಾಂತರ: ಮೊಬೈಲ್ ಫೋನ್ ಕಳೆದುಹೋಗುವುದು ಅಥವಾ ಕಳ್ಳತನವಾಗುವುದು ಇಂದಿನ ಡಿಜಿಟಲ್ ಯುಗದಲ್ಲಿ ಆತಂಕದ ಸಂಗತಿಯಾಗಿದೆ. ಮೊಬೈಲ್ ಕೇವಲ ಸಂಪರ್ಕ…
ವಿರೋಧ ಪಕ್ಷದ ನಾಯಕನಾಗಿ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಅದನ್ನು ಬಿಟ್ಟು ಎಸ್‌ಐಆರ್‌ನಲ್ಲಿ ನಡೆದಿರುವ ಅಕ್ರಮಗಳ ಪರ ಮಾತನಾಡುವವರಿಗೆ ಯಾವ ಮರ್ಯಾದೆ ಇದೆ…